ಇಂದಿನಿಂದ ಜ.30ರವರೆಗೆ ಪ್ರಸಿದ್ಧ ಅತ್ತೂರು ಜಾತ್ರೆ

ಸಂತ ಲಾರೆನ್ಸ್‌ ಬಸಿಲಿಕದಲ್ಲಿ ವಾರ್ಷಿಕ ಮಹೋತ್ಸವಕ್ಕೆ ಸರ್ವ ಸಿದ್ಧತೆ

Team Udayavani, Jan 26, 2020, 6:41 AM IST

ras-30

ಸಾಂದರ್ಭಿಕ ಚಿತ್ರ

ಕಾರ್ಕಳ: ಸಂತ ಲಾರೆನ್ಸ್‌ ಬಸಿಲಿಕದ ವಾರ್ಷಿಕ ಮಹೋತ್ಸವಕ್ಕೆ ಜ. 26ರಂದು ವಿಧ್ಯುಕ್ತ ಚಾಲನೆ ದೊರೆಯಲಿದೆ. ಮಹೋತ್ಸವವು 5 ದಿನಗಳ ಕಾಲ ಜ. 30ರವರೆಗೆ ವಿಜೃಂಭಣೆಯಿಂದ ಜರಗಲಿದೆ. ರ್ವಧರ್ಮೀಯರ ಪುಣ್ಯಕ್ಷೇತ್ರವಾಗಿರುವ ಅತ್ತೂರಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಯಿದೆ. ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದ್ದು, 1 ಲಕ್ಷ ಚದರಡಿ ವಿಸ್ತಾರದಲ್ಲಿ ತಟ್ಟಿ ಹಾಗೂ ಪೆಂಡಾಲ್‌ ಹಾಕಲಾಗಿದೆ. ಚರ್ಚ್‌ ಎಡಬದಿಯಲ್ಲಿ ಸುಮಾರು 3 ಸಾವಿರ ಮಂದಿ ಕಾರ್ಯಕ್ರಮ ವೀಕ್ಷಿಸಲು ಎಲ್‌ಸಿಡಿ ಪರದೆ ಅಳವಡಿಸಲಾಗಿದೆ. ಚರ್ಚ್‌ ಹಾಗೂ ಸುತ್ತಮುತಲಿನ ಪರಿಸರದಲ್ಲಿ ವಿದ್ಯುದ್ದೀಪಾಲಂಕಾರ ಮಾಡಲಾಗಿದೆ. ಪವಾಡ ಮೂರ್ತಿಯನ್ನು ಹೂವಿನಿಂದ ಅಲಂಕರಿಸಲಾಗಿದೆ.

ಪ್ರಾರ್ಥನೆಗೆ ಅವಕಾಶ
ಬಸಿಲಿಕದ ಬಲ ಬದಿ ಪವಾಡ ಮೂರ್ತಿ ಪ್ರತಿಷ್ಠಾಪಿಸಿದ ಪಕ್ಕದಲ್ಲಿ ಕಥೋಲಿಕ್‌ ಕ್ರೆçಸ್ತರಿಗೆ ಪಾಪನಿವೇದನೆಗೆ ವ್ಯವಸ್ಥೆ ಮಾಡಲಾಗಿದೆ. ದೇವಾಲಯದ ಒಳಗೆ ಪ್ರಾರ್ಥನೆಗಾಗಿ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ನೀರಿನ ವ್ಯವಸ್ಥೆ
ಬಸಿಲಿಕಾದ ವಠಾರದ 5 ಕಡೆಗಳಲ್ಲಿ ಭಕ್ತಾದಿಗಳಿಗೆ ಕುಡಿಯಲು ಶುದ್ಧ ನೀರು, ತಂಪು ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಅತ್ತೂರು ವಠಾರದಲ್ಲಿ ಸುಮಾರು 40 ಶೌಚಾಲಯ ನಿರ್ಮಿಸಲಾಗಿದೆ. ಅಂಗವಿಕಲರಿಗಾಗಿ ಪ್ರತ್ಯೇಕ ಶೌಚಾಲಯವಿದೆ.

ಪಾರ್ಕಿಂಗ್‌
ದೂಪದಕಟ್ಟೆ ದ್ವಾರ ಪ್ರವೇಶಿಸುವಲ್ಲಿ ಎಡಬದಿಗೆ ವಿಸ್ತಾರವಾದ ಜಾಗವನ್ನು ವಾಹನ ಪಾರ್ಕಿಂಗ್‌ಗಾಗಿ ಗುರುತಿಸಲಾಗಿದೆ. ಕೊಡಂಗೆ, ಸಂತ ಲಾರೆನ್ಸ್‌ ಹೈಸ್ಕೊಲ್‌ ಆಟದ ಮೈದಾನ, ಚೇತನ ಹಳ್ಳಿ-ಗುಂಡ್ಯಡ್ಕ ರಸ್ತೆಯ ಎರಡೂ ಬದಿಯಲ್ಲಿ ಪಾರ್ಕಿಂಗ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಅಂಗಡಿ ಮುಂಗಟ್ಟು
ನಿಟ್ಟೆ ಗ್ರಾಮ ಪಂಚಾಯತ್‌ 10 ಅಡಿ ಅಗಲದ ಸುಮಾರು 493 ಸ್ಟಾಲ್‌ಗ‌ಳನ್ನು ನಿರ್ಮಿಸಿ ಏಲಂ ಮಾಡಿದೆ. 25 ಸ್ಟಾಲ್‌ಗ‌ಳನ್ನು ಚರ್ಚ್‌ ವತಿಯಿಂದ ನೀಡಲಾಗಿದೆ. ಕಲ್ಲಂಗಡಿ, ಬೇಕರಿ, ಬಟ್ಟೆ ಅಂಗಡಿ, ಆಟಿಕೆ ಅಂಗಡಿಗಳು, ಐಸ್‌ಕ್ರೀಂ, ಜ್ಯೂಸ್‌ ಸ್ಟಾಲ್‌ ರಸ್ತೆ ಬದಿಯುದ್ದಕ್ಕೂ ಕಂಡುಬರುತ್ತಿದೆ. ಮನೋರಂಜನೆ ಉದ್ಯಾನವನ್ನು ಚರ್ಚ್‌ ಎದುರಿನ ಶಾಲಾ ವರಾಠದಲ್ಲಿ ಸ್ಥಾಪಿಸಲಾಗಿದೆ.

ಭದ್ರತೆ
ಭಕ್ತರ ಭದ್ರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಚರ್ಚ್‌ ಪ್ರವೇಶ ದ್ವಾರದ ಬಳಿ ಪೊಲೀಸ್‌ ಚೌಕಿ ನಿರ್ಮಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ, ಸಿಪಿಐ, 8 ಪಿಎಸ್‌ಐ, 200 ಸಿವಿಲ್‌ ಪೊಲೀಸ್‌ ಹಾಗೂ 100 ಡಿಎಆರ್‌ ತುಕಡಿ, 50 ಮಂದಿ ಗೃಹರಕ್ಷಕ ಸಿಬಂದಿ ಅಲ್ಲದೇ 50 ಸ್ವಯಂಸೇವಕರು ಕರ್ತವ್ಯ ನಿರ್ವಹಿಸಲಿದ್ದಾರೆ. ಇವರೊಂದಿಗೆ ಬಾಂಬ್‌ ನಿಷಿ¢ಯ ದಳ, ಉದ್ಘೋಷಣ ಕೇಂದ್ರ ತೆರೆಯಲಾಗಿದೆ. ಅತ್ತೂರು ಬಸಿಲಿಕಾದ ಒಳಗಡೆ ಹಾಗೂ ವಠಾರದಲ್ಲಿ ಒಟ್ಟು 64 ಸಿಸಿ ಕೆಮರಾ ಅಳವಡಿಸಲಾಗಿದೆ.

ಕಾರ್ಯಕ್ರಮ
ಜ. 26ರಂದು 7.10ಕ್ಕೆ ಪುಷ್ಕರಣಿಯಲ್ಲಿ ಸಂತ ಲಾರೆನ್ಸರ ಪವಾಡ ಮೂರ್ತಿ ಅನಾವರಣಗೊಳ್ಳಲಿದೆ. 7.20ಕ್ಕೆ ಮಾನಸ್ತಂಭದಲ್ಲಿ ಧ್ವಜಾರೋಹಣ ನಡೆಯಲಿದೆ. ಅಪರಾಹ್ನ 2.30ಕ್ಕೆ ಹಾಗೂ 4.30ಕ್ಕೆ ಮಕ್ಕಳಿಗಾಗಿ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆ ನೆರವೇರಲಿದೆ. ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷರಾದ ಡಾ| ಅಲೋಶಿಯಸ್‌ ಪಾವ್‌É ಡಿ’ಸೋಜಾ ಬಲಿಪೂಜೆ ನೆರವೇರಿಸುವರು. ರಾತ್ರಿ 10.30ಕ್ಕೆ ಕ್ರಿಸ್ತ ಕಾರುಣ್ಯ ಯಕ್ಷಗಾನ ಬೊಂಬೆಯಾಟ ಪ್ರದರ್ಶನಗೊಳ್ಳಲಿದೆ.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.