ರಾಮಜನ್ಮಭೂಮಿ ಟ್ರಸ್ಟಿಯಾಗಿ ಶ್ರೀ ವಿಶ್ವಪ್ರಸನ್ನತೀರ್ಥರು
Team Udayavani, Feb 6, 2020, 6:49 AM IST
ಉಡುಪಿ: ಅಯೋಧ್ಯೆ ರಾಮಜನ್ಮ ಭೂಮಿಯಲ್ಲಿ ದೇವಸ್ಥಾನ ನಿರ್ಮಿಸುವ ಸಲುವಾಗಿ ಕೇಂದ್ರ ಸರಕಾರ ರಚಿಸಿದ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಯಾಗಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ನೇಮಿಸಲಾಗಿದೆ. ಪೇಜಾವರ ಮಠಾಧೀಶರಾಗಿದ್ದು ಇತ್ತೀಚೆಗೆ ಪರಂಧಾಮವನ್ನೈದಿದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಈ ಗೌರವ ನೀಡಲಾಗಿದೆ.
ಒಟ್ಟು 14 ಮಂದಿ ಟ್ರಸ್ಟಿಗಳಿದ್ದು ಎರಡು ಟ್ರಸ್ಟಿಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರ, ಎರಡು ಟ್ರಸ್ಟಿಗ ಳನ್ನು ಉಳಿದ ಟ್ರಸ್ಟಿಗಳು ಸರ್ವಾನುಮತದಿಂದ ಆಯ್ಕೆ ಮಾಡ ಬೇಕೆಂದು ನಿಯಮಗಳನ್ನು ರೂಪಿಸಲಾಗಿದೆ. ಪ್ರಯಾಗದ ಶ್ರೀ ವಾಸುದೇವಾನಂದ ಸರಸ್ವತಿ ಸ್ವಾಮೀಜಿ, ಹರಿದ್ವಾರದ ಯುಗಪುರುಷ ಪರಮಾನಂದಜೀ ಸ್ವಾಮೀಜಿ, ಪುಣೆಯ ಸ್ವಾಮಿ ಶ್ರೀ ಗೋವಿಂದ ದೇವ ಗಿರಿ, ಅಯೋಧ್ಯೆ ನಿರ್ಮೋಹಿ ಅಖಾಡದ ಮಹಂತ ದೇವೇಂದ್ರದಾಸ್ ಅವರಲ್ಲದೆ ಗಣ್ಯರು ಟ್ರಸ್ಟಿಗಳಾಗಿದ್ದಾರೆ. ಪ್ರತಿ 3 ತಿಂಗಳಿ ಗೊಮ್ಮೆ ಸಭೆ ಸೇರಿ ಅಗತ್ಯದ ನಿರ್ಣಯಗಳನ್ನು ತಳೆಯ ಬೇಕೆಂದು ತಿಳಿಸಲಾಗಿದೆ. ಟ್ರಸ್ಟ್ ಅಧ್ಯಕ್ಷರು, ನಿರ್ವಾಹಕ ವಿಶ್ವಸ್ತರನ್ನಾಗಿ ನಿಯೋಜಿತ ಟ್ರಸ್ಟಿಗಳಲ್ಲಿ ಒಬ್ಬರನ್ನು ಸರ್ವೋಚ್ಚ ನ್ಯಾಯಾಲಯ ನೇಮಿಸಲಿದ್ದು ಇಬ್ಬರು ಟ್ರಸ್ಟಿಗಳನ್ನು ಕಾರ್ಯದರ್ಶಿ ಮತ್ತು ಕೋಶಾಧಿಕಾರಿಯಾಗಿ ಟ್ರಸ್ಟಿಗಳು ನೇಮಿಸ ಬೇಕು. ದೇಗುಲ ನಿರ್ಮಾಣ, ನಿರ್ವಹಣೆ, ಪಾರ್ಕಿಂಗ್ ಸ್ಥಳ, ಭದ್ರತೆ, ಹಣಕಾಸು ವ್ಯವಹಾರವೂ ಸೇರಿದಂತೆ ವಿವಿಧ ಚಟು ವಟಿಕೆಗಳನ್ನು ನಡೆಸುವ ಅಧಿಕಾರ ಟ್ರಸ್ಟ್‌ಗೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.