ಗ್ರಾ.ಪಂ. ಸಹಿತ ಆರೋಗ್ಯ ಇಲಾಖೆಗೆ ಸವಾಲಾದ ರೋಗ ಲಕ್ಷಣ
ಜಡ್ಕಲ್, ಮುದೂರು ಗ್ರಾಮಗಳಲ್ಲಿ ನಿಯಂತ್ರಣಕ್ಕೆ ಬಾರದ ಡೆಂಗ್ಯೂ ರೋಗ ಬಾಧೆ
Team Udayavani, May 11, 2022, 10:35 AM IST
ಕೊಲ್ಲೂರು: ಜಡ್ಕಲ್ ಗ್ರಾ.ಪಂ. ವ್ಯಾಪ್ತಿಯ ಮುದೂರು, ಉದಯನಗರ ಬೀಸಿನಪಾರೆ, ಕಾನ್ಕಿ ಮುಂತಾದೆಡೆ ಜನವರಿಯಿಂದ ಈವರೆಗೆ 90ಕ್ಕೂ ಮಿಕ್ಕಿ ಡೆಂಗ್ಯೂ ಜ್ವರ ಪೀಡಿತ ರೋಗಿಗಳು ಕಂಡುಬಂದಿದ್ದು, ಜನಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯುತ್ತಿದ್ದರೂ, ದಿನೇ-ದಿನೇ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದು ಗ್ರಾಮಸ್ಥರಲ್ಲಿ ಮತ್ತೆ ಆತಂಕ ಮೂಡಿಸಿದೆ.
ಕಳೆದ 2 ತಿಂಗಳಿಂದೀಚೆ ಜಡ್ಕಲ್ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕಾಏಕಿ ಡೆಂಗ್ಯೂ ರೋಗ ಪೀಡಿತರು ಹೆಚ್ಚುತ್ತಿದ್ದು, ಪಂಚಾಯತ್, ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತೆಯರು ಸೇರಿ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶೈಲೇಶ್ ಅವರ ನೇತೃತ್ವದಲ್ಲಿನ ತಂಡವು ಕಾರ್ಯಪ್ರವೃತ್ತಗೊಂಡಿದ್ದರೂ ರೋಗ ಲಕ್ಷಣ ಉಲ್ಬಣಗೊಳ್ಳುತ್ತಿರುವುದು ಇಲಾಖೆಗೆ ಸವಾಲಾಗಿದೆ.
ವಿವಿಧ ತಂಡ ರಚನೆ
ಜಡ್ಕಲ್ ಗ್ರಾ.ಪಂ., ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು ಸಹಿತ ಗ್ರಾಮಸ್ಥರ ಸಹಕಾರದೊಡನೆ ಪ್ರತ್ಯೇಕ 9 ತಂಡ ರಚಿಸಿ, ಗ್ರಾಮಗಳ ವಿವಿಧೆಡೆಗೆ ತೆರಳಿ ಅಲ್ಲಿನ ನಿವಾಸಿಗಳಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮದ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುತ್ತಿದ್ದು, ರೋಗಲಕ್ಷಣ ಕಂಡುಬಂದವರ ರಕ್ತ ಸ್ಯಾಂಪಲ್ ಪಡೆದು ಲ್ಯಾಬೋರೇಟರಿಗಳಲ್ಲಿ ಪರೀಶೀಲನೆಗೆ ವ್ಯವಸ್ಥೆಗೊಳಿಸಲಾಗಿದೆ. ಆಗಲೂ ಕೂಡ ಪರಿಸ್ಥಿತಿ ಕೈಮೀರುತ್ತಿರುವುದು ಗಂಭೀರ ವಿಚಾರವಾಗಿದೆ.
ಆ್ಯಂಬುಲೆನ್ಸ್ ವ್ಯವಸ್ಥೆ
ಡೆಂಗ್ಯೂ ರೋಗ ಲಕ್ಷಣ ಕಂಡುಬಂದವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗಳಿಗೆ ಸಾಗಿಸಲು ಪ್ರತ್ಯೇಕ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ರೋಗಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ, ಉತ್ತಮ ಸೇವೆಯ ಕ್ರಮ ಕೈಗೊಳ್ಳಲಾಗಿದೆ.
ಸ್ವಚ್ಛತೆಯ ಅರಿವು
ಜಡ್ಕಲ್ ಗ್ರಾ.ಪಂ. ಹಾಗೂ ಆಶಾ ಕಾರ್ಯಕರ್ತೆಯರ ಸಹಕಾರದೊಡನೆ ಜಡ್ಕಲ್ ಗ್ರಾಮಗಳ ವಿವಿಧೆಡೆ ತೆರಳಿ ರೋಗ ಲಕ್ಷಣ ಕಂಡುಬಂದವರ ರಕ್ತ ಪರೀಕ್ಷೆಗೆ ವ್ಯವಸ್ಥೆಗೊಳಿಸಲಾಗಿದೆ. ಗ್ರಾಮಸ್ಥರಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ದಿಸೆಯಲ್ಲಿ ಕ್ರಮಕೈಗೊಳ್ಳಲಾಗುತ್ತಿದೆ. ಎಲ್ಲರೂ ಸಹಕರಿಸುವಂತೆ ಕೋರಲಾಗಿದೆ. –ಡಾ| ಶೈಲೇಶ್, ವೈದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲೂರು
ಹೆಚ್ಚಿನ ಕಾಳಜಿ
ಜಡ್ಕಲ್ ಗ್ರಾ.ಪಂ. ಸದಸ್ಯರು, ಸಿಬಂದಿ, ಆರೋಗ್ಯ ಇಲಾಖೆಗಳ ಸಹಕಾರದೊಡನೆ ವಿವಿಧ ತಂಡ ರಚಿಸಿ ಮನೆ-ಮನೆಗೆ ತೆರಳಿ ಡೆಂಗ್ಯೂ ರೋಗ ಲಕ್ಷಣ ಹೊಂದಿದವರ ಬಗ್ಗೆ ಮಾಹಿತಿ ಸಂಗ್ರಹಿಸಿ, ರಕ್ತ ಪರಿಶೀಲನೆ ನಡೆಸಿ ಆಸ್ಪತ್ರೆ ದಾಖಲಿಸುವ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಶ್ರಮಿಸಲಾಗುತ್ತಿದೆ. – ವನಜಾಕ್ಷಿ ಶೆಟ್ಟಿ, ಅಧ್ಯಕ್ಷೆ, ಗ್ರಾ.ಪಂ.ಜಡ್ಕಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.