ಮದುಮಕ್ಕಳಿಗೆ ಶುಭಪ್ರದ ಜಾತ್ರೆ

ಆ. 17: ಪೆರ್ಡೂರಿನಲ್ಲಿ ಸಿಂಹ ಸಂಕ್ರಮಣ ಸಂಭ್ರಮ

Team Udayavani, Aug 16, 2019, 5:10 AM IST

1408HBRE1

ಸಂಗ್ರಹ ಚಿತ್ರ

ವಿಶೇಷ ವರದಿಹೆಬ್ರಿ: ಉಡುಪಿ ತಾಲೂಕಿನ ಪೆರ್ಡೂರು ಕದಳೀ ಪ್ರಿಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನ ದಲ್ಲಿ ಆ. 17ರಂದು ನಡೆಯುವ ಸಿಂಹ ಸಂಕ್ರಮಣ ಆಚರಣೆ ಮದುಮಕ್ಕಳ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿದೆ.

ಬೆಳಗ್ಗೆ 4 ಗಂಟೆಯಿಂದ ಜನಜಂಗುಳಿ, ವಾಹನ ದಟ್ಟಣೆ ಆರಂಭವಾಗುತ್ತದೆ. ಉಡುಪಿ ಜಿಲ್ಲೆ ಮಾತ್ರವಲ್ಲದೆ ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರದ ದರ್ಶನಕ್ಕೆ ಬರುವುದು ಇಲ್ಲಿಯ ವಿಶೇಷ.

ಬಾಳೆಹಣ್ಣಿನ ನೈವೇದ್ಯ ಪ್ರಿಯ ಶ್ರೀ ಅನಂತ ಪದ್ಮನಾಭನ ಕ್ಷೇತ್ರ ವಿಶೇಷ ಕಾರಣಿಕದ ಸಾನ್ನಿಧ್ಯವಾಗಿದ್ದು, ಭಕ್ತರು ತಮ್ಮ ಇಷ್ಟ ದೈವವನ್ನು ಸ್ಮರಿಸಿಕೊಂಡು ಪ್ರಾರ್ಥಿಸಿದರೆ ಖಂಡಿತ ಫಲ ನೀಡುತ್ತದೆ ಎಂಬ ನಂಬಿಕೆ ಭಕ್ತರದ್ದಾಗಿದೆ. 12 ಸಂಕ್ರಮಣಗಳೂ ಇಲ್ಲಿ ವಿಶೇಷವಾಗಿದ್ದು ಅದರಲ್ಲೂ ಸಿಂಹ ಸಂಕ್ರಮಣ ಹಬ್ಬದ ವಾತಾವರಣದೊಂದಿಗೆ ಬೃಹತ್‌ ಜನಸಾಗರ ಹರಿದುಬರುತ್ತದೆ.

ಮದುಮಕ್ಕಳ ಜಾತ್ರೆ
ಆಷಾಢ ಮಾಸದ ಬಳಿಕ ಬರುವ ಸಿಂಹ ಮಾಸ ನೂತನ ಮದುಮಕ್ಕಳಿಗೆ ವಿಶೇಷ. ಹೊಸದಾಗಿ ಮದುವೆಯಾದ ಮದುಮಕ್ಕಳು ದೇವರ ದರ್ಶನ ಮಾಡಿ ಹೋಗುವ ಸಂಪ್ರದಾಯ ಮೊದಲಿನಿಂದ‌ಲೂ ನಡೆದು ಬರುತ್ತಿದೆ. ಮದುಮಗ ತನ್ನ ಮನೆ ಹಿರಿಯ ರೊಂದಿಗೆ ಬಂದು ತನ್ನ ಮಡದಿಯನ್ನು ಕರೆದೊಯ್ಯುವ ಹಾಗೂ ಮದುಮಗಳು ತನ್ನ ತಂದೆ-ತಾಯಿಯೊಂದಿಗೆ ಬಂದು ಗಂಡನ ಮನೆಯೆಡೆಗೆ ನಡೆಯಲು ಸೇರುವ ತಾಣ ಪೆರ್ಡೂರಿನ ಸಿಂಹ ಸಂಕ್ರಮಣವಾಗಿತ್ತು. ಅದಕ್ಕಾಗಿಯೇ ಕಳೆದ ವರ್ಷ ಮದುವೆಯಾದ ಜೋಡಿಗಳು ಜತೆಯಾಗಿ ಬಂದು ಮುಂದಿನ ಭವಿಷ್ಯಕ್ಕಾಗಿ ಶ್ರೀ ಸ್ವಾಮಿಯನ್ನು ಪ್ರಾರ್ಥಿಸುವುದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯವಾಗಿದ್ದು, ಇಂದು ಮದುಮಕ್ಕಳ ಜಾತ್ರೆ ಎಂದೇ ಪ್ರಸಿದ್ಧಿಯನ್ನು ಪಡೆದಿದೆ.

ಹನ್ನೆರಡು ಸಂಕ್ರಮಣ ವ್ರತ
ಸಂಕ್ರಮಣ ದೇವರು ಎಂದು ಪ್ರಸಿದ್ಧಿ ಪಡೆದ ಪೆರ್ಡೂರು ಕ್ಷೇತ್ರವು ವರ್ಷದ ಹನ್ನೆರಡು ರಾಶಿಗಳನ್ನು ಸೂರ್ಯ ಕ್ರಮಿಸುವ ಘಟ್ಟ ದಲ್ಲಿ ಅನಂತಪದ್ಮನಾಭ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆರಾಧಿಸುವ ಪದ್ಧತಿ ಹಿಂದಿನಿಂದಲೂ ಇದೆ. ಶ್ರೀ ಕ್ಷೇತ್ರದಲ್ಲಿ 12 ಸಂಕ್ರಮಣಕ್ಕೆ ತಪ್ಪದೇ ಬಂದು ಭಗವಂತನ ದರ್ಶನ ಪಡೆದರೆ‌ ಸಂಕಲ್ಪ ಈಡೇರಿಸುತ್ತಾನೆ ಎಂಬ ನಂಬಿಕೆ ಇದೆ.

ಹಿಂದೆ ಪ್ರತಿ ಸಂಕ್ರಮಣದಂದು ಕಾಲ್ನಡಿಗೆಯಲ್ಲಿಯೇ ದೇವರ ದರ್ಶನ ಪಡೆಯುತ್ತಿದ್ದರು. ಈಗಲೂ ಹೆಚ್ಚಿನ ಭಕ್ತರು ನಿರಾಹಾರರಾಗಿ ಶ್ರೀ ಸನ್ನಿಧಿಗೆ ಬಂದು ಹಣ್ಣು ಕಾಯಿ ಸಮರ್ಪಿಸಿ ಭಕ್ತಿಯಿಂದ ದೇವರಲ್ಲಿ ಪ್ರಾರ್ಥಿಸಿ ವ್ರತಾಚರಣೆಯಲ್ಲಿ ಪಾಲ್ಗೊಳ್ಳುತ್ತಾರೆ.

ಒಳಾಂಗಣದ ಸುತ್ತ ತಗಡಿನ ಚಪ್ಪರ
ಭಕ್ತರು ಯಾವುದೇ ನೂಕು ನುಗ್ಗಲಿಲ್ಲದೆ ಮಳೆಯಲ್ಲಿ ಒದ್ದೆಯಾಗದಂತೆ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ದೇವಸ್ಥಾನ ಒಳಾಂಗಣದ ಸುತ್ತ ತಗಡಿನ ಚಪ್ಪರ ಹಾಕಲಾಗಿದೆ. ಅಲ್ಲದೆ ದೇವಸ್ಥಾನ ಜೀಣೊìದ್ಧಾರದ ಅಂಗವಾಗಿ ಸುತ್ತುಪೌಳಿಯ ನೀಲ ನಕ್ಷೆ ತಯಾರಾಗಿದ್ದು ಭಕ್ತರ ಸಹಕಾರದೊಂದಿಗೆ ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ.
– ಪ್ರಮೋದ್‌ ರೈ ಪಳಜೆ, ಅಧ್ಯಕ್ಷ ರು, ದೇವಸ್ಥಾನ ವ್ಯವಸ್ಥಾಪನ ಸಮಿತಿ

ಬಾಳೆಹಣ್ಣಿಗೊಲಿವ ಭಗವಂತ
ಬಾಳೆಹಣ್ಣಿಗೊಲಿದ ಭಗವಂತನೆಂದೇ ಖ್ಯಾತಿ ಪಡೆದ ಕದಳಿಪ್ರಿಯ ಪೆರ್ಡೂರು ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವರಿಗೆ ಸುಮಾರು ಒಂದು ಸಾವಿರ ವರ್ಷಗಳಿಂದಲೂ ಭಕ್ತರಿಂದ ಬಾಳೆಹಣ್ಣಿನ ಸೇವೆ ಇಲ್ಲಿ ನಡೆದು ಬರುತ್ತಿದೆ. ತಮ್ಮ ಇಷ್ಟಾರ್ಥ ಸಿದ್ಧಿ ಸಂಕಲ್ಪಗಳಿಗೆ ಬಾಳೆಹಣ್ಣಿನ ಸೇವೆ ಸಲ್ಲಿಸುವುದು ಇಲ್ಲಿ ವಿಶೇಷ. ಅನಾರೋಗ್ಯದ ನಿವಾರಣೆಗೆ ಸಾವಿರ ಬಾಳೆಹಣ್ಣು , 500 ಬಾಳೆಹಣ್ಣು, ದಿನಕ್ಕೊಂದು ಬಾಳೆಹಣ್ಣು , ಸಿಬ್ಲಿ ಹಣ್ಣು ಹೀಗೆ ಬಾಳೆಹಣ್ಣಿನ ಹರಕೆ ಸೇವೆ ನಡೆಯುತ್ತಿದೆ. ಕಳೆದ ವರ್ಷ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಬಾಳೆಹಣ್ಣು ಶ್ರೀ ದೇವರಿಗೆ ಸಮರ್ಪಿತಗೊಂಡಿದೆ.

ಟಾಪ್ ನ್ಯೂಸ್

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.