ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು
Team Udayavani, Mar 25, 2023, 7:50 AM IST
ಉಡುಪಿ: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳು ಮಾ. 31ರಿಂದ ಎ. 15ರ ವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 13,753 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 55 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಅಗತ್ಯವಿರುವ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಸೂಚನೆ ನೀಡಿದರು.
ರಜತಾದ್ರಿಯ ಜಿ.ಪಂ.ನ ಡಾ| ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷೆಗೆ 7,185 ಬಾಲಕರು ಮತ್ತು 6,568 ಬಾಲಕಿಯರು ಸೇರಿದಂತೆ ಒಟ್ಟು 13,753 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಬೈಂದೂರಿನಲ್ಲಿ 8, ಕುಂದಾಪುರದಲ್ಲಿ 9, ಕಾರ್ಕಳದಲ್ಲಿ 10, ಬ್ರಹ್ಮಾವರದಲ್ಲಿ 12 ಹಾಗೂ ಉಡುಪಿಯಲ್ಲಿ 16 ಸೇರಿದಂತೆ ಒಟ್ಟು 55 ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಎಂದರು.
ಎಲೆಕ್ಟ್ರಾನಿಕ್ ವಸ್ತುಗಳು ನಿಷೇಧ
ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬಂದಿ ಯಾವುದೇ ರೀತಿಯ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾಹಿತಿ ನೀಡುವಂತೆ ಮತ್ತು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನವೇ ಈ ಬಗ್ಗೆ ಪರಿಶೀಲಿಸುವಂತೆ ತಿಳಿಸಿದ ಅವರು, ಪರೀಕ್ಷಾ ಕೇಂದ್ರಗಳಿಗೆ ಕಸ್ಟೋಡಿಯನ್‌ಗಳು, ಸ್ಥಾನಿಕ ಜಾಗೃತ ದಳ, ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ನಿಯೋಜಿಸುವಂತೆ ಸೂಚನೆ ನೀಡಿದರು.
ಮೂಲಕಸೌಕರ್ಯಕ್ಕೆ ಆದ್ಯತೆ
ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳಿಗೆ ಎಲ್ಲ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಗ್ರಾಮೀಣ ಪ್ರದೇಶದಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಬಸ್‌ಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು.
ಆರೋಗ್ಯ ಸಿಬಂದಿ
ಪರೀಕ್ಷಾ ಕೇಂದ್ರಗಳಲ್ಲಿ ಪ್ರಥಮ ಚಿಕಿತ್ಸಾ ಕಿಟ್‌ನೊಂದಿಗೆ ಆರೋಗ್ಯ ಸಿಬಂದಿಯನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.
ಪೊಲೀಸ್ ಭದ್ರತೆ
ಪ್ರಶ್ನೆಪತ್ರಿಕೆ ಬಂಡಲ್‌ಗಳನ್ನು ಖಜಾನೆಯಿಂದ ಪಡೆಯುವಾಗ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅವುಗಳನ್ನು ತೆರೆಯುವಾಗ ವೀಡಿಯೋ ಚಿತ್ರೀಕರಣ ಮಾಡುವಂತೆ ಮತ್ತು ಪ್ರಶ್ನೆಪತ್ರಿಕೆ ಹಾಗೂ ಉತ್ತರಪತ್ರಿಕೆ ಸಾಗಾಟ ವಾಹನ, ಪರೀಕ್ಷಾ ಕೇಂದ್ರ ಮತ್ತು ಭದ್ರತಾ ಕೊಠಡಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ಪಡೆಯುವಂತೆ ಹಾಗೂ ಎಲ್ಲ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆಪತ್ರಿಕೆಗಳು ತಲುಪುವಂತೆ ಅಗತ್ಯವಿರುವ ವಾಹನ ವ್ಯವಸ್ಥೆ, ಮಾರ್ಗಾಧಿಕಾರಿಗಳನ್ನು ನೇಮಿಸುವಂತೆ ತಿಳಿಸಿದರು.
ಕಠಿನ ಕ್ರಮ
ಪರೀಕ್ಷೆಯ ಅವಧಿಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಗೊಂದಲ ಕ್ಕೀಡು ಮಾಡುವಂತಹ ಸುಳ್ಳು ಸುದ್ದಿ ಗಳನ್ನು ಹರಡುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಡಿಡಿಪಿಐ ಗಣಪತಿ, ಸಹಾಯಕ ಖಜಾನಾಧಿಕಾರಿ ರೂಪಶ್ರೀ, ಎಸೆಸೆಲ್ಸಿ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ಸಿಪ್ರಿಯನ್ ಮೊಂತೇರೊ ಹಾಗೂ ಪರೀûಾ ಕಾರ್ಯಕ್ಕೆ ನಿಯೋಜಿಸುವ ಅಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ
ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಮತ್ತು ವಾಪಾಸ್ ಮರಳಲು ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಇದೆ. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.