ಎಸೆಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ಧತೆ

ವಾರಾಂತ್ಯದಲ್ಲಿ ಪಠ್ಯಾಧಾರಿತ ಕ್ವಿಜ್‌, ಪರೀಕ್ಷೆ ವೇಳೆ ಶಾಲೆಯಲ್ಲೇ ಪುನರ್‌ ಮನನ

Team Udayavani, Jan 11, 2023, 7:35 AM IST

ಎಸೆಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ಧತೆ

ಉಡುಪಿ: ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಫ‌ಲಿತಾಂಶ ಉನ್ನತೀಕರಿಸಿಕೊಳ್ಳಲು ಸಿದ್ಧತೆಯೂ ಅಷ್ಟೇ ವ್ಯವಸ್ಥಿತವಾಗಿ ನಡೆಯುತ್ತಿದೆ. ಉಡುಪಿ ಜಿಲ್ಲೆಯ ವಾರಕ್ಕೊಮ್ಮೆ ತರಗತಿಯಲ್ಲಿ ಪಠ್ಯಾಧಾರಿತ ರಸಪ್ರಶ್ನೆ ಆಯೋಜಿಸುವ ಮೂಲಕ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಎಸೆಸೆಲ್ಸಿ ವಿದ್ಯಾರ್ಥಿಗಳು ವಾರಪೂರ್ತಿ ಕಲಿತ ಪಾಠವನ್ನು ಪರೀಕ್ಷೆಯಲ್ಲಿ ಸುಲಭವಾಗಿ ನೆನಪಿಟ್ಟುಕೊಳ್ಳಲು ಅನುಕೂಲ ವಾಗುವಂತೆ ಆಯಾ ವಾರದ ಅಂತ್ಯದಲ್ಲಿ ಪಠ್ಯಾಧಾರಿತವಾದ ರಸಪ್ರಶ್ನೆಗಳನ್ನು ವಿಷಯ ಶಿಕ್ಷಕರು ಸಿದ್ಧಪಡಿಸಿ, ಮಕ್ಕಳಿಗೆ ಕೇಳುತ್ತಾರೆ. ಈ ಮೂಲಕ ವಿಷಯವನ್ನು ಸುಲಭವಾಗಿ ಅರ್ಥೈಸಲು ಕ್ರಮ ಕೈಗೊಳ್ಳಲಾಗಿದೆ.

ಮನೆ ಮನೆ ಭೇಟಿ
ಪ್ರತೀ ವರ್ಷ ಶಾಲಾ ಶಿಕ್ಷಕರು ಮತ್ತು ಮುಖ್ಯಶಿಕ್ಷಕರು ವಿದ್ಯಾರ್ಥಿಗಳ ಮನೆ ಮನೆ ಭೇಟಿ ಮಾಡುತ್ತಿದ್ದರು. ಈ ಬಾರಿ ಅದರ ಮುಂದುವರಿದ ಭಾಗವಾಗಿ ಡಿಡಿಪಿಐ ಸಹಿತವಾಗಿ ಬಿಇಒ, ಸಿಆರ್‌ಪಿ, ಬಿಆರ್‌ಪಿ ಸಹಿತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೂಡ ವಿದ್ಯಾರ್ಥಿಗಳ ಮನೆ ಮನೆ ಭೇಟಿ ಮಾಡಲಿದ್ದಾರೆ. ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳ ಮಾಹಿತಿ ನೀಡುವ ಜತೆಗೆ ಪಾಲಕ, ಪೋಷಕರು ಪರೀಕ್ಷೆ ಸಂದರ್ಭದಲ್ಲಿ ಹೇಗಿರಬೇಕು ಎಂಬುದರ ಮಾಹಿತಿ ನೀಡಲಿದ್ದಾರೆ.

ವಿಶೇಷ ಬೋಧನೆ
ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಒಂದು ವಿಷಯದಿಂದ ಇನ್ನೊಂದು ವಿಷಯಕ್ಕೆ ಮಧ್ಯದಲ್ಲಿ ಒಂದು ಅಥವಾ ಎರಡು ದಿನ ರಜೆ ಇರುತ್ತದೆ. ಈ ರಜಾ ದಿನಗಳನ್ನು ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಆ ದಿನದಂದು ಶಾಲೆಗೆ ವಿದ್ಯಾರ್ಥಿಗಳನ್ನು ಕರೆಸಿ, ಬೆಳಗ್ಗಿನಿಂದ ಸಂಜೆಯ ವರೆಗೂ ಆಯಾ ವಿಷಯ ಶಿಕ್ಷಕರ ಮೂಲಕ ಪರೀಕ್ಷೆಗೆ ಸಂಬಂಧಿಸಿದ ಅಂತಿಮ ಹಂತದ ಪುನರ್‌ ಮನನ ಮಾಡಲಿದ್ದಾರೆ. ಮಕ್ಕಳಿಗೆ ಮಧ್ಯಾಹ್ನದ ಊಟವೂ ಶಾಲೆಯಲ್ಲೆ ವ್ಯವಸ್ಥೆಯಾಗಲಿದೆ. ಜಿಲ್ಲೆಯ ಮಟ್ಟಿಗೆ ಇದೊಂದು ವಿಶೇಷ ಪ್ರಯತ್ನವೂ ಆಗಲಿದೆ.

ತಾಯಂದಿರ ಸಭೆ
ಮಕ್ಕಳ ವಿದ್ಯಾಭ್ಯಾಸದ ಪೂರ್ಣ ಮಾಹಿತಿಯನ್ನು ತಾಯಿಗೆ ನೀಡಬೇಕು ಮತ್ತು ಪರೀಕ್ಷಾ ಸಂದರ್ಭದಲ್ಲಿ ಮಕ್ಕಳು ಯಾವ ರೀತಿ ಅಧ್ಯಯನ ಮಾಡಬೇಕು, ಮನೆಯವರ ಸಹಕಾರ ಹೇಗಿರಬೇಕು ಎಂಬುದನ್ನು ತಿಳಿಸಲು ಪ್ರತಿ ಪ್ರೌಢಶಾಲೆಯನ್ನು ತಿಂಗಳ ಕೊನೆಯಲ್ಲಿ ಮಕ್ಕಳ ತಾಯಂದಿರ ವಿಶೇಷ ಸಭೆ ನಡೆಸಲಾಗುತ್ತದೆ.

ಅಣಕು ಪರೀಕ್ಷೆ
ವಾರ್ಷಿಕ ಪರೀಕ್ಷೆಗೂ ಪೂರ್ವದಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ. ಇದರ ಮಧ್ಯದಲ್ಲೇ ಜಿಲ್ಲೆಯಲ್ಲೊಂದು ಮೊಕ್‌ ಟೆಸ್ಟ್‌(ಅಣಕು ಪರೀಕ್ಷೆ) ನಡೆಸಲು ಇಲಾಖೆಯಿಂದ ಯೋಚನೆ ನಡೆಯುತ್ತಿದೆ. ವಾರ್ಷಿಕ ಪರೀಕ್ಷೆಯ ಮಾದರಿಯಲ್ಲೇ ಇದನ್ನು ನಡೆಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯ ದೂರಮಾಡುವುದು ಇದರ ಉದ್ದೇಶವಾಗಿದೆ.

ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಈ ಹಿಂದಿನ ವರ್ಷಗಳಲ್ಲಿ ತೆಗೆದುಕೊಂಡಿರುವ ಉತ್ತಮ ವಿಧಾನಗಳನ್ನು ಈ ವರ್ಷವೂ ಮುಂದುರಿಸುವ ಜತೆಗೆ ಕೆಲವೊಂದು ಹೊಸ ಉಪಕ್ರಮಗಳನ್ನು ಜೋಡಿಸಿಕೊಳ್ಳುತ್ತಿದ್ದೇವೆ. ತರಗತಿಯಲ್ಲಿ ವಿದ್ಯಾರ್ಥಿಗಳ ಗುಂಪು ರಚನೆ, ಕಲಿಕೆಯ ಆಧಾರದಲ್ಲಿ ವಿಶೇಷ ಆದ್ಯತೆ ನೀಡುವುದು, ವಿಶೇಷ ತರಗತಿ ಇತ್ಯಾದಿಗಳು ನಿರಂತರವಾಗಿ ನಡೆಯುತ್ತಿರುತ್ತವೆ.
– ಕೆ. ಗಣಪತಿ, ಸುಧಾಕರ್‌, ಡಿಡಿಪಿಐ, ಉಡುಪಿ ಮತ್ತು ದ.ಕ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Geetha-yajna-KanchiShree

Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ

MGM–Udupi-1

Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.