ಸಿದ್ದಾಪುರ: ಇನ್ನೂ ಈಡೇರದ ಸರ್ಕಲ್‌ ಬೇಡಿಕೆ

ಸರಕಾರದ ಮೇಲೆ ನಾಗರಿಕರ ಅಸಮಾಧಾನ;ಸರ್ಕಲ್‌ ನಿರ್ಮಾಣಕ್ಕಾಗಿ ಹೆಚ್ಚುತ್ತಿದೆ ಹೋರಾಟದ ಕೂಗು

Team Udayavani, Dec 26, 2019, 5:34 AM IST

1812SIDE3A-SIDDAPURA-CIRCLE

ಸಿದ್ದಾಪುರ: ಕುಂದಾಪುರ ತಾಲೂಕಿನಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರ ಸಿದ್ದಾಪುರವು ಗ್ರಾಮೀಣ ಭಾಗಗಳ ಹತ್ತಾರು ಹಳ್ಳಿಗಳ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದರೂ ಇಲ್ಲೊಂದು ಸುಸಜ್ಜಿತವಾದ ಸರ್ಕಲ್‌ ನಿರ್ಮಾಣ ಇನ್ನೂ ಈಡೇರಿಲ್ಲ. ಮನವಿ ಸಲ್ಲಿಸಿದ್ದರೂ, ಬೇಡಿಕೆ ಇನ್ನೂ ಈಡೇರದ ಕಾರಣ ಸರಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ನಾಗರಿಕರ ಆಕ್ರೋಶ ದಿನೇ ದಿನೇ ಹೆಚ್ಚಾಗುತ್ತಿದೆ.

ಪ್ರತಿದಿನ ಸುಮಾರು ಮೂರು ಸಾವಿರಕ್ಕೂ ಹೆಚ್ಚು ವಾಹನ ಓಡಾಟ ಇರುವ ಸಿದ್ದಾಪುರ ಪೇಟೆಗೆ ಸುಸಜ್ಜಿತ ಸರ್ಕಲ್‌ ಅತ್ಯಗತ್ಯ. ಸರ್ಕಲ್‌ ನಿರ್ಮಾಣಕ್ಕಾಗಿ ಸ್ಥಳೀಯ ಮಟ್ಟದ ಜನಪ್ರತಿನಿಧಿಗಳು ಹಾಗೂ ಇಲಾಖೆಯಿಂದ ಹಿಡಿದು ಮುಖ್ಯಮಂತ್ರಿಯ ತನಕ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಸಿದ್ದಾಪುರ ಪೇಟೆಗೆ ಒಂದು ಕಡೆಯಿಂದ ಕುಂದಾಪುರ ಹಾಗೂ ಶಿವಮೊಗ್ಗ ರಾಜ್ಯ ಹೆದ್ದಾರಿ ಬಂದು ಸೇರಿದರೆ, ಇನ್ನೊಂದು ಕಡೆಯಿಂದ ಮಂಗಳೂರು ಹಾಗೂ ಉಡುಪಿ ಜಿಲ್ಲೆಯನ್ನು ದಾವಣಗೆರೆಗೆ ಬೆಸೆಯುವ ಪ್ರಮುಖ ಹೆದ್ದಾರಿ ಬಂದು ಸೇರುತ್ತದೆ. ಇದರ ಪರಿಣಾಮ ಪೇಟೆಯ ಸರ್ಕಲ್‌ನಲ್ಲಿ ವಾಹನಗಳ ದಟ್ಟಣೆಯಿಂದ ಪ್ರತಿನಿತ್ಯ ಟ್ರಾಫಿಕ್‌ ಜಾಮ್‌ನೊಂದಿಗೆ ಸಣ್ಣಪುಟ್ಟ ಅಪಘಾತಗಳು ನಡೆಯುತ್ತಿರುತ್ತವೆ. ಭಾರೀ ಗಾತ್ರದ ವಾಹನಗಳಿಗೆ ಇಲ್ಲಿ ಸಂಚಾರ ನಿರ್ಬಂಧ ಇದ್ದರೂ, ಈ ಹೆದ್ದಾರಿಯ ಮೂಲಕ ಸಾಗುತ್ತಿವೆ.

ಅಪಘಾತ ಸ್ಥಳ
ಬೆಳಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಸರ್ಕಲ್‌ನಲ್ಲಿ ನಾನಾ ಭಾಗಗಳಿಗೆ ಹೋಗುವ ಶಾಲಾ ಕಾಲೇಜು ವಾಹನಗಳು, ನಿತ್ಯ ಕಚೇರಿ ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ತೆರಳುವ ವಾಹನ ಸವಾರರಿಂದ ಟ್ರಾಫಿಕ್‌ ಜಾಮ್‌ ಉಂಟಾಗುತ್ತದೆ. ಈ ಸಂದರ್ಭ ಜನಜಂಗುಳಿಯೂ ಇರುತ್ತದೆ. ಈ ಸಂದರ್ಭದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಭಾರೀ ಅನಾಹುತ ನಡೆಯುವ ಸಾಧ್ಯತೆ ಇದೆ. ಈಗಿರುವ ಸರ್ಕಲ್‌ ಚಿಕ್ಕದಾಗಿದ್ದು, ಸಿ.ಸಿ. ಕೆಮೆರಾ ಹೊರತುಪಡಿಸಿ ಸಿಗ್ನಲ್‌ ಜತೆಗೆ ಯಾವುದೇ ದೊಡ್ಡ ಮಟ್ಟದ ನಾಮಫಲಕ ಇಲ್ಲದಿರುವುದರಿಂದ ಅಪಾಯಕ್ಕೆ ಅಹ್ವಾನ ನೀಡುತ್ತಿದೆ. ಇರುವ ಸಣ್ಣ ಸರ್ಕಲ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಅನ್ನುವಂತಾಗಿದೆ.

ಗ್ರಾ.ಪಂ.ಗಳು, ಜಯಕರ್ನಾಟಕ ಸಂಘಟನೆ ಹೋರಾಟ
ಸಿದ್ದಾಪುರದಲ್ಲಿ ಒಂದು ಸುಸಜ್ಜಿತವಾದ ಸರ್ಕಲ್‌ ನಿರ್ಮಾಣವಾಗಬೇಕೆಂದು ಸಿದ್ದಾಪುರ, ಉಳ್ಳೂರು-74, ಶಂಕರನಾರಾಯಣ, ಹೊಸಂಗಡಿ, ಯಡಮೊಗೆ, ಆಜ್ರಿ, ಹಳ್ಳಿಹೊಳೆ, ಅಮಾಸೆಬೈಲು, ಅಂಪಾರು ಪಂಚಾಯತ್‌ನವರು ಸಭೆಯಲ್ಲಿ ನಿರ್ಣಯ ಮಾಡಿ, ಈಗಾಗಲೇ ಜಿಲ್ಲಾ ಪಂಚಾಯತ್‌ ಮೂಲಕ ರಾಜ್ಯ ಸರಕಾರಕ್ಕೆ ಬೇಡಿಕೆ ಸಲ್ಲಿಸಿದ್ದಾರೆ.

ಜಯಕರ್ನಾಟಕ ಸಂಘಟನೆ ಸ್ಥಳೀಯ ಸಂಘಸಂಸ್ಥೆಗಳ ಹಾಗೂ ಸಿದ್ದಾಪುರ ಸುತ್ತಮುತ್ತಲಿನ ಗ್ರಾ.ಪಂ.ಗಳ ನಿರ್ಣಯ ಪ್ರತಿಗಳೊಂದಿಗೆ ಲೋಕೋಪಯೋಗಿ ಇಲಾಖೆ, ಜಿಲ್ಲಾಡಳಿತ, ಜನಪ್ರತಿನಿಧಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು, ಸರ್ಕಲ್‌ ನಿರ್ಮಾಣವಾಗದಿದ್ದಲ್ಲಿ ಸಂಘಟನೆಯ ಮೂಲಕ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಹೋರಾಟ ಸಮಿತಿ ರಚನೆ
ಸುಗಮ ಸಂಚಾರಕ್ಕಾಗಿ ಸಿದ್ದಾಪುರದಲ್ಲಿ ಒಂದು ಸುಸಜ್ಜಿತವಾದ ಸರ್ಕಲ್‌ ನಿರ್ಮಾಣ ಮಾಡ ಬೇಕೆಂಬ ಸಾಮಾಜಿಕ ಕಾಳಜಿ ಹೊಂದಿರುವ ಸಿದ್ದಾಪುರ ನಾಗರಿಕರು ಸರ್ಕಲ್‌ ನಿರ್ಮಾಣ ಹೋರಾಟ ಸಮಿತಿಯನ್ನು ರಚಿಸಿಕೊಂಡು ನಿರಂತರ ಹೋರಾಟ ನಡೆಸುತ್ತಿದ್ದು, ಶೀಘ್ರ ಸ್ಪಂದನೆಯ ಆಶಾಭಾವನೆಯಲ್ಲಿದ್ದಾರೆ.

ಇಲಾಖೆಗೆ ಮನವಿ
ಸಾರ್ವಜನಿಕ ಸುರಕ್ಷೆಗಾಗಿ ಸಿದ್ದಾಪುರದಲ್ಲಿ ಒಂದು ಸುಸಜ್ಜಿತವಾದ ಸರ್ಕಲ್‌ ನಿರ್ಮಾಣವಾಗಬೇಕು. ನಿರ್ಮಾಣದ ಬಗ್ಗೆ ಗ್ರಾ.ಪಂ. ನಿರ್ಣಯದೊಂದಿಗೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಲಾಗಿದೆ. ಇದರ ಬಗ್ಗೆ ಕ್ಷೇತ್ರ ಶಾಸಕರ ಗಮನಕ್ಕೆ ತರಲಾಗಿದೆ. ಶಾಸಕರು ಮುಖ್ಯಮಂತ್ರಿ ಹಾಗೂ ಸಂಸದರ ಜತೆಯಲ್ಲಿ ಚರ್ಚಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಸರ್ಕಲ್‌ ನಿರ್ಮಾಣ ಮಾಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು.
-ರೋಹಿತ್‌ಕುಮಾರ ಶೆಟ್ಟಿ
ಸದಸ್ಯ ಜಿ.ಪಂ. ಸಿದ್ದಾಪುರ

ಮೇಲಧಿಕಾರಿಗಳಿಗೆ ತಿಳಿಸಲಾಗಿದೆ
ಸರ್ಕಲ್‌ ನಿರ್ಮಾಣದ ಬಗ್ಗೆ ಜನಪ್ರತಿನಿಧಿ ಗಳಿಂದ ಹಾಗೂ ಸಾರ್ವಜನಿಕ ಬೇಡಿಕೆಗಳು ಬಂದಿವೆ. ಈ ಕುರಿತು ಶಾಸಕರಿಗೆ ಹಾಗೂ ಇಲಾಖೆಯ ಮೇಲಧಿಕಾರಿಗಳಿಗೆ ಸಾರ್ವಜನಿಕರ ಪತ್ರ ಕಳುಹಿಸಲಾಗಿದೆ. ಸೂಕ್ತ ಉತ್ತರ ಬಂದ ಮೇಲೆ ಸುಸಜ್ಜಿತವಾದ ಸರ್ಕಲ್‌ ನಿರ್ಮಿಸುತ್ತೇವೆ.
-ದುರ್ಗಾದಾಸ್‌, ಎಂಜಿನಿಯರ್‌ ಲೋಕೋಪಯೋಗಿ ಇಲಾಖೆ ಕುಂದಾಪುರ ವಿಭಾಗ

ಉಗ್ರ ಹೋರಾಟ
ಸಿದ್ದಾಪುರ ಪೇಟೆಯ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಸಣ್ಣಪುಟ್ಟ ಅಪಘಾತಗಳು ನಡೆಯುತ್ತಿವೆ. ಅಲ್ಲದೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ದಾಟಲು ಕಷ್ಟವಾಗುತ್ತಿದೆ. ಸುರಕ್ಷತೆಯ ದೃಷ್ಟಿಯಲ್ಲಿ ಸಿದ್ದಾಪುರದಲ್ಲಿ ಸುಸಜ್ಜಿತವಾದ ಸರ್ಕಲ್‌ ನಿರ್ಮಾಣವಾಗಬೇಕು. ಸರ್ಕಲ್‌ ನಿರ್ಮಾಣವಾಗದಿದ್ದಲ್ಲಿ ಸಂಘಟನೆಯ ಮೂಲಕ ಉಗ್ರ ಹೋರಾಟ ಮಾಡಬೇಕಾಗುತ್ತದೆ.
-ಸುದರ್ಶನ ಶೆಟ್ಟಿ ಬಾಳೆಬೇರು, ಗೌರವಾಧ್ಯಕ್ಷರು, ಜಯ ಕರ್ನಾಟಕ ಸಂಘಟನೆ ಸಿದ್ದಾಪುರ ವಲಯ

ಟಾಪ್ ನ್ಯೂಸ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

15

Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ

Suilla

Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.