ತಲ್ಲೂರು: ಮನೆ ಕಟ್ಟಿ 40 ವರ್ಷ ಕಳೆದರೂ ವಿದ್ಯುತ್ ಇಲ್ಲ
Team Udayavani, Jan 6, 2018, 11:47 AM IST
ಕುಂದಾಪುರ: ಕುಂದಾಪುರ ತಾಲೂಕು ಕೇಂದ್ರದಿಂದ ಕೇವಲ 5 ಕಿ. ಮೀ. ದೂರದಲ್ಲಿರುವ ತಲ್ಲೂರಿನ ನಾರಾಯಣ ಶೆಟ್ಟಿ ಅವರು ಮನೆ ಕಟ್ಟಿ 40 ವರ್ಷವಾದರೂ ಇನ್ನೂ ಕೂಡ ವಿದ್ಯುತ್ ಸಂಪರ್ಕವೇ ಸಿಕ್ಕಿಲ್ಲ. ತಾನು 2ನೇ ಕ್ಲಾಸ್ ಕಲಿತರೂ ತನ್ನ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕೆಂಬ ಅವರ ಮಹದಾಸೆಗೆ ಸ್ಥಳೀಯ ಗ್ರಾ.ಪಂ. ಹಾಗೂ ಮೆಸ್ಕಾಂ ಅಧಿಕಾರಿಗಳು ತಣ್ಣೀರೆರಚುತ್ತಿದ್ದಾರೆ.
ಇದು ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರ ತಲ್ಲೂರು ಪೇಟೆಯಲ್ಲೇ ಮನೆಯಲ್ಲೇ ಒಂದು ಪುಟ್ಟ ಕ್ಯಾಂಟೀನ್ ನಡೆಸುತ್ತಿರುವ ನಾರಾಯಣ ಶೆಟ್ಟಿ ಅವರ ಕುಟುಂಬದ ವ್ಯಥೆ. ಹಲವು ವರ್ಷಗಳಿಂದ ತನ್ನ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಎಂದು ಮೆಸ್ಕಾಂ ಇಲಾಖೆಗೆ ಅರ್ಜಿ ಹಾಕಿದರೂ, ಮನೆ ಕಟ್ಟಿರುವ ಜಾಗ ಗೋಮಾಳವೆಂದು ಹೇಳಿ ತಲ್ಲೂರು ಗ್ರಾಮ ಪಂಚಾಯತ್ ಸಿಬಂದಿ ನಿರಾಕ್ಷೇಪಣಾ ಪತ್ರ ನೀಡಲು ಹಿಂದೇಟು ಹಾಕಿದೆ. ಪಂಚಾಯತ್ ಅನುಮತಿ ಪತ್ರವಿಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಿಲ್ಲ ಎಂದು ಮೆಸ್ಕಾಂ ಅಧಿಕಾರಿಗಳು ಹೇಳುತ್ತಾರೆ.
ಸುತ್ತಮುತ್ತ ಕರೆಂಟಿದೆ…
ಗೋಮಾಳ ಜಾಗವಾದ್ದರಿಂದ ನಾರಾಯಣ ಶೆಟ್ಟಿ ಅವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಿಲ್ಲ ಎಂದು ಜಾರಿಕೊಳ್ಳುವ ಮೆಸ್ಕಾಂ, ಇವರ ಅಕ್ಕ-ಪಕ್ಕದ ಎಲ್ಲ ಅಂಗಡಿ, ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಜೀವನೋಪಾಯಕ್ಕೆ ಮನೆಯಲ್ಲೇ ಹಲವು ವರ್ಷಗಳಿಂದ ಒಂದು ಪುಟ್ಟ ಕ್ಯಾಂಟೀನ್ ನಡೆಸುತ್ತಿದ್ದರೂ, ಅದರಲ್ಲಿ ಏನೂ ಸಿಗುವುದಿಲ್ಲ. ನನಗೆ ಕ್ಯಾಂಟೀನ್ ಬಿಟ್ಟರೆ ಬೇರೇನೂ ಉದ್ಯೋಗ ಗೊತ್ತಿಲ್ಲ ಎನ್ನುತ್ತಾರೆ ನಾರಾಯಣ ಶೆಟ್ಟಿ. ಸೋಲಾರ್ ದೀಪ ಅಳವಡಿಸಿಕೊಳ್ಳ ಬೇಕೆನ್ನುವ ಹಂಬಲವಿದ್ದರೂ ನಾರಾಯಣ ಶೆಟ್ಟಿ ಅವರಿಗೆ ಆರ್ಥಿಕ ಸಂಕಷ್ಟವಿದ್ದು, ಅದು ಸಾಧ್ಯವಿಲ್ಲದಂತಾಗಿದೆ. ತಲ್ಲೂರು ಪಂಚಾಯತ್ ಮತ್ತು ಮೆಸ್ಕಾಂ ಇಲಾಖೆ ಮಾನವೀಯ ನೆಲೆಯಲ್ಲಿ ಈ ಕುಟುಂಬಕ್ಕೆ ವಿದ್ಯುತ್ ದೀಪ ಅಳವಡಿಸಿಕೊಳ್ಳಲು ಅನುಮತಿ ನೀಡಲಿ ಎಂದು ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.
ಬೆಳಕಾಗದ “ಗ್ರಾಮ ಜ್ಯೋತಿ’
2015ರಲ್ಲಿ ಕೇಂದ್ರ ಸರಕಾರವು ಎಲ್ಲ ಗ್ರಾಮಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ದೀನ ದಯಾಳ ಉಪಾಧ್ಯಾಯ “ಗ್ರಾಮಜ್ಯೋತಿ’ ಯೋಜನೆ ಜಾರಿಗೆ ತಂದಿದ್ದು, ಇದರಂತೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬ ಕರೆಂಟಿಲ್ಲ ಅಂದರೆ ಅರ್ಜಿ ಸಲ್ಲಿಸಬಹುದು. ಆದರೆ ನಾರಾಯಣ ಶೆಟ್ಟಿ ಅವರು ಬಿಪಿಎಲ್ ಪಡಿತ ಚೀಟಿ ಹೊಂದಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ.
ಇಬ್ಬರು ಮಕ್ಕಳಿದ್ದು, ಪುತ್ರಿ ಸವಿನಾ ಈಗ ಎಸೆಸೆಲ್ಸಿ ಓದುತ್ತಿದ್ದರೆ, ಪುತ್ರ ಸಚಿನ್ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ರಾತ್ರಿ ಓದಲು ಬರೆಯಲು ಚಿಮಿಣಿ ದೀಪದ ಬೆಳಕೇ ಆಸರೆಯಾಗಿದೆ. ನಾನು ಕೇವಲ 2ನೇ ಕ್ಲಾಸ್‌ವರೆಗೆ ಮಾತ್ರ ಕಲಿತಿದ್ದು, ಜೀವನಕ್ಕೆ ಇದೊಂದು ಪುಟ್ಟ ಕ್ಯಾಂಟೀನ್ ನಡೆಸುತ್ತಿದ್ದೇನೆ. ಆದರೆ ನನ್ನ ಮಕ್ಕಳು ಉನ್ನತ ವ್ಯಾಸಂಗ ಮಾಡಬೇಕೆಂಬ ಆಸೆಯಿದೆ. ಮೆಸ್ಕಾಂನವರು ಕರೆಂಟ್ ನೀಡಲು ಒಪ್ಪಿದರೆ ಬಹಳಷ್ಟು ಅನುಕೂಲವಾಗಲಿದೆ.
ನಾರಾಯಣ ಶೆಟ್ಟಿ, ತಲ್ಲೂರು
ಸ್ಥಳೀಯ ಗ್ರಾಮ ಪಂಚಾಯತ್ ನಿರಾಕ್ಷೇಪಣಾ ಪತ್ರ ನೀಡದಿದ್ದರೆ, ನಮಗೆ ನೇರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವ ಅಧಿಕಾರವಿಲ್ಲ. ಒಂದು ವೇಳೆ ಆ ಕುಟುಂಬ ಬಿಪಿಎಲ್ ಕಾರ್ಡ್ ಹೊಂದಿದ್ದರೆ ದೀನದಯಾಳ ಯೋಜನೆಯಡಿ ಕರೆಂಟ್ ಕೊಡುವ ಯೋಜನೆಯಿದೆ. ಅದರಂತೆ ಅರ್ಜಿ ಸಲ್ಲಿಸಿದರೆ ವಿದ್ಯುತ್ ಸಂಪರ್ಕ ಒದಗಿಸುವ ಬಗ್ಗೆ ಪ್ರಯತ್ನಿಸಲಾಗುವುದು.
ಅಶೋಕ್ ಪೂಜಾರಿ, ಮೆಸ್ಕಾಂ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್
ಪ್ರಶಾಂತ್ ಪಾದೆ
ನಾರಾಯಣ ಶೆಟ್ಟಿ ಅವರ ಮನೆ ಮತ್ತು ಅವರ ಹೆಸರಲ್ಲಿರುವ ಬಿಪಿಎಲ್ ಪಡಿತರ ಚೀಟಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.