ಗರಿಕೇಮಠ ಶ್ರೀನಿವಾಸ ಕಲ್ಯಾಣೋತ್ಸವ
Team Udayavani, Jan 30, 2020, 5:34 AM IST
ವೈಕುಂಠವೇ ಧರೆಗಿಳಿದಂತೆ ಭಕ್ತಿಪರವಶರಾದ ಭಕ್ತವರ್ಗ; ಗೋವಿಂದ -ಗೋವಿಂದ ನಾಮ ಸಂಕೀರ್ತನೆಯೊಂದಿಗೆ ಶ್ರೀನಿವಾಸ-ಪದ್ಮಾವತಿ ಕಲ್ಯಾಣ
ಕೋಟ: ಸಾೖಬ್ರಕಟ್ಟೆ ಸಮೀಪದ ಗರಿಕೇಮಠ ಅರ್ಕ ಗಣಪತಿ ಶ್ರೀಕ್ಷೇತ್ರದಲ್ಲಿ ಮಂಗಳವಾರ ಹಲವಾರು ವೈಶಿಷ್ಟ್ಯಗಳೊಂದಿಗೆ ಅದ್ಧೂರಿ ಶ್ರೀನಿವಾಸ ಕಲ್ಯಾಣೋತ್ಸವ ಜರಗಿತು.
ಉಡುಪಿ ಜಿಲ್ಲೆಯ ಇತಿಹಾಸದಲ್ಲೇ ಅಪರೂಪ ಎಂಬಂತೆ ನೇರವಾಗಿ ತಿರುಮಲ ತಿರುಪತಿ ದೇವಸ್ಥಾನ (ಟಿ.ಟಿ.ಡಿ.) ಧಾರ್ಮಿಕ ಉಸ್ತುವಾರಿಯಲ್ಲಿ ಕಲ್ಯಾಣೋತ್ಸವದ ಧಾರ್ಮಿಕ ಕಾರ್ಯಕ್ರಮ ನೆರವೇರಿದ್ದು ವಿಶೇಷವಾಗಿತ್ತು.
ಉತ್ಸವ ಮೂರ್ತಿ ಹಾಗೂ ಪೂಜಾ ಪರಿಕರಗಳು ಪೌರೋಹಿತ್ಯ ಸೇರಿದಂತೆ ಎಲ್ಲ ಧಾರ್ಮಿಕ ವಿಧಿ ವಿಧಾನಗಳು ತಿರುಪತಿ ತಿರುಮಲ ದೇವಸ್ಥಾನದಿಂದಲೇ ನೆರವೇರಿತು.ಹಾಗೂ ಕಾರ್ಯಕ್ರಮದ ಪ್ರಯುಕ್ತ ವಿಶೇಷ ಪುಷ್ಪಾಲಂಕಾರ, ಕಿಲೋ ಮೀಟರ್ ಗಟ್ಟಲೆ ಬಂಟಿಂಗ್ಸ್, ವಿದ್ಯುತ್ ದೀಪಾಲಂಕಾರ ಗಮನಸೆಳೆಯಿತು. ಒಟ್ಟಾರೆ ಗರೀಕೆಮಠ ಪ್ರದೇಶದಲ್ಲಿ ಹಬ್ಬದ ವಾತಾವರಣ ಕಲೆ ಗಟ್ಟಿತ್ತು.
ಕಾರ್ಯಕ್ರಮದ ಅನಂತರ ದೇವರ ದರ್ಶನ ಹಾಗೂ ಪ್ರಸಾದ ವಿತರಣೆಗೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು. ನೂರಾರು ಸ್ವಯಂಸೇವಕರು ಕಾರ್ಯಕ್ರಮದ ಯಶಸ್ಸಿಗೆ ಸಾಕಷ್ಟು ಶ್ರಮಿಸಿದರು.
ಸ್ವತ್ಛತೆಯನ್ನೂ ಕಾಪಾಡಿಕೊಂಡು ಬಂದಿದ್ದರು.ಈ ಸಂದರ್ಭ ಉಪಸ್ಥಿತರಿದ್ದ ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ತೀರ್ಥ ಶ್ರೀಪಾದಂಗಳವರು ಭಕ್ತಾದಿಗಳನ್ನು ಆಶೀರ್ವದಿಸಿದರು.ಕಾರ್ಯಕ್ರಮದ ಸಂಘಟಕ ಗರೀಕೆಮಠ ಕ್ಷೇತ್ರದ ಮುಖ್ಯಸ್ಥ ಜಿ.ರಾಮಪ್ರಸಾದ್ ಭಾಗವಹಿಸಿದ್ದರು.
ನಾಮಸಂಕೀರ್ತನೆ
ಸಂಜೆ ನಡೆದ ಕಲ್ಯಾಣೋತ್ಸವದಲ್ಲಿ ಸುಮಾರು 12 ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಅಷ್ಟೂ ಮಂದಿ ಭಕ್ತಾದಿಗಳು ಆರಾಮವಾಗಿ ಕುಳಿತು ಕಾರ್ಯಕ್ರಮ ವೀಕ್ಷಿಸಲು ವಿಶಾಲವಾದ ಚಪ್ಪರ ವ್ಯವಸ್ಥೆ ಮಾಡಲಾಗಿತ್ತು. ಕಲ್ಯಾಣೋತ್ಸವ ಆರಂಭವಾಗುತ್ತಿದ್ದಂತೆ ಭಕ್ತಾಧಿಗಳು ವೆಂಕಟೇಶ್ವರನ ನಾಮ ಸಂಕೀರ್ತನೆಯಲ್ಲಿ ತೊಡಗಿದರು ಹಾಗೂ ಮಾಂಗಲ್ಯಧಾರಣೆ, ಧಾರೆ ಎರೆಯುವುದು ಮುಂತಾದ ಶಾಸ್ತ್ರದ ಸಂದರ್ಭ ಗೋವಿಂದ-ಗೋವಿಂದ ಸಂಕೀರ್ತನೆ ಮುಗಿಲು ಮುಟ್ಟಿತು ಹಾಗೂ ಭಕ್ತಾದಿಗಳು ವೈಕುಂಠವೇ ಧರೆಗಿಳಿದಂತೆ ಭಾವಪರವಶರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.