ಸರಕಾರಿ ಅಭಿಯೋಜಕರತ್ತ ಶೂ ಎಸೆತ

Team Udayavani, Apr 14, 2018, 8:15 AM IST

Shoe-Thrown-14-4.jpg

ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯದ 2 ದಶಕಗಳ ಇತಿಹಾಸದಲ್ಲಿ ಎ. 12ರ ಸಂಜೆ ಆಘಾತಕಾರಿ ಬೆಳವಣಿಗೆಯೊಂದು ನಡೆದಿದೆ. ಅತ್ಯಾಚಾರ ಆರೋಪ ಸಾಬೀತಾಗಿ 20 ವರ್ಷ ಜೈಲು ಶಿಕ್ಷೆಗೆ ಒಳಪಟ್ಟ ಅಪರಾಧಿ ನ್ಯಾಯಾಧೀಶರ ಎದುರೇ ಪೋಕ್ಸೋ ಕೋರ್ಟ್‌ನ ವಿಶೇಷ ಸರಕಾರಿ ಅಭಿಯೋಜಕರತ್ತ ಶೂ ಎಸೆದಿದ್ದಾನೆ. ಉಡುಪಿ ಜಿಲ್ಲೆಯ ನ್ಯಾಯಾಲಯದಲ್ಲಿ ಅಪರಾಧಿಯಿಂದ ಇಂತಹ ದುರ್ವರ್ತನೆಯ ಪ್ರಪ್ರಥಮ ಪ್ರಕರಣ ಇದು.

ಗುರುವಾರ ಸಂಜೆ 4.30ರ ಸಮಯ. ಪೋಕ್ಸೋ ಪ್ರಕರಣವಾದ್ದರಿಂದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೇ ಮುನ್ನಡೆಸುವ ಪೋಕ್ಸೋ ವಿಶೇಷ ಕೋರ್ಟ್‌ನಲ್ಲಿ ಕುಂದಾಪುರದ 35/14ರ ಸ್ಪೆಶಲ್‌ ಕೇಸ್‌ನ ವಿಚಾರಣೆ ಮುಕ್ತಾಯದ ಹಂತದಲ್ಲಿತ್ತು. ಪ್ರಕರಣದ 15 ಸಾಕ್ಷಿಗಳ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಆರೋಪಿಗೆ ಶಿಕ್ಷೆ ಪ್ರಕಟಿಸುತ್ತಿದ್ದಂತೆಯೇ ಅಪರಾಧಿ ಬ್ರಹ್ಮಾವರ ಆರೂರು ಗ್ರಾಮ ಕೀರ್ತಿನಗರದ ಪ್ರಶಾಂತ್‌ (25) ಬೈಯುತ್ತಾ ತನ್ನ ಎರಡೂ ಶೂ ತೆಗೆದು ವಿಶೇಷ ಸರಕಾರಿ ಅಭಿಯೋಜಕ (ಪೋಕ್ಸೋ) ವಿಜಯ ವಾಸು ಪೂಜಾರಿ ಅವರ ಮೇಲೆ ಎಸೆದಿದ್ದಾನೆ. ‘ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ’ ಎಂದೂ ಹೇಳಿದ್ದಾನೆ.

20 ವರ್ಷ ಜೈಲು; 25 ಸಾವಿರ ದಂಡ

ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ, 25 ಸಾವಿರ ದಂಡವನ್ನು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಟಿ. ವೆಂಕಟೇಶ್‌ ನಾಯ್ಕ ಪ್ರಕಟಿಸಿದ್ದರು. ವಿಶೇಷ ಅಭಿಯೋಜಕರು ಮಾಡಿದ ವಾದದ ಪರಿಣಾಮದಿಂದ ತನಗೆ ಇಷ್ಟು ಕಠಿನ ಶಿಕ್ಷೆಯಾಯಿತೆಂದು ಕೋಪಗೊಂಡ ಪ್ರಶಾಂತನು ವಕೀಲರು, ಪೊಲೀಸರ ಸಮ್ಮುಖದಲ್ಲಿಯೇ ತೆರೆದ ಕೋರ್ಟ್‌ನಲ್ಲಿ ಅಭಿಯೋಜಕರ ಮೇಲೆ ಶೂ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾನೆ.

‘ಇದು ನನ್ನ ಮೇಲೆ ಪೆಟ್ಟಲ್ಲ. ನ್ಯಾಯಾಂಗ ವ್ಯವಸ್ಥೆಯ ಮೇಲಿನ ಪೆಟ್ಟು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ವಿಶೇಷ ಸರಕಾರಿ ಅಭಿಯೋಜಕರು ನ್ಯಾಯಾಧೀಶರಲ್ಲಿ ಕೋರಿದ್ದಾರೆ. ನ್ಯಾಯಾಧೀಶರು ಕೂಡ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕ್ಕೆ ಎಸ್‌ಪಿಗೆ ನಿರ್ದೇಶ ಕೊಟ್ಟಿದ್ದಾರೆ. ಪೊಲೀಸ್‌ ಅಧಿಕಾರಿಗಳು ಎ. 13ರ ಬೆಳಗ್ಗೆ ನ್ಯಾಯಾಧೀಶರ ಅನುಮತಿ ಪಡೆದು ಶೂ ಅನ್ನು ವಶಕ್ಕೆ ಪಡೆದು ಮಹಜರು ನಡೆಸಿದ್ದಾರೆ. ಪ್ರಶಾಂತ ಬ್ರಹ್ಮಾವರ ಠಾಣೆ ವ್ಯಾಪ್ತಿಯ ಕೊಲೆ ಪ್ರಕರಣದ ಆರೋಪಿ. ಮತ್ತೂ ಹಲವು ಪ್ರಕರಣ ಗಳು ಈತನ ಮೇಲಿದೆ. ಈ ಹಿನ್ನೆಲೆಯಲ್ಲಿ ಘಟನೆಯನ್ನು ಪೊಲೀಸ್‌ ಇಲಾಖೆಯೂ ಗಂಭೀರವಾಗಿ ಪರಿಗಣಿಸಿದೆ. ಆರೋಪಿಯನ್ನು ಕಾರವಾರ ಜೈಲಿಗೆ ಒಯ್ಯಲಾಗಿದೆ.

ಬಾಲಕಿಯ ಅತ್ಯಾಚಾರ ಪ್ರಕರಣ
2013ರ ಫೆ. 17ರಂದು ಕೋಟೇಶ್ವರದ 15ರ ಹರೆಯದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದ ಆರೋಪಿ ಪ್ರಶಾಂತನು ಪೆರ್ಡೂರು ಪಾಡಿಗಾರದ ತನ್ನ ಸಂಬಂಧಿಕರ ಮನೆಗೊಯ್ದು ಫೆ. 18ರ ಬೆಳಗ್ಗೆ ಅತ್ಯಾಚಾರವೆಸಗಿದ್ದ. ಕುಂದಾಪುರ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿ, ತನಿಖೆ ನಡೆಸಿ ಅಂದಿನ ಸರ್ಕಲ್‌ ಇನ್ಸ್‌ಪೆಕ್ಟರ್‌ ಪಿ.ಎಂ. ದಿವಾಕರ್‌ ಅವರು ಚಾರ್ಜ್‌ಶೀಟ್‌ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪ್ರಕರಣ ಸಾಬೀತಾಗಿ ಇದೀಗ ಆರೋಪಿಗೆ 20 ವರ್ಷ ಜೈಲಾಗಿದೆ.

ಎದೆಗುಂದಿಲ್ಲ; ಕರ್ತವ್ಯ ಮುಂದುವರಿಸುವೆ 
ಇದೊಂದು ಆತಂಕಕಾರಿ ಘಟನೆ ಹೌದು. ನ್ಯಾಯದ ಪರ ತೀರ್ಪಾಗಿದೆ. ನೊಂದ ಬಾಲಕಿಗೆ ಇಲ್ಲಿ ನ್ಯಾಯ ಸಿಕ್ಕಿದೆ. ನನ್ನ ಮೇಲೆ ಶೂ ಎಸೆದು ಕೋರ್ಟಿನೊಳಗೆ ಅವಮಾನಿಸಿ ಜೀವಬೆದರಿಕೆಯನ್ನೂ ಅಪರಾಧಿ ಒಡ್ಡಿದ್ದಾನೆ. ಪೊಲೀಸ್‌ ದೂರು ಕೊಟ್ಟಿದ್ದೇನೆ. ನನ್ನ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಿರುವ ಹೆಮ್ಮೆ ನನಗಿದೆ. ನೊಂದವರಿಗೆ ನ್ಯಾಯಕ್ಕಾಗಿ ಮುಂದೆಯೂ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ.
– ವಿಜಯ ವಾಸು ಪೂಜಾರಿ, ಸರಕಾರಿ ಅಭಿಯೋಜಕ (ಪೋಕ್ಸೋ). 

ಸಭೆ ನಡೆಸಿ ತೀರ್ಮಾನ 
ವಿಶೇಷ ಅಭಿಯೋಜಕರು ಲಿಖೀತವಾಗಿ ವಿಷಯ ತಿಳಿಸಿದ ಬಳಿಕ ವಕೀಲರ ಸಂಘವು ತುರ್ತು ಸಭೆ ನಡೆಸಿ ತೀರ್ಮಾನಕ್ಕೆ ಬರುತ್ತದೆ.ಈವರೆಗೆ ಇಂತಹ ಪ್ರಕರಣ ಆಗಿಲ್ಲ. ಮೊದಲ ಪ್ರಕರಣವಾಗಿರುವ ಕಾರಣ ಹೇಗೆ, ಯಾವ ರೀತಿಯಲ್ಲಿ ನಿರ್ಧಾರ ತೆಗೆದುಕೊಳ್ಳಬೇಕೆನ್ನುವ ಬಗ್ಗೆ ಚರ್ಚಿಸಲಾಗುವುದು.
– ಸಂತೋಷ್‌ ಹೆಬ್ಟಾರ್‌, ವಕೀಲರ ಸಂಘದ ಕಾರ್ಯದರ್ಶಿ. 

ತನಿಖೆ ನಡೆಯುತ್ತಿದೆ 
ಅಭಿಯೋಜಕರು ಉಡುಪಿ ನಗರ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಮಹಜರು ನಡೆಸಲಾಗಿದೆ. ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಆಂತರಿಕ ಭದ್ರತೆ ಕೊಡುವ ಬಗ್ಗೆ ಪರಿಶೀಲನೆ ನಡೆಸಿ ತೀರ್ಮಾನಕ್ಕೆ ಬರಲಾಗುವುದು. 
– ಲಕ್ಷ್ಮಣ ಬ. ನಿಂಬರಗಿ, ಪೊಲೀಸ್‌ ವರಿಷ್ಠಾಧಿಕಾರಿ.

ಟಾಪ್ ನ್ಯೂಸ್

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.