ತಾಲೂಕಿನ ಮಹಿಳೆ,ಮಕ್ಕಳ ಹಕ್ಕುಗಳ ರಕ್ಷಣೆಗೆ ಮಾದರಿ ಯೋಜನೆ:ಶಿಲ್ಪಾ ನಾಗ್

Team Udayavani, Mar 10, 2017, 2:49 PM IST

10-KARKALA-5.jpg

ಕುಂದಾಪುರ: ಕುಂದಾಪುರದ ದಿ ಕನ್ಸರ್‌° ಫಾರ್‌ ವರ್ಕಿಂಗ್‌ ಚಿಲ್ಡ್ರನ್‌ ಸಂಸ್ಥೆಯ ಆಶ್ರಯದಲ್ಲಿ  ಉಡುಪಿ ಜಿಲ್ಲೆಯಲ್ಲಿ ಮಹಿಳೆಯರ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಮಾದರಿ ಯೋಜನೆಯನ್ನು  ತರಬೇಕು.  ಈ ಬಗ್ಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು  ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್‌ ಹೇಳಿದರು.

ಅವರು ಮಹಿಳಾ ದಿನಾಚರಣೆಯ ಅಂಗವಾಗಿ ಕೊರ್ಗಿ ಗ್ರಾ.ಪಂ. ಮತ್ತು ಸಿಡಬ್ಲಿಸಿ ಸಹಯೋಗದಲ್ಲಿ  ಹೆಸ್ಕೂತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ  ಬುಧವಾರ ನಡೆದ  ಮಕ್ಕಳ  ಹಾಗೂ ಮಹಿಳೆಯರ ಹಕ್ಕು  ಮತ್ತು ರಕ್ಷಣೆ ಕುರಿತ ಸಂವಾದದಲ್ಲಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಅಪಾಯಕಾರಿ ಕಲ್ಲುಕೋರೆ ಹೊಂಡಗಳು,  ಅಕ್ರಮ ಮದ್ಯ ಮಾರಾಟದಿಂದ ಉಂಟಾಗುವ ಸಮಸ್ಯೆಗಳು, ಬಾಲಕಾರ್ಮಿಕರು ಮೊದಲಾದ ವಿಷಯಗಳ ಕುರಿತು ಸಂವಾದ ನಡೆಸಿದರು.

ದುಡಿಯುವ ಮಕ್ಕಳ ವಿರುದ್ಧ ನಡೆಯುವ ದಾಳಿ ಮತ್ತು ರಕ್ಷಣೆಯ ಕಾರ್ಯಕ್ರಮದಿಂದ ಅತ್ಯಂತ ಹಿಂಸೆ ಅನುಭವಿಸಿದ ಮಕ್ಕಳ ಪ್ರತಿನಿಧಿಗಳು ಅವರ ಅನುಭವವನ್ನು ಹಂಚಿಕೊಂಡರು,

ಆಲೂರು ಗ್ರಾ.ಪಂ.ನ ಮಕ್ಕಳ ಸಂಘದ ಪ್ರತಿನಿಧಿಗಳಾದ ಪವನ್‌, ಧನುಶ್‌, ಅಮತಾ ಅವರು ತಮ್ಮ ಗೆಳೆಯನ ಆಕಸ್ಮಿಕ ಸಾವಿನ ಅನಂತರ ತೆರೆದ ಕಲ್ಲು ಕೋರೆಗಳನ್ನು ಮುಚ್ಚಿಸಲು ಅವರು ಮಾಡಿದ ನಿರಂತರ ಪ್ರಯತ್ನದ ಬಗ್ಗೆ ಹಂಚಿಕೊಂಡರು. ಉಡುಪಿ ಜಿ.ಪಂ.  ಮಾಜಿ ಸದಸ್ಯ ಮಂಜಯ್ಯ ಶೆಟ್ಟಿ ಅವರು ಇನ್ನೂ 12ಕ್ಕೂ ಹೆಚ್ಚು ಪಂಚಾಯತ್‌ಗಳಲ್ಲಿ ಕಲ್ಲು ಕೋರೆಗೆ ಸಂಬಂಧಿಸಿದಂತೆ ಮಕ್ಕಳು ಮೃತಪಟ್ಟಿರುವುದನ್ನು ತಿಳಿಸುತ್ತಾ, ಈ ಸಂಬಂಧ ಸತತ ಹೋರಾಟ ಜಾರಿಯಲ್ಲಿದೆ ಎಂದರು.  ಅದಕ್ಕೆ ಪ್ರತಿಕ್ರಿಯಿಸಿದ ಸಹಾಯಕ ಆಯುಕ್ತರು ತತ್‌ಕ್ಷಣ ಈ ವಿಷಯವನ್ನು ಪರಿಶೀಲಿಸಿ ಮಕ್ಕಳ ರಕ್ಷಣೆಗೆ ಶೀಘ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದರು.

ಮದ್ಯ ವ್ಯಾಪಾರದ ವಿರುದ್ಧ ಅತ್ಯಂತ ನೋವು ಹಾಗೂ ಸಿಟ್ಟಿನಿಂದ ಮಾತನಾಡಿದ ಮಹಿಳಾ ಪ್ರತಿನಿಧಿಗಳು ಅದರ ವಿರುದ್ಧ ತಮ್ಮ ಸಂಘಟಿತ ಹೋರಾಟಗಳ ಉದಾಹರಣೆಗಳನ್ನು ಹಂಚಿಕೊಳ್ಳುತ್ತಾ ಆ ವಿಷಯಗಳನ್ನು ಪರಿಹರಿಸಿಕೊಳ್ಳಲು ತಮಗಿರುವ ಅಡೆತಡೆಗಳನ್ನು ಚರ್ಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಹಾಯಕ ಆಯುಕ್ತರು ಈ ಬಗ್ಗೆ ಸ್ಪಂದಿಸಿ ಶೀಘ್ರವಾಗಿ ಜಿಲ್ಲಾಧಿಕಾರಿ ಹಾಗೂ ಅಬಕಾರಿ ಆಯುಕ್ತರ ಜೊತೆಯಲ್ಲಿ ಸಭೆ ನಡೆಸಿ ಇದಕ್ಕೆ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಆಶ್ವಾಸನೆ ನೀಡಿದರು.
ಶ್ರೀನಿವಾಸ ಗಾಣಿಗ ಸ್ವಾಗತಿಸಿದರು. ಎಸ್‌. ಜನಾರ್ದನ, ಸತೀಶ್‌ ಪೂಜಾರಿ, ದಾಮೋದರ ಆಚಾರ್ಯ  ಕೃಪಾ ಎಂ.ಎಂ. ಅವರು ವಿವಿಧ ವಿಷಯ ಪ್ರಸ್ತಾಪಿಸಿದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಚೆನ್ನಪ್ಪ ಮೊಲಿ, ಕಾರ್ಮಿಕ ನಿರೀಕ್ಷಕ ಸತ್ಯನಾರಾಯಣ, ಕುಂದಾಪುರದ ಠಾಣಾಧಿಕಾರಿ ನಾಸಿರ್‌ ಹುಸೇನ್‌, ಕೊರ್ಗಿ ಗ್ರಾ.ಪಂ. ಅಧ್ಯಕ್ಷೆ ಗಂಗಿ ಕುಲಾಲ್ತಿ,  ಅಭಿವೃದ್ಧಿ ಅಧಿಕಾರಿ ಹರೀಶ್‌, ಸಿಡಬ್ಲ್ಯುಸಿಯ ನಂದನಾ ರೆಡ್ಡಿ, ಪ್ರಭಾಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.