ಕೋವಿಡ್‌ ಮುನ್ನೆಚ್ಚರಿಕೆ ಎಲ್ಲರಲ್ಲೂ ಇರಲಿ; ಉಡುಪಿಯಲ್ಲಿ ಇಂದು, ನಾಳೆ ಪರ್ಯಾಯ ಸಂಭ್ರಮ


Team Udayavani, Jan 17, 2022, 6:45 AM IST

ಕೋವಿಡ್‌ ಮುನ್ನೆಚ್ಚರಿಕೆ ಎಲ್ಲರಲ್ಲೂ ಇರಲಿ; ಉಡುಪಿಯಲ್ಲಿ ಇಂದು, ನಾಳೆ ಪರ್ಯಾಯ ಸಂಭ್ರಮ

ಉಡುಪಿ: ಶ್ರೀ ಕೃಷ್ಣಾಪುರ ಮಠದ ಪರ್ಯಾಯೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಾಂಪ್ರದಾಯಿಕವಾಗಿ ಸರಳ ರೀತಿಯಲ್ಲಿ ಪರ್ಯಾಯೋತ್ಸವ ನಡೆದರೂ ಸಾರ್ವಜನಿಕರು, ಭಕ್ತರು ಕನಿಷ್ಠ ಸಂಖ್ಯೆಯಲ್ಲಾದರೂ ಸೇರಲಿದ್ದಾರೆ. ಕೊರೊನಾ ನಿಯಮ ಪಾಲನೆಯ ಸೂಚನಾ ಫ‌ಲಕಗಳನ್ನು ಶ್ರೀಕೃಷ್ಣ ಮಠದ ಸುತ್ತಲೂ ಅಳವಡಿಸಲಾಗಿದೆ. ಜನರು ಕೂಡ ಕೊರೊನಾ ನಿಯಮಾವಳಿ ಪಾಲಿಸುವುದು ಅವಶ್ಯವಾಗಿದೆ.

ಶ್ರೀ ಕೃಷ್ಣಾಪುರ ಮಠದ ಪರ್ಯಾಯೋತ್ಸವ ಸಮಿತಿ ಹಾಗೂ ಜಿಲ್ಲಾಡಳಿತದ ನಡುವೆ ಈಗಾಗಲೇ ಹಲವು ಸುತ್ತಿನ ಚರ್ಚೆಗಳು ನಡೆದಿವೆ. ಸಮಿತಿಯಿಂದ ರಥಬೀದಿ, ರಾಜಾಂಗಣ, ಶ್ರೀಕಷ್ಣ ಮಠದ ಒಳಗಡೆ ಹೀಗೆ ಸುತ್ತಲೂ ಕೊರೊನಾ ಮುನ್ನೆಚ್ಚರಿಕೆಗೆ ಸಂಬಂಧಿಸಿದ ಸೂಚನ ಫ‌ಲಕಗಳನ್ನು ಅಳ ವಡಿಸಲಾಗಿದೆ. ಇದರ ಆಧಾರ ದಲ್ಲಿಯೇ ಸಾರ್ವಜನಿಕರು, ಭಕ್ತರು ನಿಯಮಗಳನ್ನು ಕಡ್ಡಾಯವಾಗಿ ಸ್ವಯಂ ಪ್ರೇರಣೆಯಿಂದಲೇ ಪಾಲಿಸ ಬೇಕು. 2 ಡೋಸ್‌ ಹಾಕಿ ಕೊಂಡವರು ಮಾತ್ರ ಉತ್ಸವಕ್ಕೆ ಬರಬೇಕು. ಜ್ವರ, ಶೀತ, ಕೆಮ್ಮು ಮೊದಲಾದ ರೋಗ ಲಕ್ಷಣ ಇರುವವರು ಬರು ವುದು ಬೇಡ ಎಂದು ಸಮಿತಿ ಈಗಾಗಲೇ ಮನವಿ ಮಾಡಿ ಕೊಂಡಿದೆ. ಅದರಂತೆ ಸಾರ್ವಜನಿಕರು ಅನುಸರಿ ಸುವುದು ಅತಿಮುಖ್ಯವಾಗಿದೆ.

ಲಸಿಕೆ ಕೇಂದ್ರ
ರಥಬೀದಿಯಲ್ಲಿ ಕೊರೊನಾ ಲಸಿಕೆ ಕೇಂದ್ರ ಮತ್ತು ಪ್ರಥಮ ಚಿಕಿತ್ಸಾ ಘಟಕವನ್ನು ತೆರೆಯಲಾಗಿದೆ. ಮಠಕ್ಕೆ ಬರುವವರು ಲಸಿಕೆ ಪಡೆಯಲು ಅನುಕೂಲ ಆಗುವಂತೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಈ ವ್ಯವಸ್ಥೆ ಮಾಡ ಲಾಗಿದೆ. ಜತೆಗೆ ತುರ್ತು ಚಿಕಿತ್ಸೆ ಮತ್ತು ಆ್ಯಂಬುಲೆನ್ಸ್‌ ಸಿದ್ಧಪಡಿಸಿಕೊಳ್ಳಲಾಗಿದೆ.

ಸರಳ ಪರ್ಯಾಯಕ್ಕೆ ಸಮಿತಿ ಮನವಿ
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಸೋಮವಾರ ರಾತ್ರಿ, ಮಂಗಳವಾರ ಬೆಳಗ್ಗೆ ನಡೆಯುವ ಪರ್ಯಾಯ ಪೀಠಾರೋಹಣ ಕಾರ್ಯಕ್ರಮವನ್ನು ಕೊರೊನಾ ಸೋಂಕಿನ ಕಾರಣದಿಂದ ಸರಳ ರೀತಿಯಲ್ಲಿ ಆಚರಿಸಲು ಭಾವೀ ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಆಶಯದಂತೆ ಉತ್ಸವ ಸಮಿತಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಮೆರವಣಿಗೆಗೆ ಆಹ್ವಾನಿಸಲಾದ ಸುಮಾರು 40 ಜನಪದ ಕಲಾವಿದರ ತಂಡಗಳ ಕಾರ್ಯಕ್ರಮಗಳನ್ನು ರದ್ದುಪಡಿಸ ಲಾಗಿದೆ. ಸಾಂಪ್ರದಾಯಿಕವಾದ ವಾದ್ಯ, ಬ್ಯಾಂಡ್‌, ಚೆಂಡೆ, ಡೊಳ್ಳು ವಾದನಗಳು ಮಾತ್ರ ಇರಲಿವೆ. ಸ್ವಾಮೀಜಿಯವರು ಪಾಲ್ಗೊಳ್ಳುವ ಅಲಂಕೃತ ವಾಹನಗಳು ಮತ್ತು ಕೆಲವು ಟ್ಯಾಬ್ಲೋಗಳಿಗೆ ಮಾತ್ರ ಅವಕಾಶ ನೀಡಲು ರವಿವಾರ ಸಮಿತಿ ಕಾರ್ಯಾಧ್ಯಕ್ಷ ಶಾಸಕ ಕೆ. ರಘುಪತಿ ಭಟ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆ ನಿರ್ಣಯ ಕೈಗೊಂಡಿದೆ.

ಸಾರ್ವಜನಿಕರು ಮೆರವಣಿಗೆಯಲ್ಲಿ ಪಾಲ್ಗೊಳ್ಳದೆ ನೇರ ಪ್ರಸಾರದಲ್ಲಿ ವೀಕ್ಷಿಸಬೇಕು. ಮೆರವಣಿಗೆ ಸಾಗುವ ಇಕ್ಕೆಲಗಳಲ್ಲಿ ನೂಕುನುಗ್ಗಲು ಮಾಡಬಾರದು. ಪಾಲ್ಗೊಳ್ಳು ವವರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಬೇಕು ಎಂದು ಸಮಿತಿ ವಿನಂತಿಸಿದೆ.

ಪರ್ಯಾಯೋತ್ಸವ ಸಮಿತಿಯ ಜತೆಗೆ ಈಗಾಗಲೇ ಮಾತುಕತೆ ನಡೆಸಿದ್ದೇವೆ. ಸರಳ ರೀತಿಯಲ್ಲಿ ಉತ್ಸವ ನಡೆಯಲಿದೆ. ತಪಾಸಣೆಗೆ ಹೆಚ್ಚುವರಿ ಸಿಬಂದಿ ನೀಡಲು ಜಿಲ್ಲಾಡಳಿತ ಸಿದ್ಧವಿದೆ. ಮುನ್ನೆಚ್ಚರಿಕೆ ವಿಚಾರವಾಗಿ ಸಮಿತಿಯೇ ಎಲ್ಲವನ್ನೂ ನೋಡಿಕೊಳ್ಳಲಿದೆ.
– ಕೂರ್ಮಾರಾವ್‌ ಎಂ.,
ಜಿಲ್ಲಾಧಿಕಾರಿ ಉಡುಪಿ

ಪರ್ಯಾಯೋತ್ಸವದ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ತೆಗೆದು ಕೊಂಡಿದ್ದೇವೆ. ಮಠದ ಸುತ್ತಲೂ ಕೊರೊನಾ ನಿಯಮ ಪಾಲನೆಯ ಸೂಚನ ಫ‌ಲಕ ಗಳನ್ನು ಅಳವಡಿಸಿದ್ದೇವೆ. ಎರಡು ಲಸಿಕೆ ಪಡೆ ದವರಿಗೆ ಮಾತ್ರ ಪ್ರವೇಶ ಎಂಬ ಸಂದೇಶವನ್ನು ನೀಡಿದ್ದೇವೆ.
– ವಿಷ್ಣು ಪ್ರಸಾದ್‌ ಪಾಡಿಗಾರ್‌,
ಪ್ರಧಾನ ಕಾರ್ಯದರ್ಶಿ,
ಶ್ರೀಕೃಷ್ಣ ಪರ್ಯಾಯೋತ್ಸವ ಸಮಿತಿ

 

ಟಾಪ್ ನ್ಯೂಸ್

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.