![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
Team Udayavani, Apr 23, 2018, 8:13 PM IST
ಕುಂದಾಪುರ: ಪರೀಕ್ಷೆಗೆ ಹಾಲ್ ಟಿಕೆಟ್ ಪಡೆದುಕೊಳ್ಳಲು ಗೆಳೆಯರ ಜೊತೆಗೆ ಬಂದಿದ್ದ ಇಬ್ಬರು ಯುವಕರು ಕೋಟೇಶ್ವರದ ಕೋಟಿಲಿಂಗೇಶ್ವರ ಕೆರೆಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ಸಂದರ್ಭದಲ್ಲಿ ನೀರುಪಾಲಾಗಿರುವ ದುರದೃಷ್ಟಕರ ಘಟನೆ ವರದಿಯಾಗಿದೆ. ಕೋಟೇಶ್ವರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿಗಳಾಗಿರುವ ಕೀರ್ತನ್ ಹಾಗೂ ಸಚಿನ್ ಎಂಬವರೇ ಮೃತ ದುರ್ದೈವಿಗಳಾಗಿದ್ದಾರೆ.
ಮೃತದೇಹಗಳನ್ನು ಮೇಲಕ್ಕೆತ್ತಲು ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಇದುವರೆಗೆ ಓರ್ವ ವಿದ್ಯಾರ್ಥಿಯ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
You seem to have an Ad Blocker on.
To continue reading, please turn it off or whitelist Udayavani.