ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ: ವಾರ್ಷಿಕ ಮಹೋತ್ಸವಕ್ಕೆ ಚಾಲನೆ
Team Udayavani, Jan 27, 2020, 6:04 AM IST
ಕಾರ್ಕಳ: ಪ್ರಸಿದ್ಧ ಕೆೈಸ್ತ ಪುಣ್ಯಕ್ಷೇತ್ರ ಅತ್ತೂರು ಸಂತ ಲಾರೆನ್ಸರ ಬಸಿಲಿಕಾದಲ್ಲಿ ಪವಿತ್ರ ವಾರ್ಷಿಕ ಮಹೋತ್ಸವಕ್ಕೆ ರವಿವಾರ ಚಾಲನೆ ದೊರೆಯಿತು. ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೆ| ಡಾ| ಜೆರಾಲ್ಡ್ ಐಸಾಕ್ ಲೋಬೊ ಅವರು ಧ್ವಜಾರೋಹಣ ಗೈಯುವ ಮೂಲಕ ಚಾಲನೆ ನೀಡಿದರು. ಬಳಿಕ ದಿವ್ಯ ಬಲಿಪೂಜೆ ನಡೆಸಿದರು. ಬೆಳಗ್ಗೆ ಪುಷ್ಕರಣಿಯಲ್ಲಿ ಸಂತ ಲಾರೆನ್ಸರ ಪವಾಡ ಮೂರ್ತಿಯನ್ನು ಅನಾವರಣಗೊಳಿಸಲಾಯಿತು. ಅಪರಾಹ್ನ 2.30ಕ್ಕೆ ಮತ್ತು 4.30ಕ್ಕೆ ಮಕ್ಕಳಿಗಾಗಿ ಬಲಿಪೂಜೆ ಮತ್ತು ವಿಶೇಷ ಪ್ರಾರ್ಥನೆ ನೆರವೇರಿತು.
ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ಡಾ| ಅಲೋಶಿಯಸ್ ಪಾವ್É ಡಿ’ಸೋಜಾ ಕೊಂಕಣಿಯಲ್ಲಿ ದಿವ್ಯ ಬಲಿಪೂಜೆ ನಡೆಸಿದರು.
ಮಹೋತ್ಸವದ ಮೊದಲನೇ ದಿನ ರವಿವಾರವಾದ ಹಿನ್ನೆಲೆಯಲ್ಲಿ ಅತ್ತೂರು ಬಸಿಲಿಕಾದತ್ತ ಜನಸಾಗರವೇ ಹರಿದು ಬಂತು.
ಇಂದಿನ ಕಾರ್ಯಕ್ರಮ
ಜ. 27ರಂದು ಬೆಳಗ್ಗೆ 10ಕ್ಕೆ ಮತ್ತು ಅಪರಾಹ್ನ 3.30ಕ್ಕೆ ಅಸ್ವಸ್ಥರಿಗಾಗಿ ಬಲಿಪೂಜೆ ಮತ್ತು ವಿಶೇಷ ಪ್ರಾರ್ಥನೆ ಜರಗಲಿವೆ. ಚಿಕ್ಕಮಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ಡಾ| ಟಿ. ಅಂತೋಣಿ ಸ್ವಾಮಿ ಕನ್ನಡದಲ್ಲಿ ಬಲಿಪೂಜೆ ನಡೆಸಿಕೊಡಲಿದ್ದಾರೆ. ಅಲ್ಲದೆ ಹಲವಾರು ಕೊಂಕಣಿ ಬಲಿಪೂಜೆಗಳು ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Martin: ಕಿರುತೆರೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಧ್ರುವ ಸರ್ಜಾ ನಟನೆಯ ʼಮಾರ್ಟಿನ್ʼ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.