ಮಕ್ಕಳಿಗೆ ಕೃಷಿ ಕಾರ್ಯ ಕಲಿಸಿ: ಡಾ| ವೀರೇಂದ್ರ ಹೆಗ್ಗಡೆ
ಯಾಂತ್ರೀಕೃತ ಭತ್ತ ಬೇಸಾಯ, ಹಡಿಲು ಭೂಮಿ ಪುನಃಶ್ಚೇತನಕ್ಕೆ ಚಾಲನೆ
Team Udayavani, Jun 29, 2022, 6:35 AM IST
ಬ್ರಹ್ಮಾವರ: ಎಲ್ಲ ಹೆತ್ತವರೂ ಮಕ್ಕಳಿಗೆ ಬೆಣ್ಣೆ ತಿನ್ನಿಸುವುದನ್ನು ಕಲಿಸುತ್ತಾರೆ. ಇದರ ಜತೆಗೆ ಕೃಷಿ ಕಾಯಕದ ಮೂಲಕ ನಮ್ಮ ಮಣ್ಣಿನ ಗುಣವನ್ನೂ ತಿಳಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ಅವರು ಮಂಗಳವಾರ ಬಾರಕೂರು ಕೂಡ್ಲಿ ಉಡುಪರ ಮನೆ ವಠಾರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ವತಿಯಿಂದ 2022-23ನೇ ಸಾಲಿನಲ್ಲಿ ರಾಜ್ಯದ 20,000 ಹೆಕ್ಟೇರ್ ಪ್ರದೇಶದಲ್ಲಿ ಅನುಷ್ಠಾನಗೊಳ್ಳಲಿರುವ ಯಾಂತ್ರೀಕೃತ ಭತ್ತ ಬೇಸಾಯ (ಯಂತ್ರಶ್ರೀ), ಹಡಿಲು ಭೂಮಿ ಪುನಃಶ್ಚೇತನ ಯೋಜನೆಗಳಿಗೆ ಚಾಲನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮೀಣ ಪರಿಸ್ಥಿತಿ
ಮೊದಲು ಮನೆಯಲ್ಲಿರುವ ಹತ್ತಾರು ಮಕ್ಕಳೇ ಕೃಷಿ ಕೆಲಸಕ್ಕೆ ಸಾಲುತ್ತಿದ್ದರು. ಈಗ ಪರಿಸ್ಥಿತಿ ಬದಲಾಗಿದೆ. ಇರುವ ಎರಡು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಊರಿನಿಂದ ಹೊರಗೆ ಕಳುಹಿಸಲಾಗಿದೆ. ಪ್ರಸ್ತುತ ಗ್ರಾಮೀಣ ಭಾಗದಲ್ಲಿ ಕೃಷಿ ಭೂಮಿ ಇದ್ದರೂ ಹಡಿಲು ಬೀಳುವ ಪರಿಸ್ಥಿತಿ ಎದುರಾಗಿದೆ ಎಂದರು.
ಶ್ರಮಿಕರಿಗೆ ಪ್ರೇರಣೆ
ಶ್ರಮಿಕರಿಗೆ ಪ್ರೋತ್ಸಾಹ, ಮಾರ್ಗದರ್ಶನ ಒದಗಿಸಬೇಕು. ಗ್ರಾಮೀಣಾಭಿವೃದ್ಧಿ ಯೋಜನೆ ಮೂಲಕ ನಾವು ಪ್ರೇರಣೆ ನೀಡುತ್ತಿದ್ದೇವೆ. ಆಸಕ್ತರಿಗೆ ಅಗತ್ಯವಿರುವ ಬೆಂಬಲವನ್ನು ಯೋಜನೆ ಮೂಲಕ ನೀಡುತ್ತಿದ್ದೇವೆ. ಅಂತೆಯೇ ರೈತರಿಗೆ ಶಕ್ತಿ ನೀಡುವ ಉದ್ದೇಶದಿಂದಲೇ ಕೇಂದ್ರ ಸರಕಾರ ಇ-ಶ್ರಮ್, ಫಸಲ್ ವಿಮೆ ಮೊದಲಾದ ಯೋಜನೆಗಳನ್ನು ಅನುಷ್ಠಾನಿಸಿದೆ. ಅವುಗಳನ್ನು ಸದುಪಯೋಗಪಡಿಸಿಕೊಂಡು ಸದೃಢರಾಗಬೇಕು ಎಂದರು.
10,000 ರೈತ ಉತ್ಪಾದಕ
ಸಂಸ್ಥೆ: ಸಚಿವೆ ಶೋಭಾ
ಸಣ್ಣ ರೈತರನ್ನು ಸಂಘಟಿಸುವ ಉದ್ದೇಶದಿಂದ ಕೇಂದ್ರ ಸರಕಾರ 10 ಸಾವಿರ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸುತ್ತಿದೆ. ಈ ಮೂಲಕ ಕೃಷಿ ಉತ್ಪಾದನೆ, ಮಾರುಕಟ್ಟೆ ಒದಗಿಸುವುದು ಗುರಿಯಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವಲ್ಲಿ ಈ ಸಂಸ್ಥೆಗಳು ಸಹಕಾರಿಯಾಗಲಿವೆ. ಜತೆಗೆ ಕೇಂದ್ರ ಸರಕಾರವು ಬೆಳೆ ವಿಮೆ, ಹನಿ ನೀರಾವರಿ ಇತ್ಯಾದಿ ಹತ್ತು ಹಲವು ಯೋಜನೆ ಜಾರಿಗೆ ತಂದಿದೆ. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ಸಂರಕ್ಷಣೆ, ರಫ್ತು ವಿಚಾರದಲ್ಲಿ ಕಾರ್ಯೋನ್ಮುಖವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಧರ್ಮಸ್ಥಳ ಮಾದರಿ
ಸರಕಾರ ಮಾಡುವ ಕಾರ್ಯವನ್ನು ಎನ್‌ಜಿಒ ಕೂಡ ಮುಂಚೂಣಿಯಲ್ಲಿ ನಿಂತು ಸಾಧಿಸಬಹುದು ಎನ್ನುವುದನ್ನು ಧರ್ಮಸ್ಥಳ ಗ್ರಾ.ಅ. ಯೋಜನೆ ತೋರಿಸಿದೆ. ಡಾ| ಹೆಗ್ಗಡೆ ಅವರ ನೇತೃತ್ವದಲ್ಲಿ ಧರ್ಮಸ್ಥಳ ಕ್ಷೇತ್ರವು ದೇಶಕ್ಕೆ ಮಾದರಿಯಾಗಿದೆ ಎಂದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಯಡ್ತಾಡಿ ಗ್ರಾ.ಪಂ. ಅಧ್ಯಕ್ಷೆ ಸವಿತಾ ದೇವಾಡಿಗ, ಪ್ರಮುಖರಾದ ಅಪ್ಪಣ್ಣ ಹೆಗ್ಡೆ, ಬಿ. ಶಾಂತಾರಾಮ ಶೆಟ್ಟಿ, ಡಾ| ಕೆ. ವೆಂಕಟರಮಣ ಉಡುಪ, ಆನಂದ ಸಿ. ಕುಂದರ್, ಬಿ. ಶ್ರೀನಿವಾಸ ಶೆಟ್ಟಿಗಾರ್, ಸಂಪತ್ ಸಾಮ್ರಾಜ್ಯ ಉಪಸ್ಥಿತರಿದ್ದರು.
ಗ್ರಾ. ಯೋಜನೆಯ ಕಾ.ನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್. ಮಂಜುನಾಥ್ ಸ್ವಾಗತಿಸಿ, ದಿನೇಶ್ ಶೇರೆಗಾರ್ ವಂದಿಸಿದರು. ಸುಧೀರ್ ಜೈನ್, ದಿನೇಶ್ ಸಿ. ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.