ಸಖೀ ಒನ್‌ ಸ್ಟಾಪ್‌ ಸೆಂಟರ್‌, ಸ್ಟೇಟ್‌ ಹೋಮ್‌ಗೆ ಶ್ಯಾಮಲಾ ಕುಂದರ್‌ ಭೇಟಿ

Team Udayavani, Aug 13, 2019, 5:52 AM IST

1008UDPS3

ಉಡುಪಿ: ಕೇಂದ್ರ ಸರಕಾರದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಶ್ಯಾಮಲಾ ಎಸ್‌. ಕುಂದರ್‌ ಅವರು ನಿಟ್ಟೂರಿನಲ್ಲಿರುವ ಸಖೀ ಒನ್‌ ಸ್ಟಾಪ್‌ ಸೆಂಟರ್‌ ಮತ್ತು ಸ್ಟೇಟ್‌ ಹೋಮ್‌ಗೆ ಭೇಟಿ ನೀಡಿ ಅಲ್ಲಿನ ಮೂಲಸೌಕರ್ಯ ಮತ್ತು ಸವಲತ್ತುಗಳನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಅನಂತರ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಗೆಳತಿ ಸಹಾಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯ ಇನ್ನೊಂದು ಪಾರ್ಶ್ವದಲ್ಲಿ ಎರಡನೆಯ ಮಹಡಿಯ ಕೊನೆಯಲ್ಲಿರುವ ಗೆಳತಿ ಕೇಂದ್ರವು ಆಸ್ಪತ್ರೆಯ ಪ್ರವೇಶ ದ್ವಾರದಿಂದ ಬಹಳ ದೂರದಲ್ಲಿದ್ದು, ಸರಿಯಾದ ಸೂಚನಾ ಫ‌ಲಕಗಳನ್ನು ಅಳವಡಿಸದೆ ಇರುವುದನ್ನು ಗಮನಿಸಿದರು. ಇಂತಹ ಅವ್ಯವಸ್ಥೆಯು ಅಗತ್ಯವಿರುವ ನಾಗರಿಕರಿಗೆ ಯಾವುದೇ ರೀತಿಯ ಪ್ರಯೋಜನ ನೀಡುವುದಿಲ್ಲ. ಜಿಲ್ಲಾ ಆಸ್ಪತ್ರೆಯಲ್ಲಿರುವ ಗೆಳತಿ ಕೇಂದ್ರದ ಮಾಹಿತಿಯು ಬಹುತೇಕ ಜನರಿಗೆ ತಿಳಿದಿಲ್ಲ ಎಂದು ಖೇದ ವ್ಯಕ್ತಪಡಿಸಿದರು.

ತರಬೇತಿಗೆ ಸೂಚನೆ
ಜಿಲ್ಲಾ ಆಸ್ಪತ್ರೆಯಲ್ಲಿರುವ ಗೆಳತಿ ಕೇಂದ್ರಕ್ಕೆ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿ ನಿರ್ವಹಿಸುವ ಮಹಿಳಾ ಕಾರ್ಮಿಕರ ಮತ್ತು ಅವರ ಮಕ್ಕಳ ಯೋಗಕ್ಷೇಮದ ಮಾಹಿತಿ ಪಡೆದರು. ಕೇಂದ್ರ ಸರಕಾರದ ಮಹಿಳಾ ಅಭಿವೃದ್ಧಿ ಮತ್ತು ಮಹಿಳಾ ಸಶಕ್ತೀಕರಣ ಯೋಜನೆಗಳ ಕುರಿತು ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ಒಂದು ದಿನದ ಮಾಹಿತಿ ಮತ್ತು ತರಬೇತಿ ಕಾರ್ಯಾಗಾರವನ್ನು ಉಭಯ ಜಿಲ್ಲೆಗಳ ಗ್ರಾಮ-ತಾಲೂಕು-ಜಿ.ಪಂ.ಗಳ ಮಹಿಳಾ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸಮಾಜ ಸೇವಾ ಕಾರ್ಯಕರ್ತರು, ಶಾಲಾ ಕಾಲೇಜುಗಳ ವಿದ್ಯಾರ್ಥಿನಿಯರು, ಎನ್‌ಜಿಒಗಳ ಸದಸ್ಯರು, ಹಾಗೂ ಇನ್ನಿತರ ಸಂಘ-ಸಂಸ್ಥೆಗಳ ಮಹಿಳಾ ಸದಸ್ಯರಿಗೆ ಶೀಘ್ರದಲ್ಲಿ ಆಯೋಜಿಸಬೇಕು ಎಂದು ಸೂಚಿಸಿದರು. ಬೇಟಿ ಬಚಾವೋ ಬೇಟಿ ಪಡಾವೋ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯ ಸದಸ್ಯ ಪ್ರೊ| ಶ್ರೀನಾಥ್‌ ರಾವ್‌, ವಿವಿಧ ಇಲಾಖೆಗಳ ನಿರ್ದೇಶಕರು, ಉಪನಿರ್ದೇಶಕರು, ಹಿರಿಯ ಅಧಿಕಾರಿಗಳು, ಸಮನ್ವಯಕಾರರು ಮತ್ತು ಸಿಬಂದಿ ವಿಚಾರ ವಿನಿಮಯ ಮಾಡಿದರು.

ಅಧಿಕಾರಿಗಳೊಂದಿಗೆ ಸಭೆ
ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ವಿದ್ಯಾ ಕುಮಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಸೇವಾ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ರಾಷ್ಟ್ರೀಯ ಮಹಿಳಾ ಆಯೋಗವು ನೂತನವಾಗಿ ದೇಶಾದ್ಯಂತ ಪ್ರತೀ ಗ್ರಾಮದಲ್ಲಿ ಆಯೋಜಿಸಲಿರುವ ನಾರೀ ಅದಾಲತ್‌ ಕುರಿತು ಮಾಹಿತಿ ನೀಡಿದರು. ಸಾಂತ್ವನ ಕೇಂದ್ರದ ಮೂಲಕ ನೀಡಲಾಗುತ್ತಿರುವ ಸೇವೆಗಳು, ಬಗೆಹರಿಸಲ್ಪಟ್ಟ ದೂರುಗಳು, ಕೆಡಿಪಿ ಸಭೆಗಳು, ಮಾತೃ ಪೂರ್ಣ, ಗೊಂಚಲು ಸಭೆ, ಪೋಕ್ಸೋಕಾಯ್ದೆ ಮತ್ತು ಬೇಟೀ ಬಚಾವೋ ಬೇಟೀ ಪಡಾವೋ ಅಭಿಯಾನಗಳ ಕುರಿತು ಚರ್ಚೆ ನಡೆಸಿದರು.

ಟಾಪ್ ನ್ಯೂಸ್

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Women’s Ashes Series: Big Fight between Australia-England

Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್‌ ಬಿಗ್‌ ಫೈಟ್‌

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

10(1

Santhekatte: ಉಡುಪಿಯಿಂದ ಕುಂದಾಪುರ ಕಡೆಗೆ ಸರ್ವಿಸ್‌ ರಸ್ತೆ ಓಪನ್‌

9

Manipal: ಮಣ್ಣಪಳ್ಳ ಕೆರೆ; ಆಕರ್ಷಕ ಜಲಸಿರಿಗೆ ಬೇಕು ಆಸರೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Two more children test positive for HMP virus: Number of cases in the country rises to 7

HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್‌: ದೇಶದಲ್ಲಿ 7ಕ್ಕೇರಿದ ಕೇಸ್‌

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಭಾರತದ 21 ಸ್ಪರ್ಧಿಗಳು ಭಾಗಿ

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಭಾರತದ 21 ಸ್ಪರ್ಧಿಗಳು ಭಾಗಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.