ಶ್ರೀ ಭುವನೇಂದ್ರ ಕಾಲೇಜು: ತುಳು ಜಾನಪದ ಜಗತ್ತು ವಿಚಾರ ಸಂಕಿರಣ
Team Udayavani, Aug 12, 2017, 7:05 AM IST
ಕಾರ್ಕಳ: ಭಿನ್ನತೆಗಳ ನಡುವೆ ಏಕತೆ ಇರುವುದೇ ನಮ್ಮ ತುಳುವಿನ ಶ್ರೇಷ್ಠತೆ. ತುಳುನಾಡಿನ ಎಲ್ಲ ಆಚರಣೆ, ಆರಾಧನೆಗಳ ಹಿಂದೆ ನಂಬಿಕೆ, ಸಂಸ್ಕೃತಿ ಇದೆ. ಪ್ರಾಚೀನ ಕಾಲದಿಂದಲೂ ತುಳು ನಾಡು ಇಡೀ ದೇಶದಲ್ಲಿ ಮಹಿಳೆಯರಿಗೆ ಸ್ಥಾನಮಾನವನ್ನು ನೀಡಿದ ಏಕೈಕ ನಾಡಾಗಿದೆ ಎಂದು ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ| ಮಂಜುನಾಥ್ ಎ. ಕೋಟ್ಯಾನ್ ಹೇಳಿದರು.
ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳ ಗಂಗೋತ್ರಿ ಮತ್ತು ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ ಇವುಗಳ ಸಹಯೋಗದೊಂದಿಗೆ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಆ. 9ರಂದು ನಡೆದ ತುಳು ಜಾನಪದ ಜಗತ್ತು-1 ಇದರ ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ, ಮಂಗಳೂರು ವಿಶ್ವ ವಿದ್ಯಾನಿಲಯ, ಮಂಗಳ ಗಂಗೋತ್ರಿ ಇದರ ಸಂಯೋಜಕ ಪ್ರೊ| ಕೆ. ಅಭಯ್ ಕುಮಾರ್ ಮಾತನಾಡಿ, ಭಾಷೆಯ ವಿಚಾರದಲ್ಲಿ ತುಳು ಪ್ರಾಚೀನ ಭಾಷೆಯಾಗಿದೆ. ತುಳು ಎಂಬುದು ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲದ ಭಾಷೆಯಾಗಿದೆ. ಇಲ್ಲಿರುವ ಆರಾಧನೆ, ಆಚರಣೆಗಳು ವಿಶಿಷ್ಟವಾಗಿದ್ದು, ಇವುಗಳು ಬದುಕು, ಭೂಮಿ, ಸಂಸ್ಕೃತಿಯೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದೆ, ತುಳು ನಾಡಿನ ಶ್ರೀಮಂತ ಆಚರಣೆ, ಸಾಹಿತ್ಯವನ್ನು ಯುವ ಪೀಳಿಗೆಗೆ ಪರಿಚಯ ಮಾಡುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ನಡೆಸುವುದು ಅಗತ್ಯವಾಗಿದೆ. ತುಳು ಜನತೆಗೆ ತುಳು ಭಾಷೆಯ ಮಹತ್ವ ತಿಳಿಸಲು ಈ ವಿಚಾರ ಸಂಕಿರಣವನ್ನು ಹಮ್ಮಿ ಕೊಳ್ಳಲಾಗುತ್ತಿದೆ ಎಂದವರು ಹೇಳಿದರು.
ವಿಚಾರ ಸಂಕಿರಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಯಕ್ಷಗಾನ ಅಧ್ಯಯನ ಕೇಂದ್ರದ ಸಂಶೋಧನಾ ಅಧಿಕಾರಿ ಡಾ| ರಾಜಶ್ರೀ, ಶ್ರೀವಾಣಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಹಾಗೂ ಶ್ರೀ ಮಂಜುನಾಥ ಪೈ ಸ್ಮಾರಕ ಸರಕಾರಿ ಕಾಲೇಜಿನ ಉಪನ್ಯಾಸಕ ಸುರೇಶ ಮೆರಿಣಾಪುರ ಅವರು, ತುಳುವಿಗೆ ಸಂಬಂಧಿಸಿದ ವಿಷಯಗಳ ಕುರಿತು ವಿಚಾರಗೋ‚ಷ್ಠಿಯನ್ನು ನಡೆಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ಸರಸ್ವತಿ ಸ್ವಾಗತಿಸಿ, ವಿನಯ್. ಆರ್. ಭಟ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.