ಕಾಫಿಗೆ ಬೆಂಬಲ ಬೆಲೆ: ಶೋಭಾ ಆಗ್ರಹ
Team Udayavani, Aug 2, 2018, 10:08 AM IST
ಉಡುಪಿ: ಸಂಸತ್‌ನಲ್ಲಿ ಕಾಫಿ ಬೆಳೆಗೆ ಬೆಂಬಲ ಬೆಲೆ ಘೋಷಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಸರಕಾರವನ್ನು ಆಗ್ರಹಿಸಿದರು.
ಪ್ರಸಕ್ತ ಸಾಲಿನಲ್ಲಿ ಕಾಫಿ ಬೆಳೆಯ ಇಳುವರಿಯಲ್ಲಾದ ಗಣನೀಯ ಕುಸಿತದಿಂದಾಗಿ ಬೆಳೆಗಾರರು ಕಂಗೆಟ್ಟಿದ್ದಾರೆ. ವಾತಾವರಣದ ಅಸಮತೋಲನದಿಂದಾಗಿ ಇಳುವರಿ ಕುಸಿತವಾಗಿದೆ. ಜಾಗತಿಕವಾಗಿ ಬೆಳೆ ಹೆಚ್ಚಿದ್ದು ಮಾರುಕಟ್ಟೆಯಲ್ಲಿ ಕಾಫಿ ಬೆಲೆ ಹತ್ತಿಕ್ಕುವ ಪ್ರವೃತ್ತಿ ಮುಂದುವರಿದಿದೆ. 2017-18ರಲ್ಲಂತೂ ಬೆಲೆ ಕುಸಿತ ದಾಖಲೆಯ ಪ್ರಮಾಣದಲ್ಲಾಗಿದೆ. ಕಾಫಿ ಬೆಲೆ ಬೆಳೆಗೆ ತಗಲುವ ವೆಚ್ಚಕ್ಕಿಂತಲೂ ಕಡಿಮೆಯಾಗಿರುವುದರಿಂದ ಬೆಳೆಗಾರರು ಕಂಗಾಲಾಗಿದ್ದು ಸಾಲ ಮರು ಪಾವತಿಗೆ ಹೆಣಗಾಡುತ್ತಿದ್ದಾರೆ. ಬೆಳೆಗಾರರ ಹಿತಾ ಸಕ್ತಿ ದೃಷ್ಟಿಯಿಂದ ಇದು ಅಪಾಯಕಾರಿ ಎಂದು ಶೋಭಾ ಕಳವಳ ವ್ಯಕ್ತಪಡಿಸಿದರು.
ತತ್‌ಕ್ಷಣ ಜಾರಿಯಾಗಲಿ
ಸಂಸತ್ತಿನಲ್ಲಿ ಮಂಗಳವಾರ ನಿಯಮ 377ರಡಿಯಲ್ಲಿ ಕಾಫಿ ಬೆಳೆಗಾರರ ಸಂಕಷ್ಟ ಗಳ ಕುರಿತು ಮಾತನಾಡಿದ ಶೋಭಾ, ಕಾಫಿ ಬೆಳೆಗಾರರ ಹಿತಾಸಕ್ತಿ ರಕ್ಷಣೆಗೆ ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ ಕಾಫಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸ ಬೇಕು ಅಥವಾ ಬೆಲೆ ಪರಿಹಾರ ಯೋಜನೆಯನ್ನು ಜಾರಿಗೆ ತರುವಂತೆ ಸಂಸದೆ ಒತ್ತಾಯಿಸಿದರು. ಈ ರೀತಿಯ ಕ್ರಮಗಳಿಂದ ಮಾತ್ರ ಕಾಫಿ ಬೆಳೆಗಾರರನ್ನು ರಕ್ಷಿಸಲು ಸಾಧ್ಯ ಎಂದು ತಿಳಿಸಿದರು.
ಕೇಂದ್ರ ಸರಕಾರ ಕಾಫಿ ಬೆಳೆಗಾರರ ಸಾಲಗಳ ಮೇಲಿನ ಕನಿಷ್ಠ ಒಂದು ವರ್ಷದ ಬಡ್ಡಿಯನ್ನು ಮನ್ನಾ ಮಾಡುವಂತೆ ಹಾಗೂ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕಾಫಿ ಬೆಳೆಗಾರರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವಂತೆ ಶೋಭಾ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.