Sowjanya Case: “ಸಾಕ್ಷ್ಯನಾಶ ಪಡಿಸಿದವರನ್ನು ತನಿಖೆಗೆ ಒಳಪಡಿಸಿ’
Team Udayavani, Aug 30, 2023, 12:53 AM IST
ಉಡುಪಿ: ಘಟನೆ ನಡೆದ ಸಂದರ್ಭದಲ್ಲಿ ಸಾಕ್ಷ್ಯನಾಶ ಮಾಡಿದ ಪೊಲೀಸರು, ವೈದ್ಯರು ಹಾಗೂ ಇತರ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸುವಂತೆ ಸೌಜನ್ಯಾ ತಾಯಿ ಕುಸುಮಾವತಿ ಆಗ್ರಹಿಸಿದ್ದಾರೆ.
ಸೌಜನ್ಯಾ ಹೋರಾಟ ಸಮಿತಿ ವತಿಯಿಂದ ಮಂಗಳವಾರ ಶ್ರೀಕೃಷ್ಣ ಮಠದಲ್ಲಿ ತಪ್ಪಿತ ಸ್ಥರಿಗೆ ಶಿಕ್ಷೆಯಾ ಗಬೇಕು ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಹುತಾತ್ಮ ಸ್ಮಾರಕದ ಬಳಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಶ್ರೀಕೃಷ್ಣನ ಸನ್ನಿಧಿಯಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದ ಅವರು, ಸಾಕ್ಷ್ಯ ನಾಶ ಪಡಿಸಿದವರನ್ನು ಮೊದಲು ತನಿಖೆಗೆ ಒಳಪಡಿಸಬೇಕು. ಆಗ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಆ ಮೂಲಕ ನಮಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಮರುತನಿಖೆಗೆ ಆಗ್ರಹಿಸಿ ಸೆ. 3 ರಂದು ಬೆಳ್ತಂಗಡಿ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ. 3 ತಿಂಗಳಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧ ಚಲೋ ಹಮ್ಮಿಕೊಳ್ಳು ವುದಾಗಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದರು.
ಆರೋಪಿಗಳಿಗೆ ಸೂಕ್ತ ಶಿಕ್ಷೆ ಯಾಗುವವರೆಗೆ ಹೋರಾಟ ಮುಂದು ವರಿಯಲಿದೆ. ಆರೋಪಿಗಳಿಗೆ, ಮರ ಣೋತ್ತರ ಪರೀಕ್ಷೆ ನಡೆಸಿದ ವೈದ್ಯರು, ತನಿಖಾಧಿಕಾರಿ ಎಲ್ಲರಿಗೂ ಸೂಕ್ತ ಶಿಕ್ಷೆಯಾಗಬೇಕು ಎಂದರು.
ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸದೇ ಇರುವುದರ ಬಗ್ಗೆ ನಮಗೆ ನೋವಿದೆ. ಘಟನೆಯ ಕುರಿತ ದಾಖಲೆಗಳನ್ನು ಪೊಲೀಸರು ನುಂಗಿ ಹಾಕಿದ್ದಾರೆ.ಎಂದು ಆರೋಪಿಸಿದ ಅವರು, ಇನ್ನು ಮುಂದೆ ಇಂತಹ ಘಟನೆ ನಡೆಯಬಾರದು; ಕಾಮಾಂಧರನ್ನು ರಕ್ಷಿಸುವ ಕೆಲಸ ಎಂದಿಗೂ ನಡೆಯಬಾರದು ಎಂದು ಹೇಳಿದರು.
ಅವಳಿ ಜಿಲ್ಲೆಯಲ್ಲಿ ದುಷ್ಟ ವ್ಯವಸ್ಥೆ ಇರುವುದರಿಂದಲೇ ಇಂತಹ ಘಟನೆಗಳು ನಡೆಯುತ್ತಿವೆ ಎಂದು ತಮ್ಮಣ್ಣ ಶೆಟ್ಟಿ ಆರೋಪಿಸಿದರು.
ಇದಕ್ಕೆ ಮುನ್ನ ಶ್ರೀಕೃಷ್ಣ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಂಸ್ಕೃತಕಾಲೇಜು ಮಾರ್ಗವಾಗಿ ಅಜ್ಜರಕಾಡು
ಮೂಲಕ ಕಾಲ್ನಡಿಗೆ ಜಾಥಾ ನಡೆಸಲಾ ಯಿತು. ಸಾಕಷ್ಟು ಸಂಖ್ಯೆಯಲ್ಲಿ ಜನರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಪ್ರತಿಭಟನೆ ವೇಳೆ ಮಾತಿನ ಚಕಮಕಿ
ಉಡುಪಿ: ಸೌಜನ್ಯಾ ಪ್ರಕರಣ ಸಂಬಂಧ ಪ್ರತಿಭಟನ ಸಭೆ ಬಳಿ ಸೇರಿದ್ದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದಸ್ಯೆಯ ರಿಗೂ ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಪ್ರತಿಭಟನಾ ಸಭೆ ನಡೆಯುವ ಸ್ಥಳ ಹುತಾತ್ಮ ಸ್ಮಾರಕದ ಬಳಿ ಹಲವು ಮಂದಿ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯೆಯರು ಸೇರಿದ್ದರು. ಈ ಬಗ್ಗೆ ತಿಳಿಯುತ್ತಿದ್ದಂತೆಯೇ ಪೊಲೀಸರು ಅವರನ್ನು ತಡೆದರು. ತಾವೂ ಸೌಜನ್ಯಾ ಪರ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿರುವುದಾಗಿ ಮಹಿಳೆಯರು ತಿಳಿಸಿದರೂ ಪೊಲೀಸರು ಅವಕಾಶ ನೀಡಲಿಲ್ಲ.
ಸೌಜನ್ಯಾ ಪ್ರಕರಣದಲ್ಲಿ ನ್ಯಾಯ ಪರ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಆದರೆ ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಯವರನ್ನು ವಿನಾಕಾರಣ ನಿಂದಿಸುವುದನ್ನು ನಾವು ವಿರೋಧಿಸುತ್ತೇವೆ ಎಂದು ಮಹಿಳೆಯರು ಹೇಳಿದರು. ಘಟನ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಯಿತು.
ಸಂಚಾರ ಬದಲಾವಣೆ
ಪ್ರತಿಭಟನೆ ಸ್ಥಳದಲ್ಲಿ ವಾಹನ ಸಂಚಾರವನ್ನು ಕೆಲಕಾಲ ಸಂಪೂರ್ಣ ನಿರ್ಬಂಧಿಸಲಾಯಿತು. ಅಜ್ಜರಕಾಡು, ಬ್ರಹ್ಮಗಿರಿ ಭಾಗದ ವಿವಿಧೆಡೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಯಿತು. ಘಟನ ಸ್ಥಳದಲ್ಲಿ ಎಸ್‌ಪಿ ಹಾಕೆ ಅಕ್ಷ ಯ್ ಮಚ್ಚೀಂದ್ರ ಹಾಗೂ ಹೆಚ್ಚು ವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಯಿತು. ಸಭೆ ಮುಗಿಯುವವರೆಗೂ ಅಲ್ಲೇ ಇದ್ದ ಸ್ವಸಹಾಯ ಸಂಘದ ಸದಸ್ಯೆಯರು, ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡುವಾಗ ಘೋಷಣೆ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.