ಕ್ಷೇತ್ರದ ಅಭಿವೃದ್ಧಿಗೆ ಪೂರಕ ಸ್ಪಂಧನೆ : ಶೋಭಾ ಕರಂದ್ಲಾಜೆ
Team Udayavani, Mar 23, 2019, 12:30 AM IST
ಕಾಪು: ಸಂಸದರ ನಿಧಿ ಹಂಚಿಕೆ, ಅನುದಾನ ಬಳಕೆ, ಕಾರ್ಯಕರ್ತರ ಭೇಟಿ ಮತ್ತು ಪ್ರವಾಸ ನಿಗದಿ ಸಹಿತ ಹಲವು ವಿಚಾರಗಳಲ್ಲಿ ನಮ್ಮಿಂದ ತಪ್ಪುಗಳಾಗಿವೆ. ಅದು ನನ್ನ ಗಮನಕ್ಕೂ ಬಂದಿದ್ದು, ನಿಮ್ಮ ಆಶಯಗಳಿಗೆ ಪೂರಕವಾಗಿ ಸ್ಪಂದಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದಿಸುತ್ತೇನೆ. ಮುಂದೆ ಹೀಗಾಗದಂತೆ ಎಚ್ಚರ ವಹಿಸಲಾಗುವುದು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದರು.
ಕಾಪು ಕ್ಷೇತ್ರ ಬಿಜೆಪಿ ಕಛೇರಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ಕೋರ್ ಕಮಿಟಿ ಮತ್ತು ಚುನಾವಣೆ ನಿರ್ವಹಣಾ ಸಮಿತಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ಐದು ವರ್ಷಗಳಲ್ಲಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳು ನಡೆದಿವೆ. ಆದರೆ ಅದನ್ನು ಸಮರ್ಪಕವಾಗಿ ಹಂಚಿಕೆ ಮಾಡಿಕೊಡುವಲ್ಲಿ ಮತ್ತು ಜನರಿಗೆ ತಲುಪಿಸುವಲ್ಲಿ ನಾವು ವಿಫಲರಾಗಿದ್ದೇವೆ. ಮುಂದೆ ಎರಡೂ ಜಿಲ್ಲೆಗಳ ಗ್ರಾಮ ಮಟ್ಟದ ಸಮಿತಿಗಳಿಂದ ಹಿಡಿದು ಶಕ್ತಿ ಕೇಂದ್ರಗಳು, ಮಂಡಲ, ತಾಲೂಕು, ಜಿಲ್ಲಾ ಸಮಿತಿ, ಶಾಸಕರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರೊಂದಿಗೆ ಚರ್ಚಿಸಿಯೇ ಕ್ಷೇತ್ರದ ಅಭಿವೃದ್ಧಿಗೆ ಯೋಜನೆ ರೂಪಿಸುವುದಾಗಿ ಭರವಸೆ ನೀಡಿದರು.
ನೋವು ಮರೆತು ಚುನಾವಣೆ ಎದುರಿಸೋಣ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಈವರೆಗಿನ ಎಲ್ಲಾ ನೋವುಗಳನ್ನೂ ಮರೆತು ಮುಂದಿನ ಚುನಾವಣೆಗೆ ಸಿದ್ಧರಾಗಬೇಕು. ಇದು ಕೇವಲ ಶೋಭಾ ಕರಂದ್ಲಾಜೆಯ ಭವಿಷ್ಯಕ್ಕಾಗಿ ನಡೆಯುವ ಚುನಾವಣೆಯಲ್ಲ. ಇದು ರಾಷ್ಟ್ರದ ಹಿತ ಮತ್ತು ಭವಿಷ್ಯಕ್ಕಾಗಿ ನಡೆಯುವ ಚುನಾವಣೆಯಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಜೊತೆಗೂಡಿ, ಮೋದಿಯವರನ್ನು ಮತ್ತೂಮ್ಮೆ ಗೆಲ್ಲಿಸುವ ಸಂಕಲ್ಪದೊಂದಿಗೆ ಚುನಾವಣೆಗೆ ಅಣಿಯಾಗ ಬೇಕಿದೆ ಎಂದರು.
ಮೈತ್ರಿ ಪಕ್ಷದ ಅಭ್ಯರ್ಥಿಯನ್ನು ಕಡೆಗಣಿಸಬೇಡಿ
ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಕಣದಲ್ಲಿಲ್ಲ. ಆದರೆ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಅವರು ಕಣಕ್ಕಿಳಿಯುವುದು ಖಚಿತವಾಗಿದ್ದು ಆ ಕಾರಣದಿಂದಾಗಿ ಚುನಾವಣಾ ಕಣವನ್ನು ನಾವು ನಿರ್ಲಕ್ಷಿಸುವಂತಿಲ್ಲ. ಈ ಸರಕಾರದಿಂದ ಯಾವುದೇ ಸಾಧನೆಗಳಾಗದಿದ್ದರೂ, ಹಿಂದಿನ ಸರಕಾರದ ಸಾಧನೆಗಳನ್ನು ಇಟ್ಟುಕೊಂಡು ಮತಯಾಚನೆಗೆ ಇಳಿಯುವ ಸಾಧ್ಯತೆಗಳಿವೆ. ಆ ಕಾರಣದಿಂದಾಗಿ ಚುನಾವಣೆಯನ್ನು ಯಾರು ಕೂಡಾ ಹಗುರವಾಗಿ ತೆಗೆದುಕೊಳ್ಳದೇ ಎಂದಿನ ಶೈಲಿಗಿಂತಲೂ ಭಿನ್ನವಾದ ರೀತಿಯಲ್ಲಿ ಸಂಘಟಿತರಾಗಿ ನಾವು ಮತಬೇಟೆಗೆ ಇಳಿಯಬೇಕಿದೆ ಎಂದರು.
ಮೋದಿ ವಿರುದ್ಧ ಹಲವು ರಾಷ್ಟ್ರಗಳ ಪಿತೂರಿ
ನರೇಂದ್ರ ಮೋದಿ ಅವರು ಮತ್ತೂಮ್ಮೆ ಪ್ರಧಾನಿಯನ್ನಾಗುವುದನ್ನು ತಪ್ಪಿಸಲು ದೇಶದ ಹೊರಗೂ ತಂತ್ರಗಾರಿಕೆ ನಡೆಯುತ್ತಿದೆ. ಅರಬ್ ರಾಷ್ಟ್ರಗಳು, ಕ್ರಿಶ್ಚಿಯನ್ ರಾಷ್ಟ್ರಗಳು, ಮೂಲಭೂತವಾದಿಗಳನ್ನು ಹೊಂದಿರುವ ರಾಷ್ಟ್ರಗಳಲ್ಲಿ ಈ ಬಗ್ಗೆ ಸಂಚು ನಡೆಯುತ್ತಿದ್ದು, ದೇಶದಲ್ಲಿರುವ ಮೋದಿ ವಿರೋದಿ ರಾಜಕೀಯ ಪಕ್ಷಗಳು ಮತ್ತು ನಾಯಕರುಗಳ ಮೂಲಕ ಪಿತೂರಿ ನಡೆಯುತ್ತಿದೆ. ಈ ಪಿತೂರಿಯನ್ನು ವಿಫಲಗೊಳಿಸಿ, ಮೋದಿಯವರನ್ನು ಮತ್ತೆ ಪ್ರಧಾನಿಯನ್ನಾಗಿಸುವುದು ನಮ್ಮ ಸಂಕಲ್ಪವಾಗಲಿ ಎಂದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಮತ್ತೂಮ್ಮೆ ಗೆಲ್ಲಿಉಸವ ಮೂಲಕ ನಾವು ಮೋದಿಯವರನ್ನು ಗೆಲ್ಲಿಸಬೇಕಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಪು ಕ್ಷೇತ್ರದಲ್ಲಿ ದೊರಕಿದ್ದ 28 ಸಾವಿರ ಮತಗಳ ಅಂತರವನ್ನು 50 ಸಾವಿರಕ್ಕೆ ಏರಿಸುವ ನಿಟ್ಟಿನಲ್ಲಿ ನಾವು ಪ್ರಯತ್ನಶೀಲರಾಗಬೇಕಿದೆ. ಯಾವುದೇ ಅಸಮಾಧಾನ, ಅಸಹನೆಗಳಿದ್ದರೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳೋಣ ಎಂದರು.ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಉದಯಕುಮಾರ್ ಶೆಟ್ಟಿ, ಸಂಧ್ಯಾ ರಮೇಶ್, ಜಿಲ್ಲಾ ಉಪಾಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ, ಜಿಲ್ಲಾ ಪ್ರ. ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕಾಪು ಕ್ಷೇತ್ರ ಉಸ್ತುವಾರಿ ವಿಜಯ್ ಕೊಡವೂರು ಉಪಸ್ಥಿತರಿದ್ದರು.
ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಮುರಳೀಧರ ಪೈ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.