ಕೊಲ್ಲೂರು ದೇವಳದಲ್ಲಿ ಟಿಪ್ಪು ಹೆಸರಿನ ಸಲಾಂ ಆರತಿ ನಿಲ್ಲಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ
Team Udayavani, Mar 26, 2022, 1:46 PM IST
ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಪ್ರತೀದಿನ ರಾತ್ರಿ 8 ಗಂಟೆಗೆ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ನಡೆಯುವ ಸಲಾಂ ಎಂಬ ಮಹಾಮಂಗಳಾರತಿ ನಿಲ್ಲಿಸಬೇಕು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.
ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನವು ಐತಿಹಾಸಿಕ ಹಿನ್ನೆಲೆ ಇರುವ ಪವಿತ್ರ ಕ್ಷೇತ್ರ. ಭಾರತದ 108 ಶಕ್ತಿ ಪೀಠಗಳಲ್ಲಿ ಕೊಲ್ಲೂರು ಕೂಡಾ ಒಂದು. ಇಂತಹ ಕ್ಷೇತ್ರದಲ್ಲಿ ಕ್ರೂರಿ, ಮತಾಂಧ, ಹಿಂದೂ ವಿರೋಧಿ, ನೂರಾರು ದೇವಸ್ಥಾನಗಳನ್ನು ಧ್ವಂಸ ಮಾಡಿದ ಟಿಪ್ಪು ಸುಲ್ತಾನನ ಹೆಸರಿನಲ್ಲಿ ಮೂಕಾಂಬಿಕೆಗೆ ಮಹಾ ಮಂಗಳಾರತಿಯಾಗುವುದು ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುವಂತದ್ದು. ಇದು ಗುಲಾಮಗಿರಿಯ ಸಂಕೇತವಾಗಿದ್ದು, ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿ ಮಾಡುತ್ತದೆ ಎಂದು ವಿಎಚ್ ಪಿ ಹೇಳಿದೆ.
ಇದನ್ನೂ ಓದಿ:ರೇಣುಕಾಚಾರ್ಯ ಜಯಂತಿಗೆ ಸಂಶೋಧಕ ಚಂದ್ರಕಾಂತ ಬಿಜ್ಜರಗಿ ಆಕ್ಷೇಪ
ಈ ಗುಲಾಮಗಿರಿಯ ಸಂಕೇತವನ್ನು ರದ್ದು ಮಾಡಬೇಕು, ಸಲಾಂ ಹೆಸರನ್ನು ತೆಗೆದು ಕೇವಲ ದೇವರ ಹೆಸರಿನಲ್ಲಿ ಮಹಾಮಂಗಳಾರತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.