ದಿಟ್ಟ ನಿಲುವಿನ ಸಮರ್ಥ ಅಭ್ಯರ್ಥಿ ಯಶ್‌ ಪಾಲ್‌ ಸುವರ್ಣ ಗೆಲ್ಲಿಸಿ: ಪ್ರಮೋದ್‌ ಮಧ್ವರಾಜ್‌

Team Udayavani, May 3, 2023, 3:06 PM IST

1-sad

ಮಲ್ಪೆ: ಸಿದ್ದಾಂತದೊಂದಿಗೆ ರಾಜಿಯಾಗದ ದಿಟ್ಟ ನಿಲುವಿನೊಂದಿಗೆ ಬಿಜೆಪಿ ಪಕ್ಷದ ಕಾರ್ಯಕರ್ತರಾಗಿ ತಳ ಮಟ್ಟದಿಂದ ಪಕ್ಷ ಸಂಘಟಿಸಿ ಇದೀಗ ಬಿಜೆಪಿ ಪಕ್ಷದ ಸಮರ್ಥ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಯುವ ನಾಯಕ ಯಶ್‌ಪಾಲ್‌ ಸುವರ್ಣ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಜನ ಸಾಮಾನ್ಯರ ಸೇವೆಗೆ ಅವಕಾಶ ನೀಡುವಂತೆ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.
ಅವರು ಮಲ್ಪೆ ಬಾಲಕರ ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಉಡುಪಿ ಮಾದರಿ ಕ್ಷೇತ್ರ
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರಿಕಾ ಫೆಡರೇಶನ್‌ ಅಧ್ಯಕ್ಷರಾಗಿ , ನಗರಸಭೆಯ ಅನುಭವಿ ಸದಸ್ಯರಾಗಿ, ಸಹಕಾರಿ, ಶಿಕ್ಷಣ, ಧಾರ್ಮಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಕಾರ್ಯವೈಖರಿಯಿಂದ ಓರ್ವ ದಕ್ಷ ಆಡಳಿತಗಾರರಾಗಿ ಗುರುತಿಸಿ ಕೊಂಡಿರುವ ಯಶ್‌ ಪಾಲ್‌ ಸುವರ್ಣ ಮುಂದಿನ ದಿನದಲ್ಲಿ ಓರ್ವ ಯಶಸ್ವಿ ಶಾಸಕರಾಗಿ ಕ್ಷೇತ್ರದ ಜನತೆಯ ಆಶೋತ್ತರಗಳಿಗೆ ವಿಧಾನ ಸಭೆಯಲ್ಲಿ ಗಟ್ಟಿ ಧ್ವನಿಯಾಗುವ ಮೂಲಕ ಉಡುಪಿ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲಿದ್ದಾರೆ. ಕಳೆದ 20 ವರ್ಷಗಳಲ್ಲಿ ಶಾಸಕ ರಘುಪತಿ ಭಟ್‌ ಹಾಗೂ ನನ್ನ ಅವಧಿಯಲ್ಲಿ ಉಡುಪಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶ್‌ಪಾಲ್‌ ಸುವರ್ಣ ಇನ್ನೂ ಉತ್ತಮ ರೀತಿಯಲ್ಲಿ ಮುಂದುವರೆಸುವ ಭರವಸೆ ಇದೆ ಎಂದರು.

ರಾಷ್ಟ್ರೀಯವಾದಿ ಚಿಂತನೆ
ಬಿಜೆಪಿ ಅಭ್ಯರ್ಥಿ ಯಶ್‌ ಪಾಲ್‌ ಸುವರ್ಣ ಮಾತನಾಡಿ ಪಕ್ಷ ನನ್ನಂತಹ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಅವಕಾಶ ನೀಡಿದೆ. ಕರಾವಳಿ ಭಾಗದ ಭಜನಾ ಮಂದಿರ ಸುಸಂಸ್ಕೃತ ಸಮಾಜ ನಿರ್ಮಿಸುವಲ್ಲಿ ತನ್ನದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದೆ. ಈ ಭಜನಾ ಮಂದಿರಗಳೊಂದಿಗೆ ಹಲವು ವರ್ಷಗಳಿಂದ ನಿಕಟ ಸಂಬಂಧ ಹೊಂದಿದ್ದು ಈ ಬಾರಿಯ ಚುನಾವಣೆಯಲ್ಲಿ ರಾಷ್ಟ್ರೀಯವಾದಿ ಚಿಂತನೆಯ ಮೂಲಕ ಜನಪರ ಆಡಳಿತಕ್ಕೆ ಬಿಜೆಪಿ ಸರಕಾರವನ್ನು ಮತ್ತೂಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಉಡುಪಿ ಕ್ಷೇತ್ರದಲ್ಲಿ ತನನ್ನು ಗೆಲ್ಲಿಸಿ ಆಶೀರ್ವದಿಸುವಂತೆ ಮನವಿ ಮಾಡಿದರು.

ಸರ್ವಸ್ಪರ್ಶಿ, ಸರ್ವವ್ಯಾಪಿ ಯೋಜನೆ
ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಗೊಳ್ಳುತ್ತಿರುವ ಈ ಸುಸಂದರ್ಭದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯ ಹಾಗೂ ಕೇಂದ್ರದಲ್ಲಿ ಡಬಲ್‌ ಇಂಜಿನ್‌ ಸರಕಾರದ ಮೂಲಕ ಸರ್ವಸ್ಪರ್ಶಿ, ಸರ್ವವ್ಯಾಪಿ ಯೋಜನೆಗಳನ್ನು ಜಾರಿಗೆ ತರಲು ಕ್ಷೇತ್ರದ ಜನತೆಯ ಸೇವಕನಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಂಕರ ನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್‌, ನಗರಸಭಾ ಸದಸ್ಯರಾದ ಯೋಗೀಶ್‌ ಸಾಲ್ಯಾನ್‌, ಎಡ್ಲಿನ್‌ ಕರ್ಕಡ, ಮಂದಿರದ ಗೌರವಾಧ್ಯಕ್ಷ ಕೃಷ್ಣಪ್ಪ ಶೀÅಯಾನ್‌, ಅಧ್ಯಕ್ಷ ಲಕ್ಷ್ಮಣ್‌ ವಿ. ಕರ್ಕೇರ, ಮಾತೃ ಸಂಘದ ಅಧ್ಯಕ್ಷೆ ಸುನೀತ ಅಮೀನ್‌, ಮಂದಿರದ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಂತೋಷ್‌ ಸಾಲ್ಯಾನ್‌ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ನಮ್ಮ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಯಶ್‌ಪಾಲ್‌
ಕರಾವಳಿ ಜಿಲ್ಲೆಯ ಮೀನುಗಾರರ ಯಾವುದೇ ಸಮಸ್ಯೆ, ಬೇಡಿಕೆಗಳಿಗೆ ಮೀನು ಮಾರಾಟ ಫೆಡರೇಷನ್‌ ಅಧ್ಯಕ್ಷರಾಗಿ ಯಶ್‌ಪಾಲ್‌ ಸುವರ್ಣ ಸದಾ ಮೀನುಗಾರರ ಜೊತೆ ಮುಂಚೂಣಿಯಲ್ಲಿ ನಿಂತು ರಾಜ್ಯ ಹಾಗೂ ಕೇಂದ್ರ ಸರಕಾರದ ಮೂಲಕ ಪರಿಹಾರ ಕಂಡುಕೊಳ್ಳುವಲ್ಲಿ ಹಲವಾರು ಸಂದರ್ಭದಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಮೀನುಗಾರಿಕೆ ಸಂಬಂಧಿಸಿದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಮ್ಮ ಸಂಸ್ಥೆಯ ಮೂಲಕ ತಲುಪಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯಶ್‌ಪಾಲ್‌ ಸುವರ್ಣ ಸ್ಪರ್ಧಿಸುತ್ತಿದ್ದು, ಮುಂದಿನ ದಿನಗಳಲ್ಲಿ ಶಾಸಕರಾಗಿ ಮೀನುಗಾರರ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುವ ಭರವಸೆಯಿದೆ.
– ಪುರಂದರ ಕೋಟ್ಯಾನ್‌, ಕಾರ್ಯದರ್ಶಿ, ಸಾಂಪ್ರದಾಯಿಕ ನಾಡ ಟ್ರಾಲ್‌ ದೋಣಿ ಸಂಘ ರಿ. ಮಲ್ಪೆ

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.