ಸಾಂಪ್ರದಾಯಿಕ ಭಜನ ಸ್ಪರ್ಧೆಗೆ ಸ್ವಾಮೀಜಿದ್ವಯರಿಂದ ಚಾಲನೆ

ಉಡುಪಿ-ದ.ಕ.ಜಿಲ್ಲಾ ವಿಶ್ವಕರ್ಮ ಒಕ್ಕೂಟ

Team Udayavani, Jul 2, 2019, 5:43 AM IST

3006KPT2E1

ಕಟಪಾಡಿ: ಉಡುಪಿ, ದ.ಕ. ಜಿಲ್ಲಾ ವಿಶ್ವಕರ್ಮ ಒಕ್ಕೂಟದ ವತಿಯಿಂದ ವಿಶ್ವಕರ್ಮ ಸಮಾಜದವರಿಗಾಗಿ ಜರಗಿದ ಸಾಂಪ್ರದಾಯಿಕ ಭಜನ ಸ್ಪರ್ಧೆಗೆ ಕಟಪಾಡಿ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನದಲ್ಲಿ ಜೂ.30ರಂದು ಚಾಲನೆ ನೀಡ ಲಾಯಿತು.

ದೀಪ ಬೆಳಗಿಸಿ ಉದ್ಘಾಟಿಸಿದ ವೇಣುಗಿರಿ ಕಟಪಾಡಿ-ಪಡುಕುತ್ಯಾರು ಶ್ರೀಮತ್‌ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ತಮ್ಮ ಆಶೀರ್ವಚನದಲ್ಲಿ, ಭಕ್ತರ ಐಕ್ಯತೆಗೆ ಮತ್ತು ಮನುಷ್ಯರ ಕಲ್ಯಾಣಕ್ಕಾಗಿ ಭಜನೆ ಆವಶ್ಯಕ. ಹಾಗಾಗಿ ಎಲ್ಲರ ಮನೆ-ಮನಗಳಲ್ಲಿ ಭಜನೆ ಹೆಚ್ಚು ನಡೆಯಬೇಕಿದೆ. ಭಗವಂತನ ಪ್ರೀತಿಗಾಗಿ ಶ್ರದ್ಧಾ ಭಕ್ತಿಯ ಮನೋಭಾವದಿಂದ ಸ್ಪರ್ಧಾಳುಗಳು ಭಜನೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

ಅನಂತರ ಆಶೀರ್ವಚನ ನೀಡಿದ ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ, ವಿಶ್ವಕರ್ಮ ಜಗದ್ಗುರು ಪೀಠಾಧೀಶ್ವರ ಪರಮಪೂಜ್ಯ ಶ್ರೀ ಶಿವಸುಜ್ಞಾನತೀರ್ಥ ಮಹಾಸ್ವಾಮಿಜಿ , ಭಕ್ತಿ-ಶ್ರದ್ಧೆಯ ಮೂಲಕ ನಿರಂತರ ಭಗವಂತನ ಸ್ಮರಣೆಯಿಂದ ಪಾಪಕರ್ಮಗಳು ದೂರವಾಗುತ್ತವೆ. ಅಧ್ಯಾತ್ಮದ ಚಿಂತನೆಗಳನ್ನು ನಡೆಸಲು ಮನುಷ್ಯ ಯೋಗ್ಯನಾಗುತ್ತಾನೆ. ಆ ನಿಟ್ಟಿನಲ್ಲಿ ಭಗವಂತನ್ನು ಸಾಕ್ಷಾತ್ಕರಿಸಲು ಭಜನೆ ಶ್ರೇಷ್ಠ ಮಾಧ್ಯಮ ಎಂದರು.

ಮುಖ್ಯ ಅತಿಥಿಯಾಗಿದ್ದ ಕಟಪಾಡಿ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ನವೀನ್‌ ಆಚಾರ್ಯ ಪಡುಬಿದ್ರಿ ಮಾತನಾಡಿ, ಭಜನೆಯು ದೇವರ ಸ್ಮರಣೆಯೊಂದಿಗೆ ಜೀವನದ ಪದ್ಧತಿಯನ್ನು ತಿಳಿಸುವ ಆಡುಭಾಷೆಯಾಗಿದೆ. ಭಜನೆಯು ಮೌಲ್ಯಗಳನ್ನು ಸಮಾಜಕ್ಕೆ ಬಿತ್ತರಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಜೀವನ ಮೌಲ್ಯವನ್ನು ಅರ್ಥೈಸಿಕೊಳ್ಳಲು ಭಜನೆ, ಕೀರ್ತನೆಗಳು ಸಹಕಾರಿ ಎಂದರು.

ಉಡುಪಿ, ದ.ಕ. ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಯು.ಕೆ.ಎಸ್‌. ಸೀತಾರಾಮ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ಮಧು ಆಚಾರ್ಯ ಮುಲ್ಕಿ ವೇದಿಕೆಯಲ್ಲಿದ್ದರು. ತೀರ್ಪುಗಾರರಾಗಿ ಅಶೋಕ್‌ ಕಾಂಚನ್‌, ಸುರೇಖಾ, ಮಾಯಾ ಕಾಮತ್‌ ಸಹಕರಿಸಿದರು. ಗೌರವಾಧ್ಯಕ್ಷ ಅಲೆವೂರು ಯೋಗೀಶ್‌ ಆಚಾರ್ಯ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ದಿನೇಶ್‌ ಆಚಾರ್ಯ ಚೇಂಪಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಉಪ್ಪಳ, ಕಾರ್ಕಳ, ಪಡುಬಿದ್ರಿ, ಬಂಟ್ವಾಳ, ಮೂಡಬಿದ್ರಿ, ಕಿನ್ನಿಗೋಳಿ, ಎಡ್ಮೇರ್‌, ನಿಟ್ಟೆ, ಮಂಜರಪಲ್ಕೆ, ಉಡುಪಿ, ಬಾರ್ಕೂರು, ಬ್ರಹ್ಮಾವರ, ಹಳೆಯಂಗಡಿ, ಕೋಟೇಶ್ವರ, ಪುತ್ತೂರು, ಬಂಗ್ರಮಂಜೇಶ್ವರದ ಸಹಿತ ಒಟ್ಟು ವಿವಿಧ ಕಡೆಗಳ 18 ಭಜನಾ ಮಂಡಳಿಗಳು ಸ್ಪರ್ಧೆಯಲ್ಲಿ ಪಾಲ್ಗೊಂದ್ದವ್ತು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.