“ಸ್ವೀಪ್ ಚಟುವಟಿಕೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲಿ’
Team Udayavani, Mar 24, 2018, 7:00 AM IST
ಉಡುಪಿ: ಸ್ವೀಪ್ ಚಟುವಟಿಕೆಗಳನ್ನು ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಹಂತದ ಅಧಿಕಾರಿಗಳು ವಿಶೇಷ ಆದ್ಯತೆ ನೀಡಬೇಕು. ಜಾಗೃತ ಮತದಾರರನ್ನು ಹೊಂದಿರುವ ಜಿಲ್ಲೆಯಲ್ಲಿ ಮತದಾನ ಸರಾಸರಿಯೂ ಗರಿಷ್ಠ ಪ್ರಮಾಣ ತಲುಪಬೇಕಿದೆ. ಈ ನಿಟ್ಟಿನಲ್ಲಿ ಸರ್ವ ರೀತಿಯ ಪ್ರಯತ್ನಗಳು ಅಗತ್ಯ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಸೂಚಿಸಿದರು.
ಜಿಲ್ಲಾಡಳಿತ ಸ್ವೀಪ್ ಸಮಿತಿಯಿಂದ ತಾ.ಪಂ., ಗ್ರಾ.ಪಂ. ಅಧಿಕಾರಿ ವರ್ಗದವರಿಗೆ ಕಾರ್ಯ ಚಟುವಟಿಕೆಗಳ ಆಯೋಜನೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಆಯೋಜಿಸಲಾದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಸ್ವೀಪ್ ಸಮಿತಿ ಅಧ್ಯಕ್ಷ, ಜಿ.ಪಂ. ಸಿಇಒ ಶಿವಾನಂದ ಕಾಪಶಿ ಅವರು ಮತದಾರರ ಜಾಗೃತಿ ಪ್ರತಿಜ್ಞಾ ವಿಧಿ ಭೋದಿಸಿ, ಗ್ರಾಮ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾದ ಜಾಗೃತಿ ಅಭಿಯಾನದ ಕುರಿತು ಮಾರ್ಗದರ್ಶನ ನೀಡಿದರು.
ಸಂಪನ್ಮೂಲ ವ್ಯಕ್ತಿ ಅಶೋಕ್ ಕಾಮತ್ ಅವರು ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಸಂದರ್ಭ ಯುವಜನತೆಗೆ ಪ್ರೇರಣೆ ನೀಡುವಂತಹ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಬೇಕೆಂದು ತಿಳಿಸಿದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೋಹನ್ರಾಜ್, ಎಲ್ಲ ಪಿಡಿಓಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.