ನಿರ್ವಹಣೆ ಕೊರತೆಯಿಂದ ಕೊಳಚೆ ನೀರು ನದಿಗೆ: ಶಾಸಕ ಭಟ್
Team Udayavani, Jun 11, 2018, 6:25 AM IST
ಮಲ್ಪೆ: ನಿಟ್ಟೂರು ಬಳಿ ಇರುವ ತ್ಯಾಜ್ಯ ನೀರು ಸಂಸ್ಕರಣ ಘಟಕದಲ್ಲಿ ಎಲ್ಲ ವ್ಯವಸ್ಥೆಗಳು ಇವೆ. ಆದರೆ ಸರಿಯಾದ ನಿರ್ವಹಣೆ ಇಲ್ಲದ್ದರಿಂದ ಕೊಳಚೆ ನೀರು ಹೊರಬಂದು ನದಿ ಸೇರುತ್ತಿದೆ. ನೀತಿ ಸಂಹಿತೆ ಮುಗಿದ ತತ್‌ಕ್ಷಣ ಅಧಿಕಾರಿಗಳೊಂದಿಗೆ ನಿಟ್ಟೂರಿನ ಎಸ್‌ಟಿಪಿ ಘಟಕಕ್ಕೆ ಭೇಟಿ ನೀಡಿ ಸರಿಯಾದ ನಿರ್ವಹಣೆ ವ್ಯವಸ್ಥೆ ಕೈಗೊಂಡು ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದರು.
ರವಿವಾರ ಕೊಡವೂರು ಶಂಕರ ನಾರಾಯಣ ತೀರ್ಥ ಕೆರೆ (ಕಿಚ್ಚಣ್ಣ ಕೆರೆ) ಯಲ್ಲಿ ಗಂಗಾಪೂಜೆ ನೆರವೇರಿಸಿ ಬಳಿಕ ಇಂದ್ರಾಣಿ ನದಿಯಲ್ಲಿ ಹರಿಯುವ ಕೊಳಚೆ ನೀರಿನ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ನಾನು ಶಾಸಕನಾಗಿದ್ದಾಗ ಕನಿಷ್ಠ 15 ದಿನಗಳಿಗೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೆ. ಜನಪ್ರತಿನಿಧಿ ಆದವನು ನಿರಂತರ ಅಲ್ಲಿಗೆ ಹೋಗಿ ಅದು ಸರಿ ಇದೆಯೋ ಇಲ್ಲವೋ ಎಂದು ಸರಿಯಾಗಿ ನೋಡದೇ ಇದ್ದಲ್ಲಿ ಈ ರೀತಿಯ ಸಮಸ್ಯೆಗೆ ಕಾರಣವಾಗುತ್ತದೆ ಎಂದರು.
ಕೆರೆಯ ಅಭಿವೃದ್ಧಿಗೆ ಒತ್ತು
ಇಲ್ಲಿನ ಕೆರೆಯ ಅಭಿವೃದ್ಧಿಗೆ ಸರಕಾರ ದಿಂದ ಈಗಾಗಲೇ ಅನುದಾನ ದೊರೆತಿದೆ ಎನ್ನಲಾಗುತ್ತಿದೆ, ಆದರೆ ನನಗೆ ಅದರ ಸರಿ ಯಾದ ಮಾಹಿತಿಯಿಲ್ಲ. ನೀತಿ ಸಂಹಿತೆ ಮುಗಿದ ಬಳಿಕ ಈ ಬಗ್ಗೆ ಅಧಿಕಾರಿ ಗಳೊಂದಿಗೆ ಚರ್ಚಿಸಿ ಅನುದಾನ ಬಂದಲ್ಲಿ ಕಾಮಗಾರಿ ಅನುಷ್ಠಾನಗೊಳಿಸಲಾಗು ವುದು, ಅದಲ್ಲದಿದ್ದರೂ ಸಣ್ಣ ನೀರಾವರಿ ಇಲಾಖೆಯ ಮೂಲಕವಾದರೂ ಈ ಕೆರೆಯ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ರಘುಪತಿ ಭಟ್ ಹೇಳಿದರು.
ಸಂವೇದನಾ ಫೌಂಡೇಶನ್‌ನ ಸಂಸ್ಥಾಪಕ ಪ್ರಕಾಶ್ ಮಲ್ಪೆ ಮಾತನಾಡಿ, ಪರಿಸರ ಉಳಿಸುವಂತಹ ಕಾರ್ಯ ಆಗಬೇಕು. ನಾವೆಲ್ಲರು ಹಸಿರುಗನಸನ್ನು ಕಾಣೋಣ, ಭಾರತವನ್ನು ಸಸ್ಯ ಶ್ಯಾಮಲೆಯಾಗಿಸೋಣ ಎಂದರು.
ಕರ್ನಾಟಕ ದಕ್ಷಿಣ ಪ್ರಾಂತ ಪರಿಸರ ಸಂರಕ್ಷಣಾ ಪ್ರಮುಖ್ ಡಾ| ನಾರಾಯಣ ಶೆಣೈ, ಶಂಕರನಾರಾಯಣ ತೀರ್ಥ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಕೆ. ಶ್ರೀನಿವಾಸ್ ರಾವ್, ಅಧ್ಯಕ್ಷ ದೇವರಾಜ್ ಸುವರ್ಣ ಉಪಸ್ಥಿತರಿದ್ದರು. ರಾಜೇಶ್ ಕಾನಂಗಿ ಸ್ವಾಗತಿಸಿ, ವಿಜಯ ಕೊಡವೂರು ಪ್ರಸ್ತಾವಿಸಿದರು. ಪ್ರವೀಣ್ ಬಲ್ಲಾಳ್ ವಂದಿಸಿದರು. ಶ್ರೇಯಾ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.