ಆಂಗ್ಲ ಮಾಧ್ಯಮದ ಮಕ್ಕಳಿಗೂ ಕಡ್ಡಾಯ ಕನ್ನಡ ಕಲಿಸಿ: ಬೇಲಾಡಿ ವಿಠಲ ಶೆಟ್ಟಿ

ಕಾರ್ಕಳ ತಾಲೂಕು ಸಮ್ಮೇಳನಾಧ್ಯಕ್ಷರೊಂದಿಗೆ ಸಂದರ್ಶನ

Team Udayavani, Dec 27, 2019, 6:39 AM IST

24

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಕಾರ್ಕಳ ತಾಲೂಕು ಘಟಕ, ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್‌ ಕ್ಲಬ್‌ ಅಬ್ಬನಡ್ಕ-ನಂದಳಿಕೆ ಇದರ ವತಿಯಿಂದ ಕೆದಿಂಜೆ ಶ್ರೀ ವಿದ್ಯಾಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ. 29ರಂದು ನಡೆಯುವ 16ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಬೇಲಾಡಿ ವಿಠಲ ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ನಿಟ್ಟಿನಲ್ಲಿ ಬೇಲಾಡಿ ವಿಠಲ ಶೆಟ್ಟಿ ಅವರೊಂದಿಗೆ ಉದಯವಾಣಿ ಸಂದರ್ಶನವಿದು.

ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಕುರಿತು ಏನನ್ನಿಸುತ್ತಿದೆ ?
· ಬಹಳ ಸಂತೋಷವಾಗಿದೆ. ಕಳೆದ 60 ವರ್ಷಗಳಿಂದ ಬೇಲಾಡಿಯಲ್ಲಿ ನಾಡಹಬ್ಬ ಆಯೋಜಿಸಿ ಕೊಂಡು ಸುಮಾರು 70 ಮಂದಿ ಸಾಹಿತಿ, ಶಿಕ್ಷಕರನ್ನು ಸಮ್ಮಾನಿಸಲಾಗಿದೆ. 25 ವರ್ಷಗಳ ಕಾಲ ಕಾಂತಾವರ ಕನ್ನಡ ಸಾಹಿತ್ಯ ಸಂಘದ ಕಾರ್ಯದರ್ಶಿಯಾಗಿ ಗುರುತಿಸಿಕೊಂಡಿದ್ದೇನೆ. ಕನ್ನಡ ನಾಡು, ನುಡಿ, ಕೈಂಕರ್ಯದಲ್ಲಿ ತನ್ನಿಂದಾದ ಸೇವೆ ಸಲ್ಲಿಸಿರುತ್ತೇನೆ. ಈ ಕಾರ್ಯವನ್ನು ಗುರುತಿಸಿ ನನ್ನನ್ನು 16ನೇ ಕಾರ್ಕಳ ತಾಲೂಕು ಸಮ್ಮೇಳನ ಅಧ್ಯಕ್ಷನನ್ನಾಗಿ ಮಾಡಿರಬಹುದು.

ಯುವ ಸಮುದಾಯದಲ್ಲಿ ಸಾಹಿತ್ಯದ ಅಭಿರುಚಿ, ಓದಿನ ಹವ್ಯಾಸ, ಪುಸ್ತಕ ಪ್ರೀತಿ ಕಡಿಮೆಯಾಗುತ್ತಿದೆಯಲ್ಲವೇ ?
· ಹೌದು. ಇಂದಿನ ಯುವ ಸಮುದಾಯ ಸಾಹಿತ್ಯದ ಅಭಿರುಚಿ ಹೊಂದುವುದು ಕಡಿಮೆ. ಮೊಬೈಲ್‌ ಬಳಕೆ ಇದಕ್ಕೊಂದು ಕಾರಣವಾಗಿರಬಹುದು. ಬೇಕಾಗಿದ್ದು, ಬೇಡದ್ದು ಎಲ್ಲವೂ ಅದರಲ್ಲಿ ಸಿಗುತ್ತಿದೆ. ನಾವು ಶಿಕ್ಷಕರಾಗಿದ್ದ ವೇಳೆ ವಿದ್ಯಾರ್ಥಿಗಳು ಕವನ, ಲೇಖನಗಳನ್ನು ರಚಿಸುವ, ಪತ್ರಿಕೆ, ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಂಡಿದ್ದರು. ಇಂದು ಇಂತಹ ಬೆಳವಣಿಗೆ ಮರೆಯಾಗುತ್ತಿದೆ. ಇದು ಅತೀವ ಬೇಸರ ಸಂಗತಿ.

ಸಮ್ಮೇಳನದಿಂದ ಆಗುವ ಪ್ರಯೋಜನವೇನು ?
· ಸಾಹಿತ್ಯ ಸಮ್ಮೇಳನಗಳ ಮೂಲಕ ಸಾಹಿತ್ಯಾಸಕ್ತರನ್ನು ಒಂದು ಗೂಡಿಸುವ ಕಾರ್ಯವಾಗುತ್ತಿದೆ. ವಿಚಾರಗೋಷ್ಠಿ, ಕವನ ಸಂಕಲನ ಮೂಲಕ ಒಂದಷ್ಟು ಅರಿವು ಮೂಡಿಸುವ ಪ್ರಯತ್ನ ವಾಗುತ್ತಿದೆ. ಯುವ ಬರಹಗಾರರಿಗೆ ಇದರಿಂದ ಪ್ರೋತ್ಸಾಹ ದೊರೆಯುವುದು. ಸಮ್ಮೇಳನ ಕೇವಲ ಜಾತ್ರೆಯಾಗದೇ, ಶಿಸ್ತಬದ್ಧವಾಗಿ, ಅಚ್ಚುಕಟ್ಟಾಗಿ ನಡೆದಲ್ಲಿ ಮಾತ್ರ ಸಾರ್ಥಕ್ಯ ಕಾಣಬಹುದು.

ಸಾಹಿತಿಗಳು ವಿವಾದಾತ್ಮಕ ಹೇಳಿಕೆ ನೀಡುವುದು ಸರಿಯೇ ?
· ಸಾಹಿತಿಗಳು ಕೇವಲ ಸಾಹಿತ್ಯಕ್ಕೆ ಮಾತ್ರ ಸೀಮಿತ ವಾಗಿರಬೇಕು. ರಾಜಕೀಯ ಪ್ರೇರಿತ ಹೇಳಿಕೆ ನೀಡುವುದು, ಎಡ- ಬಲ ಪಂಥದ ವಾದ ಮಂಡಿಸುವುದು ಸರಿಯಲ್ಲ. ಮಾಡಲು ಬೇಕಾದಷ್ಟು ಸಾಹಿತ್ಯಿಕ, ಸಾಮಾಜಿಕ ಕಾರ್ಯಗಳಿರುವಾಗ ಸಾಹಿತಿಗಳು ವಿವಾದಾತ್ಮಕ ವಿಚಾರ ಪ್ರಸ್ತಾವಿಸಿ ಮನರಂಜಿಸುವುದು ಸೂಕ್ತವಲ್ಲ.

ಸರಕಾರಿ ಶಾಲಾ ಶಿಕ್ಷಕರೇ ತಮ್ಮ ಮಕ್ಕಳನ್ನು ಇಂಗ್ಲಿಷ್‌ ಮಾಧ್ಯಮಕ್ಕೆ ಸೇರಿಸುತ್ತಾರೆ !
· ತಮ್ಮ ಮಕ್ಕಳು ಕಲೆ, ಸಾಹಿತ್ಯ, ಸಂಸ್ಕೃತಿ, ನೈತಿಕ, ಮೌಲ್ಯಯುತ ಶಿಕ್ಷಣ ಪಡೆಯಬೇಕೆಂಬ ಇಚ್ಛೆ ಶಿಕ್ಷಕರಲ್ಲಿ ಕಡಿಮೆಯಾಗುತ್ತಿದೆ. ತಮ್ಮ ಮಕ್ಕಳು ಕಡಿಮೆ ಅವಧಿಯಲ್ಲೇ ಹೆಚ್ಚು ಸಂಪಾದನೆ ಮಾಡಬೇಕು. ವಿದೇಶದಲ್ಲಿ ದುಡಿಯಬೇಕೆಂಬ ಅಪೇಕ್ಷೆಯಿಂದ ಕನ್ನಡ ಶಾಲಾ ಶಿಕ್ಷಕರು ಕೂಡ ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮದ ಶಾಲೆಗೆ ದಾಖಲಿಸುತ್ತಾರೆ. ಎಲ್ಲರೂ ಹೀಗೆ ಮಾಡಿದಲ್ಲಿ ಕನ್ನಡ ಉಳಿಯೋದು, ಬೆಳೆಯೋದು ಹೇಗೆ ? ಇಂಗ್ಲಿಷ್‌ ಮಾಧ್ಯಮದ ವಿದ್ಯಾರ್ಥಿಗಳಿಗೂ ಕನ್ನಡ ಕಲಿಸುವ ಕಾರ್ಯವನ್ನು ಶಿಕ್ಷಕರು ಮಾಡಬೇಕು. ಹೆತ್ತವರೂ ತಮ್ಮ ಮಕ್ಕಳಿಗೆ ಕನ್ನಡ ಕಲಿಸುವಲ್ಲಿ ಆಸಕ್ತಿ ಹೊಂದಬೇಕು.

ಸಮ್ಮೇಳನದಿಂದ ಯಾವ ಸಂದೇಶ ಸಿಗಲಿದೆ ?
ಇಂದಿನ ಮಕ್ಕಳು ಸ್ಪಷ್ಟವಾಗಿ ಕನ್ನಡ ಓದು-ಬರಹ ಕಲಿಯಬೇಕು. ಸಮ್ಮೇಳದ ಮೂಲಕ ಒಂದಷ್ಟು ಕನ್ನಡ ಕಾರ್ಯವಾಗುವುದು. ಸರ್ವರಿಗೂ ಹಿತವಾಗಿರುವುದು ಸಾಹಿತ್ಯ. ಪುರಾಣ, ರಾಮಾಯಣ, ಮಹಾಭಾರತ ಗ್ರಂಥಗಳ ಸಾರವನ್ನು ಮಕ್ಕಳಿಗೆ ತಿಳಿಹೇಳುವ ಕಾರ್ಯವಾಗಬೇಕು. ಸಮ್ಮೇಳನದ ಮೂಲಕ ಮಹಾನ್‌ ಸಾಧಕರ ಜೀವನ ಚರಿತ್ರೆ ಒದುವ ವಾತಾವರಣ ನಿರ್ಮಾಣವಾಗಬೇಕು. ಇದರಿಂದ ಜೀವನ ಮೌಲ್ಯ, ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ.

– ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.