Manipal: ಪಾರ್ಟ್ಟೈಮ್ ಜಾಬ್ ಲಿಂಕ್ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ
Team Udayavani, May 25, 2024, 9:25 PM IST
ಮಣಿಪಾಲ: ಇಲ್ಲಿನ ಹಾಸ್ಟೆಲ್ ಒಂದರಲ್ಲಿ ವಾಸವಿರುವ ವಂಶದೀಪ್ ಎಂಬ ವಿದ್ಯಾರ್ಥಿಯು ಪಾರ್ಟ್ಟೈಮ್ ಜಾಬ್ನಲ್ಲಿ ಹೆಚ್ಚು ಹಣ ಗಳಿಸುವ ಆಮಿಷಕ್ಕೆ ಮರುಳಾಗಿ 10.83 ಲಕ್ಷ ರೂ. ಹಣವನ್ನು ಕಳೆದುಕೊಂಡ ಘಟನೆ ನಡೆದಿದೆ.
ವಂಶದೀಪ್ ಅವರ ವಾಟ್ಸಾಪ್ಗೆ ಪಾರ್ಟ್ಟೈಮ್ ಜಾಬ್ ಕುರಿತು ಲಿಂಕ್ವೊಂದನ್ನು ಅಪರಿಚಿತರು ಕಳಿಸಿ ಅನಂತರ ಟೆಲಿಗ್ರಾಮ್ ಆ್ಯಪ್ನಲ್ಲಿ ವಿವಿಧ ರೀತಿಯ ಟಾಸ್ಕ್ ನೀಡಿ ಅನಂತರ 7,860 ರೂ. ಹಣವನ್ನು ಬ್ಯಾಂಕ್ ಖಾತೆಗೆ ಹಾಕಿದ್ದಾರೆ. ಇನ್ನು ಹೆಚ್ಚು ಲಾಭ ಪಡೆಯಲು ಹೆಚ್ಚಿನ ಹಣವನ್ನು ಇನ್ವೆಸ್ಟ್ ಮಾಡುವಂತೆ ತಿಳಿಸಿದ್ದು, ಹಂತ ಹಂತವಾಗಿ 10.83 ಲಕ್ಷ ರೂ. ಅಪರಿಚಿತ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸಿ ಮೋಸ ಹೋಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.