ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಶ್ರೀಕೃಷ್ಣ ವಿಗ್ರಹ


Team Udayavani, May 4, 2017, 11:39 AM IST

030517uk12.jpg

ಉಡುಪಿ: ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಅಮೆರಿಕದ ನ್ಯೂಜೆರ್ಸಿಯ ಎಡಿಸನ್‌ನ (ಪುತ್ತಿಗೆ ಮಠದ ಶಾಖಾ ಮಠ) ಶ್ರೀಕೃಷ್ಣ ವೃಂದಾವನದಲ್ಲಿ ಪ್ರತಿಷ್ಠಾಪಿಸಲಾಗುವ ಸಾಲಿಗ್ರಾಮ ಶಿಲೆಯ ಕಡಗೋಲು ಕೃಷ್ಣ ಪ್ರತಿಮೆಯನ್ನು ಬುಧವಾರ ಉಡುಪಿಯಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು.

ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಮಾಜಿ ಶಾಸಕ ಕೆ. ರಘುಪತಿ ಭಟ್‌, ಬೆಳಪು ದೇವಿಪ್ರಸಾದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. 

ಉಡುಪಿ ಗೀತಾ ಮಂದಿರದಿಂದ ಶ್ರೀಕೃಷ್ಣ ಮಠಕ್ಕೆ ಮೆರವಣಿಗೆಯಲ್ಲಿ ವಿಗ್ರಹ ತಂದ ಬಳಿಕ ಮಧ್ವ ಸರೋವರದಲ್ಲಿ ಮುಳುಗಿಸಿ ಶ್ರೀಕೃಷ್ಣಮಠದ ಮುಖಮಂಟಪಕ್ಕೆ ತಂದಾಗ ಪರ್ಯಾಯ ಶ್ರೀ ಪೇಜಾವರ ಉಭಯ ಶ್ರೀಪಾದರು ಮಂಗಳಾರತಿ ಬೆಳಗಿದರು.

ಪಶ್ಚಿಮ ಕರಾವಳಿಯಿಂದ ಅಮೆರಿಕದ ಪೂರ್ವ ಕರಾವಳಿಯಲ್ಲಿರುವ ನ್ಯೂಜೆರ್ಸಿಗೆ ಕೃಷ್ಣನ ವಿಗ್ರಹ ಹೊರಟಿದೆ. ಎಲ್ಲೆಡೆ ಕೃಷ್ಣಪ್ರಜ್ಞೆ ಜಾಗೃತವಾಗಲಿ ಎಂದು ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹಾರೈಸಿದರು.

ಇದೊಂದು ಐತಿಹಾಸಿಕ ಕ್ಷಣ ಎಂದು ಶ್ರೀಪುತ್ತಿಗೆ ಶ್ರೀಪಾದರು ನುಡಿದರು. ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಶುಭಕೋರಿದರು. ಬಳಿಕ ರಥಬೀದಿಯಲ್ಲಿ ನವರತ್ನ ರಥದಲ್ಲಿ ವಿಗ್ರಹದ ಮೆರವಣಿಗೆ ನಡೆದು ಪುತ್ತಿಗೆ ಮಠಕ್ಕೆ ತಂದಿರಿಸಲಾಯಿತು.

ಒಬ್ಬ ಕುಶಲಕರ್ಮಿಯ ಆರು ತಿಂಗಳ ಕೆಲಸ: ಕೃಷ್ಣ ವಿಗ್ರಹ ಗುರುವಾರ ನ್ಯೂಜೆರ್ಸಿಗೆ ತೆರಳಲಿದ್ದು, ಜೂ. 8ರಂದು ವಿಗ್ರಹದ ಪ್ರತಿಷ್ಠೆ ನಡೆಯಲಿದೆ. ಸಾಲಿಗ್ರಾಮ ಶಿಲೆ ನೇಪಾಳದ ಗಂಡಕಿ ನದಿಯಲ್ಲಿ ಸಿಗುತ್ತದೆ. ಈ ಶಿಲೆಯಿಂದ 19 ಇಂಚು (ಒಂದೂವರೆ ಅಡಿ) ಎತ್ತರದ ವಿಗ್ರಹವನ್ನು ನಿರ್ಮಿಸಿದವರು ಶಿರಸಿಯ ಹರೀಶ ಆಚಾರ್ಯರು. ಇವರೊಬ್ಬರೇ ಸುಮಾರು ಆರು ತಿಂಗಳು ನೇಪಾಲದಲ್ಲಿ ನಿಂತು ವಿಗ್ರಹ ನಿರ್ಮಿಸಿದ್ದರು. ಒಬ್ಬರೇ ನಿರ್ಮಿಸಿದ ಕಾರಣವೆಂದರೆ ಶಿಲೆಯ ಕುಸುರಿ ಕೆಲಸವನ್ನು ಒಬ್ಬರೇ ಮಾಡಿದರೆ ಹೆಚ್ಚು ಅನುಕೂಲ. 

ಟಾಪ್ ನ್ಯೂಸ್

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

1-idpp

Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್‌ ಕಪಾಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.