ಕಸ್ತೂರ್ಬಾ ಆಸ್ಪತ್ರೆ: ವಿದೇಶ ಯಾನಿಗಳಿಗೆ ಕೋವಿಡ್ ಪರೀಕ್ಷೆ
Team Udayavani, Jul 16, 2020, 7:05 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಉಡುಪಿ: ವಿದೇಶ ಪ್ರಯಾಣ ಮಾಡುವವರಿಗೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶೇಷ ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಜು. 15ರಿಂದ ವಿದೇಶ ಪ್ರಯಾಣ ಮಾಡುವವರಿಗೆ ಕೋವಿಡ್ -19 ಪರೀಕ್ಷಾ ವರದಿ ಕಡ್ಡಾಯವಾಗಿದೆ
ಅಂಥವರಿಗೆ ನೆರವಾಗಲು ಪರೀಕ್ಷಾ ಕೇಂದ್ರ ಆರಂಭಿಸಿದ್ದೇವೆ.
ಕೇಂದ್ರವು ಆಸ್ಪತ್ರೆಯ ಕೆಲಸದ ದಿನಗಳಲ್ಲಿ ಅಪರಾಹ್ನ 2ರಿಂದ 5ರವರೆಗೆ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.
ಈ ಸೇವೆಯು ಪೂರ್ವ ನಿಗದಿಯೊಂದಿಗೆ ಮಾತ್ರ ಲಭ್ಯವಿದ್ದು, ಪೂರ್ವ ನಿಗದಿಗಾಗಿ ಬೆಳಗ್ಗೆ 9ರಿಂದ ಸಂಜೆ 4ರ ಒಳಗೆ ದೂರವಾಣಿ ಸಂಖ್ಯೆ 0820- 2922057ಕ್ಕೆ ಕರೆ ಮಾಡಬೇಕು. ಆಧಾರ್ ಕಾರ್ಡ್ ಅಥವಾ ಗುರುತಿನ ಚೀಟಿ ತರಬೇಕು.
ವರದಿ ಬರಲು 24ರಿಂದ 48 ಗಂಟೆ ತಗಲಲಿದೆ ಮತ್ತು ಪರೀಕ್ಷಾ ವರದಿಗೆ 96 ಗಂಟೆಗಳವರೆಗೆ ಮಾತ್ರ ಮಾನ್ಯತೆಯಿರುವುದರಿಂದ ಅವಶ್ಯವಿರುವವರು ಅದಕ್ಕೆ ತಕ್ಕಂತೆ ಪರೀಕ್ಷೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.