ಕೃಷ್ಣಮಠವನ್ನು ಸ್ವಾಧೀನಕ್ಕೆ ಪಡೆಯಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿತ್ತು:ಪ್ರಮೋದ್ ಮಧ್ವರಾಜ್
Team Udayavani, Dec 24, 2021, 4:28 PM IST
ಉಡುಪಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವಿದ್ದಾಗ ಉಡುಪಿ ಶ್ರೀ ಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸಲು ಮುಂದಾಗಿತ್ತು. ಆದರೆ ನಾನೇ ಅದನ್ನು ತಡೆದಿದ್ದೆ ಎಂದು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಕೃಷ್ಣ ಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ‘ವಿಶ್ವಾರ್ಪಣಂ’ ಕಾರ್ಯಕ್ರಮದಲ್ಲಿ ಗುರುವಾರ ಭಾಗವಹಿಸಿದ್ದಅವರು ಈ, “ಸರ್ಕಾರ ಕೃಷ್ಣ ಮಠವನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ಯೋಚನೆ ಮಾಡಿತ್ತು. ಈ ಸುದ್ದಿ ತಿಳಿದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಂಪರ್ಕಿಸಿ, ‘ಉಡುಪಿ ಕೃಷ್ಣ ಮಠಕ್ಕೆ ಏನಾದರೂ ತೊಂದರೆಯಾದರೆ ಶಾಸಕ ಸ್ಥಾನಕ್ಕೆ ಮೊದಲು ರಾಜೀನಾಮೆ ಕೊಡುವವ ನಾನಾಗಿರುತ್ತೇನೆ’ಎಂಬುದಾಗಿ ಹೇಳಿ ಈ ಪ್ರಸ್ತಾವನೆಗೆ ಪೂರ್ಣವಿರಾಮ ಹಾಕುವ ಸಣ್ಣ ಸೇವೆ ಮಾಡಿದ್ದೇನೆ. ಈ ಬಗ್ಗೆ ನನಗೆ ತೃಪ್ತಿ ಇದೆ” ಎಂದು ಹೇಳಿದರು.
“ಪಲಿಮಾರು ಶ್ರೀಗಳ ಪರ್ಯಾಯದ ಸಮಯದಲ್ಲಿ ಮಧ್ವ ಸರೋವರಕ್ಕೆ ಹಾಗೂ ಸುತ್ತಮುತ್ತಲಿನ ಮಠದ ಬಾವಿಗಳಿಗೆ ಡ್ರೈನೇಜ್ ನೀರು ಬರುತ್ತಿತ್ತು. ಹೀಗಾಗಿ ನಗರಸಭೆಯಿಂದ 45 ಲಕ್ಷ ರೂ. ಅನುದಾನ ಕಲ್ಪಿಸಿ ಒಳಚರಂಡಿ ವ್ಯವಸ್ಥೆ ಸರಿಪಡಿಸಲಾಗಿತ್ತು” ಎಂದರು.
ಇದನ್ನೂ ಓದಿ:ಸದನ ಹೆಚ್ಚು ಕಾಲ ನಡೆಯಲು ಕಾಲ ಕೂಡಿಬರಬೇಕು: ಸ್ಪೀಕರ್ ಕಾಗೇರಿ
“ಉಡುಪಿ ಕೃಷ್ಣ -ಮುಖ್ಯಪ್ರಾಣ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಕ್ಕೆ ಕೆಲವರು ನನ್ನನ್ನು ಶಾಸಕ ಸ್ಥಾನದಿಂದ ಅನೂರ್ಜಿತಗೊಳಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಹಾಕಿದ್ದರು. ಇದರಿಂದ ನನಗೇನು ತೊಂದರೆಯಾಗಿಲ್ಲ. ಆದರೆ ಇಂಥ ಮನಸ್ಥಿತಿಯ ಜನರೂ ಜಗತ್ತಿನಲ್ಲಿದ್ದಾರೆ ಎಂದು ಪ್ರಮೋದ್ ಮಧ್ವರಾಜ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫಲ
Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.