ಎಸೆಸೆಲ್ಸಿ ವಿದ್ಯಾರ್ಥಿಗಳ ಕಾಡುತ್ತಿದೆ ಪಠ್ಯಪುಸ್ತಕಗಳ ಕೊರತೆ


Team Udayavani, Jun 26, 2018, 6:00 AM IST

test-book-s.jpg

ವಿಶೇಷ ವರದಿ- ಕಾಪು : 2018-19ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳಾಗುತ್ತಾ ಬಂದರೂ ಗ್ರಾಮೀಣ ಭಾಗದ ಅನುದಾನಿತ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಇನ್ನೂ ಕೂಡಾ ಕೆಲವು ಪಠ್ಯ ಪುಸ್ತಕಗಳು ಲಭ್ಯವಾಗದೇ ಇರುವುದು ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಆತಂಕ ಮೂಡಿಸಿದೆ.

10ನೇ ತರಗತಿಯ ಗಣಿತ ಭಾಗ-1, ಭಾಗ-2 ಮತ್ತು ಸಮಾಜ ವಿಜ್ಞಾನ ಭಾಗ-1 ಪಠ್ಯ ಪುಸ್ತಕ ಹಾಗೂ ಭಾಷಾ ಪಠ್ಯ ಪುಸ್ತಕಗಳಾದ ಸಂಸ್ಕೃತ, ಹಿಂದಿ, ಕನ್ನಡ ಮತ್ತು ಉರ್ದು ಪುಸ್ತಕಗಳು ಇನ್ನೂ ಕೂಡಾ ಲಭ್ಯವಾಗಿಲ್ಲ. ಇದರಲ್ಲಿ ಗಣಿತ, ಸಮಾಜ ವಿಜ್ಞಾನ ಮತ್ತು ಸಂಸ್ಕೃತ ಪುಸ್ತಕಗಳು ಒಂದೂ ಲಭ್ಯವಾಗದೇ ಇದ್ದು, ಕೆಲವೆಡೆಗಳಲ್ಲಿ ಶಿಕ್ಷಕರು ಅಂತರ್ಜಾಲದಿಂದ ಪಠ್ಯವನ್ನು ಪಡೆದು ಪಾಠ ಮಾಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

ಅನುದಾನಿತ / ಖಾಸಗಿ ಶಾಲೆಗಳಿಗೆ ಹೆಚ್ಚಿನ ತೊಂದರೆ
ಎಸೆಸೆಲ್ಸಿ ತರಗತಿ ನಡೆಸಲು ಮುಖ್ಯವಾಗಿ ಬೇಕಿರುವ ಇಂಗ್ಲಿಷ್‌, ಉರ್ದು, ಹಿಂದಿ, ಗಣಿತ ಪಠ್ಯ ಪುಸ್ತಕಗಳ ಕೊರತೆ ಹೆಚ್ಚಿನ ಕಡೆಗಳಲ್ಲಿ ಕಂಡು ಬಂದಿದೆ. ಇದರಲ್ಲಿ ಕೆಲವೊಂದು ಸರಕಾರಿ ಶಾಲೆಗಳಿಗೆ ಬಹುತೇಕ ಪಠ್ಯ ಪುಸ್ತಕಗಳು ಪೂರೈಕೆಯಾಗಿದ್ದರೆ, ಹೆಚ್ಚಿನ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಒಂದೂ ಪುಸ್ತಕಗಳು ವಿತರಣೆಯಾಗಿಲ್ಲ ಎನ್ನುವುದು ವಿಷಾದನೀಯವಾಗಿದೆ.

ಕೆಲವು ಶಾಲೆಗಳಿಗೆ ಕನಿಷ್ಠ ಸಂಖ್ಯೆಯ ಪಠ್ಯಪುಸ್ತಕಗಳೂ ಪೂರೈಕೆಯಾಗದೇ ಇರುವುದರಿಂದ ಶಾಲಾ ಮುಖ್ಯಸ್ಥರಿಗೆ ಪಠ್ಯ ಪುಸ್ತಕಕ್ಕಾಗಿ ಸಂಬಂಧಪಟ್ಟ ನೋಡಲ್‌ ಕೇಂದ್ರದಲ್ಲಿ ವಿಚಾರಣೆ ನಡೆಸುವುದೇ ದೊಡ್ಡ ಕೆಲಸವಾಗಿ ಬಿಟ್ಟಿದೆ. ಶಿಕ್ಷಣ ಇಲಾಖೆ ಮಾತ್ರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸದೇ ಇರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.

ಎಲ್ಲಿ ಹೋದವು ಪಠ್ಯ ಪುಸ್ತಕಗಳು ? 
ರಾಜ್ಯದ ಶೇ. 90ರಷ್ಟು ಪಠ್ಯ ಪುಸ್ತಕಗಳು ಲಭ್ಯವಿದೆ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡುವ ಸಚಿವರು, ಶೈಕ್ಷಣಿಕ ವರ್ಷಾರಂಭಕ್ಕೆ ಮೊದಲೇ ಪಠ್ಯ ಪುಸ್ತಕಗಳನ್ನು ಪೂರೈಸುವುದಾಗಿ ಭರವಸೆ ನೀಡಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗಳು ಇನ್ನೂ ಕೂಡಾ ಕೆಲವು ಪಠ್ಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಪೂರೈಸಿಲ್ಲ. ಹಾಗಾದರೆ ಎಲ್ಲಿ ಹೋದವು ಈ ಪಠ್ಯ ಪುಸ್ತಕಗಳು ? ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿ ಬರಲಾರಂಭಿಸಿದೆ.

ಶಿಕ್ಷಕರಿಗೇ ಲಭ್ಯವಿಲ್ಲದ ಪಠ್ಯಪುಸ್ತಕ 
ಈ ಬಾರಿ 10ನೇ ತರಗತಿಗೆ ಸಿಬಿಎಸ್‌ಇ ಪಠ್ಯಕ್ರಮ ಅಳವಡಿಕೆಯಾಗಿದೆ. ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪಠ್ಯ ಪುಸ್ತಕವೂ ಸಂಪೂರ್ಣ ಹೊಸತು. 10ನೇ ತರಗತಿಯ ಗಣಿತ ಭಾಗ-1, ಭಾಗ-2 ಮತ್ತು ಸಮಾಜ ವಿಜ್ಞಾನ ಭಾಗ-1 ಪಠ್ಯ ಪುಸ್ತಕ ಹಾಗೂ ಭಾಷಾ ಪಠ್ಯ ಪುಸ್ತಕಗಳು ಉಡುಪಿ ತಾಲೂಕಿನ ಹೆಚ್ಚಿನ ಶಾಲೆಗಳಿಗೆ ಬಂದಿಲ್ಲ. ಹೆಚ್ಚಿನ ಶಾಲೆಗಳಲ್ಲಿ 8 ಮತ್ತು 9ನೇ ತರಗತಿಯ ಪಠ್ಯ ಪುಸ್ತಕಗಳು ಶೇ. 60 ರಷ್ಟು ಮಾತ್ರ ಪೂರೈಕೆಯಾಗಿದ್ದು, ಇದರಿಂದ ಹೆಚ್ಚಿನ ತೊಂದರೆ ಎದುರಿಸುವಂತಾಗಿದೆ ಎನ್ನುತ್ತಾರೆ ಶಿಕ್ಷಕರು.

ಶೀಘ್ರ ಸಮಸ್ಯೆ ಪರಿಹಾರಕ್ಕೆ ಯತ್ನ 
ಉಡುಪಿ ವಲಯದಲ್ಲಿ ಶೇ. 86ರಷ್ಟು ಪುಸ್ತಕಗಳು ಪೂರೈಕೆಯಾಗಿದೆ. ಪುಸ್ತಕಗಳು ಬಂದಂತೆ ಹಂತ ಹಂತವಾಗಿ ಶಾಲೆಗಳಿಗೆ ವಿತರಣೆ ಮಾಡಲಾಗಿದೆ. ಭಾಷಾ ಪಠ್ಯ ಕ್ರಮಗಳು, ಎಸೆಸೆಲ್ಸಿಯ ಗಣಿತ ಮತ್ತು ವಿಜ್ಞಾನ ಪುಸ್ತಕಗಳ ಕೊರತೆ ಕಾಡುತ್ತಿದ್ದು, ಅದಕ್ಕೂ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ. ಬ್ರಹ್ಮಾವರದಲ್ಲಿ ಹೆಚ್ಚುವರಿ ಪುಸ್ತಕ
ಗಳಿದ್ದು ಅದನ್ನು ತರಿಸಿಕೊಂಡು ಪೂರೈಕೆ ಮಾಡಲಾಗುವುದು. ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಉಚಿತವಾಗಿ ಪುಸ್ತಕ ವಿತರಣೆ ಮಾಡಲಾಗುತ್ತಿದ್ದು, ಖಾಸಗಿ ಶಾಲೆಗಳಿಗೆ ಬೇಡಿಕೆಗೆ ಅನುಗುಣವಾಗಿ ತಾರತಮ್ಯ ಇಲ್ಲದೇ ಪುಸ್ತಕ ವಿತರಿಸಲಾಗುತ್ತಿದೆ .
– ಲೋಕೇಶಪ್ಪ 
ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.