“ಜೀವನದ ಯಶಸ್ಸಿಗೆ ಶ್ರದ್ಧೆ, ಪ್ರಾಮಾಣಿಕತೆ ಅಗತ್ಯ’
ಕ್ರಾಸ್‌ಲ್ಯಾಂಡ್ ಕಾಲೇಜು: ಮಹಿಳಾ ದಿನಾಚರಣೆ
Team Udayavani, Mar 19, 2020, 5:31 AM IST
ಬ್ರಹ್ಮಾವರ: ಪ್ರಾಮಾಣಿಕತೆ, ಶ್ರದ್ಧೆ, ತಾಳ್ಮೆ, ಇಚ್ಛಾಶಕ್ತಿ ಮತ್ತು ಕಠಿನ ಪರಿಶ್ರಮ ಈ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಯಶಸ್ಸು ನಿಶ್ಚಿತ ಎಂದು ಮೂಡುಬಿದಿರೆ ಶಿರ್ತಾಡಿಯ ಭುವನಜ್ಯೋತಿ ರೆಸಿಡೆನ್ಶಿಯಲ್ ಸ್ಕೂಲ್‌ಪ್ರಾಂಶುಪಾಲೆ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿನಿ ಲತಾ ಆಚಾರ್ಯ ಹೇಳಿದರು.
ಅವರು ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭ ನಡೆದ ಕಾರ್ಯಕ್ರಮದಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿದರು.
ಉತ್ತಮ ನಡತೆ ಒಳ್ಳೆಯ ಚಿಂತನೆ, ಒಳ್ಳೆಯ ನಡತೆ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಮಾಜದಲ್ಲಿ ಬದುಕಲು ಸಾಧ್ಯ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ| ಸ್ಯಾಮುಯೆಲ್ ಕೆ. ಸ್ಯಾಮುಯೆಲ್, ಉಪಪ್ರಾಂಶುಪಾಲೆ ಪ್ರೊ| ಎಲಿಜಬೆತ್ ರಾಯ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅಂಗವಿಕಲ ವಿದ್ಯಾರ್ಥಿನಿ ಸಾರಾ ಶರೋಲ್ ರೇಶ್ಮಾ ಅನ್ನಮ್ಮ ಅವರನ್ನು ಸಮ್ಮಾನಿಸಲಾಯಿತು.ವಿದ್ಯಾರ್ಥಿನಿ ಸಲ್ವಾ ಸ್ವಾಗತಿಸಿ,ಮಹಿಳಾ ವೇದಿಕೆಯ ಸಂಚಾಲಕಿ ಸ್ಮಿತಾ ಮೈಪಾಡಿ ಪ್ರಾಸ್ತಾ ವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿಯರಾದ ಸುರಭಿ ವಂದಿಸಿ, ಅರ್ಚನಾ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.