ಶ್ರೀಲಂಕಾ ಪ್ರಧಾನಿ ಭೇಟಿ: ಭಿಗಿ ಭದ್ರತೆ
ಕೊಲ್ಲೂರು, ಕುಮಾರಮಂಗಲದಲ್ಲಿ ಸಾರ್ವಜನಿಕ ದರ್ಶನ ನಿರ್ಬಂಧ
Team Udayavani, Jul 25, 2019, 5:33 AM IST
ಉಡುಪಿ/ ಕುಂಬಳೆ: ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮೆ ಸಿಂಘೆ ಅವರು ಜು. 26ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮತ್ತು ಜು. 27ರಂದು ಕುಂಬಳೆ ಸಮೀಪದ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಈ ಸಂದರ್ಭ ಸಾರ್ವಜನಿಕರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ.
ಕೊಲ್ಲೂರಿನಲ್ಲಿ ಜು. 26ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕ ಭೇಟಿಯನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದಾರೆ.
ಕುಮಾರಮಂಗಲದಲ್ಲಿ ಭದ್ರತೆ
ಕುರಿತಂತೆ ಕಾಸರಗೋಡು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಯವರು ಪ್ರತ್ಯೇಕ ಸಭೆಗಳನ್ನು ನಡೆಸಿದರು. ಕ್ಷೇತ್ರದಲ್ಲಿ ಜು. 27ರ ಬೆಳಗ್ಗೆ 7 ಗಂಟೆಯಿಂದ ಪ್ರಧಾನಿಯವರು ಮರಳುವ ತನಕ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಜ್ಯೋತಿಷ ರತ್ನ ಬೇಳ ಪದ್ಮನಾಭ ಶರ್ಮ ಇರಿಞಾಲಕುಡ ಅವರ ಮಾರ್ಗದರ್ಶನದ ಮೇರೆಗೆ ಆಗಮಿಸುವ ಶ್ರೀಲಂಕಾ ಪ್ರಧಾನಿ ಕುಮಾರ ಮಂಗಲಕ್ಕೆ ಭೇಟಿ ನಡೆಯಲಿದೆ. ಶ್ರೀಲಂಕಾ ಪ್ರಜೆಗಳ ಕ್ಷೇಮಕ್ಕಾಗಿ ವಿಶೇಷ ಸೇವೆಗಳನ್ನು ನೆರವೇರಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.