ಉಡುಪಿ: ಎಸೆಸೆಲ್ಸಿ ಫಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ
Team Udayavani, Oct 7, 2022, 2:34 AM IST
ಉಡುಪಿ: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಗೆ ಜಿಲ್ಲೆಯ ವಿದ್ಯಾರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಳಿಸುವ ಕಾರ್ಯ ಈಗಾಗಲೆ ಆರಂಭವಾಗಿದೆ.
ಜಿ.ಪಂ., ಶಾಲಾ ಶಿಕ್ಷಣ ಮತ್ತು ಸಾಕ್ಷ ರತಾ ಇಲಾಖೆಯು ಜಂಟಿಯಾಗಿ ಕೆಲವು ಕಾರ್ಯ ಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗು ತ್ತಿದೆ. ಪ್ರತೀ ವರ್ಷ ಎಸೆಸೆಲ್ಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಅಗ್ರಶ್ರೇಣಿಯಲ್ಲಿರುತ್ತದೆ. ಅದೇ ಗುಣಮಟ್ಟವನ್ನು ಕಾಯ್ದುಕೊಂಡು, ಫಲಿತಾಂಶ ವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.
ಶಾಲೆಗಳಿಗೆ ಅ. 16ರವರೆಗೂ ಮಧ್ಯಾಂತರ ರಜೆ ನೀಡಲಾಗಿದೆ. ಈ ಅವಧಿಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸ ಲಾಗುತ್ತಿದೆ. ಎಸೆಸೆಲ್ಸಿ ವಿದ್ಯಾರ್ಥಿಗಳನ್ನು ವಿಶೇಷ ರೀತಿಯಲ್ಲಿ ಪರೀಕ್ಷೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಆನ್‌ಲೈನ್ ಹಾಗೂ ಆಫ್ಲೈನ್ ವ್ಯವಸ್ಥೆಯ ಮೂಲಕ ತರಬೇತಿಯನ್ನು ನೀಡಲಾಗಿದೆ. ಪ್ರತೀ ಶಾಲೆಯಲ್ಲೂ ವಿನೂತನ ರೀತಿಯ ಪ್ರಯೋಗಳನ್ನು ಮಾಡುತ್ತಿದ್ದಾರೆ. ಎಸೆಸೆಲ್ಸಿ ವಿದ್ಯಾರ್ಥಿಗಳ ಗುಂಪು ಅಧ್ಯಯನಕ್ಕೂ ಉತ್ತೇಜಿಸಲಾಗುತ್ತಿದೆ. ಪ್ರತೀ ಶಾಲೆಯಿಂದಲೂ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಶಿಕ್ಷಕರ ಸಂಖ್ಯೆಗೆ ಅನುಗುಣವಾಗಿ ತಂಡವನ್ನು ರಚಿಸಿ ಆ ತಂಡಕ್ಕೆ ಶಿಕ್ಷಕರೊಬ್ಬರನ್ನು ನಿಯೋಜಿಸಿ, ಅವರ ಮೂಲಕ ಆ ಎಲ್ಲ ವಿದ್ಯಾರ್ಥಿಗಳ ಅಧ್ಯಯನ ನಿಗಾ ವಹಿಸಲಾಗುತ್ತಿದೆ.
ಇನ್ನು ಕೆಲವು ಶಾಲೆಗಳಲ್ಲಿ ಉತ್ತಮ ಶ್ರೇಣಿ ಯಲ್ಲಿ ಉತ್ತೀರ್ಣರಾಗಬಲ್ಲ, ಉತ್ತೀರ್ಣ ಆಗಬಲ್ಲ ಹಾಗೂ ಅಧ್ಯಯನದಲ್ಲಿ ತುಂಬ ಹಿಂದಿರುವ ವಿದ್ಯಾರ್ಥಿಗಳು ಎಂದು ಮೂರು ವಿಂಗಡನೆ ಮಾಡಿಕೊಳ್ಳಲಾಗಿದೆ. ಅಧ್ಯಯನದಲ್ಲಿ ಹಿಂದಿರುವ ವಿದ್ಯಾರ್ಥಿಗಳ ಮೇಲೆ ವಿಶೇಷ ನಿಗಾ ಇರಿಸಿ ಯಾವ ವಿಷಯದಲ್ಲಿ ಅವರು ಹಿಂದಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ವಿಶೇಷ ತರಗತಿಗಳ ಮೂಲಕ ತರಬೇತಿ ನೀಡಲಾಗುತ್ತಿದೆ.
ಇನ್ನು ಕೆಲವೊಂದು ಶಾಲೆಗಳಲ್ಲಿ ಗಣಿತ, ಇಂಗ್ಲಿಷ್ ಹಾಗೂ ವಿಜ್ಞಾನ ತರಗತಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಪಾಲಕ, ಪೋಷಕರಿಗೆ ಮಕ್ಕಳ ಓದಿನ ಬಗ್ಗೆ ನಿರಂತರ ಸಂದೇಶ ರವಾನೆ ಮಾಡುವುದು. ಹೀಗೆ ವಿಭಿನ್ನ ರೀತಿಯ ಪ್ರಯತ್ನಗಳನ್ನು ಶಾಲೆಗಳಲ್ಲಿ ನಡೆಸಲಾಗುತ್ತಿದೆ. ಇದರ ಜತೆಗೆ ಜಿ.ಪಂ.ನಿಂದಲೂ ಕೆಲವು ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಪ್ರತ್ಯೇಕ ವೇಳಾಪಟ್ಟಿ
ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ ಸಹಿತ ವಿವಿಧ ಇಲಾ ಖೆಯ ಹಾಸ್ಟೆಲ್‌ಗಳಲ್ಲೂ ಎಸೆಸೆಲ್ಸಿ ವಿದ್ಯಾರ್ಥಿ ಗಳನ್ನು ವಿಶೇಷ ರೀತಿಯಲ್ಲಿ ಪರೀಕ್ಷೆಗೆ ಸಜ್ಜುಗೊಳಿಸಲಾಗುತ್ತಿದೆ. ಬೆಳಗ್ಗೆ ಬೇಗ ಎದ್ದು ಓದಲು ಹಾಸ್ಟೆಲ್‌ಗಳಲ್ಲಿ ಸೂಚನೆ ನೀಡಲಾಗುತ್ತಿದೆ. ಹಾಸ್ಟೆಲ್‌ನಲ್ಲೇ ಪ್ರತ್ಯೇಕ ವೇಳಾಪಟ್ಟಿ ಹಾಕಿಕೊಂಡು ಓದಲು ಸೂಚನೆ ನೀಡಲಾಗಿದೆ. ನಿಲಯ ಪಾಲಕರು ಎಸೆಸೆಲ್ಸಿ ವಿದ್ಯಾರ್ಥಿಗಳ ಓದಿನ ಮೇಲೂ ವಿಶೇಷ ಗಮನ ಹರಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.