ಪರೀಕ್ಷೆ ಬರೆಯಲು ಅಂಗವೈಕಲ್ಯ ಅಡ್ಡಿಯಲ್ಲ 


Team Udayavani, Mar 24, 2018, 6:30 AM IST

230318uce2a.jpg

ಉಡುಪಿ:  ಈ ಬಾರಿ ಎಸೆಸೆಲ್ಸಿ ಪರೀಕ್ಷೆಗೆ ಖಾಸಗಿಯಾಗಿ ಹಾಜರಾಗಿ ಭವಿಷ್ಯ ಗಟ್ಟಿಗೊಳಿಸಲು 11 ಮಂದಿ ಅಂಗವಿಕಲ ವಿದ್ಯಾರ್ಥಿಗಳೂ ಮುಂದಾಗಿದ್ದಾರೆ. 

ಉಡುಪಿ ಬಸ್‌ ನಿಲ್ದಾಣದ ಬಳಿಕ ಸರಕಾರಿ ಶಾಲೆಗೆ ಇವರು ಹಾಜರಾಗಿದ್ದು, ಛಲದಿಂದ ಪರೀಕ್ಷೆ ಬರೆಯುತ್ತಿದ್ದಾರೆ. ಕಾರ್ಕಳ ತಾಲೂಕಿನ ಪರಪ್ಪುವಿನ ವಿಜೇತ ವಿಶೇಷ ಮಕ್ಕಳ ವಸತಿ ಶಾಲೆಯ ಅಂಧ ವಿದ್ಯಾರ್ಥಿ ಶಿವಾನಂದ (27) ಶ್ರವಣದೋಷವಿದ್ದ ಅಂಕಿತಾ, ಬುದ್ಧಿಮಾಂದ್ಯ ಸಮಸ್ಯೆ ಇರುವ ರಾಘವೇಂದ್ರ ಮತ್ತು ಚಿರಂಜನ್‌ ಹಾಗೂ ಚೇತನಾ ವಿಶೇಷ ಮಕ್ಕಳ ಶಾಲೆಯ ಅಂಧ ವಿದ್ಯಾರ್ಥಿ ಮಂಜುನಾಥ, ವಿಶೇಷ ಮಕ್ಕಳಾದ ರವಿ, ಶ್ರೇಯಸ್‌, ಆಶ್ರಯ್‌ ಮತ್ತು ಸನತ್‌. ಕಾರ್ಕಳದ ಖಾಸಗಿ ಶಾಲೆಯೊಂದರ ಅಭಿತ್‌ ಮತ್ತು ಇನ್ನೋರ್ವ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದಾರೆ.
 
ಶಿಕ್ಷಕರ ಸುಪರ್ದಿಯಲ್ಲಿ…
ವಿಶೇಷ ಮಕ್ಕಳನ್ನು ಪರೀಕ್ಷೆಗೆ ಕರೆದುಕೊಂಡು ಬಂದು, ಮುಗಿದ ಬಳಿಕ ಅವರನ್ನು ಕರೆದುಕೊಂಡು ಹೋಗುವ ಕರ್ತವ್ಯಕ್ಕೆ ಅವರ ಶಿಕ್ಷಕರು, ಹೆತ್ತವರು ಬೆಂಗಾವಲಾಗಿದ್ದರು. ವಿಜೇತ ವಿಶೇಷ ಮಕ್ಕಳ ಶಾಲೆಯ ಮುಖ್ಯೋ ಪಾಧ್ಯಾಯಿನಿ ಕಾಂತಿ ಹರೀಶ್‌, ಶಿಕ್ಷಕಿ ಶ್ವೇತಾ. ಚೇತನಾ ವಿಶೇಷ ಮಕ್ಕಳ ಶಾಲೆಯ ಶಿಕ್ಷಕಿಯರಾದ ಸಂಧ್ಯಾ, ಮಂಜುಳಾ ಅವರು ಮಕ್ಕಳನ್ನು ಪರೀಕ್ಷೆಗೆ ಬಸ್ಸಿನಲ್ಲಿ ಕರೆದುಕೊಂಡು ಬಂದಿದ್ದರು. ಹೆತ್ತವರು, ಶಿಕ್ಷಕಿಯರು ಪರೀಕ್ಷೆ ಮುಕ್ತಾಯವರೆಗೂ ಶಾಲೆಯ ಅಂಗಳದಲ್ಲೇ ಕುಳಿತುಕೊಂಡಿದ್ದರು.
  
ಮಂಗಳಮುಖೀಯೂ ಹಾಜರ್‌ 
ಅಂಧ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಬರೆಯಲು ಬೇರೊಬ್ಬರಿಗೆ ಅವಕಾಶ ಕಲ್ಪಿಸ ಲಾಗಿದ್ದು, ಅಭಿತ್‌ ಪರ ಹರ್ಷ ಹಾಗೂ ಶಿವಾನಂದ ಅವರ ಪರ ಅವಿನಾಶ್‌ ಕಾಮತ್‌ ಪರೀಕ್ಷೆ ಬರೆದಿದ್ದಾರೆ. ಮಂಗಳಮುಖೀ ನಗ್ಮಾ ಅವರೂ ಪರೀಕ್ಷೆ ಬರೆದಿದ್ದಾರೆ.  

ಪಠ್ಯೇತರ ವಿಷಯದಲ್ಲಿ ಮುಂದು 
ಅಂಧ ವಿದ್ಯಾರ್ಥಿಗಳಾದ ಮಂಜುನಾಥ, ಶಿವಾನಂದ್‌ ಉತ್ತಮ ಹಾಡುಗಾರರು. ರಾಘವೇಂದ್ರ ಫ‌ುಟ್‌ಬಾಲ್‌ನಲ್ಲಿ ಮತ್ತು ಯೂನಿಫೈಡ್‌ ಟೀಮ್‌ ಗೇಮ್‌ನಲ್ಲಿ ರಾಷ್ಟ್ರಮಟ್ಟ,  ಶಟಲ್‌ ಬ್ಯಾಡ್ಮಿಂಟನ್‌ ಕ್ರೀಡೆಯಲ್ಲಿ ರಾಜ್ಯಮಟ್ಟದ ಆಟಗಾರ. ಚಿರಂಜನ್‌ ಅವರು ಸೈಕ್ಲಿಂಗ್‌ನಲ್ಲಿ ರಾಜ್ಯಮಟ್ಟದಲ್ಲಿ ಪದಕ ಪಡೆದಿದ್ದಾರೆ. ಆಶ್ರಯ್‌ ಮತ್ತು ಸನತ್‌ ಪೈಂಟಿಂಗ್‌ ಕಲಾವಿದರಾಗಿದ್ದಾರೆ. 

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.