“ಇಂಗ್ಲಿಷ್‌ ಕಲಿಸುವುದಾದರೆ ವ್ಯಾಕರಣ ಪೂರ್ಣವಾಗಿ ಕಲಿಸಿ’


Team Udayavani, Dec 23, 2017, 12:31 PM IST

23-24.jpg

ತೆಕ್ಕಟ್ಟೆ (ವಿದ್ಯಾಗಿರಿ): ಒಂದು ಸಣ್ಣ ಬಿದಿರಿನ ತುಂಡನ್ನು ಕೊಳಲಾಗಿ ಮಾರ್ಪಡಿಸಿ ಅನೇಕ ನಿತ್ಯೋತ್ಸವದಂತಹ ರಾಗವನ್ನು ಹೊಮ್ಮಿಸಿದ್ದಾಳೆ ತಾಯಿ ಕನ್ನಡಾಂಬೆ, ಅದು ನನ್ನ ಸೊತ್ತಲ್ಲ ಆ ಪಾರಲೋಕಿಕ ಶಕ್ತಿಯ ಸೊತ್ತು ಎಂದು ನಾನು ಭಾವಿಸಿದ್ದೇನೆ. ಪ್ರಸ್ತುತ ಆಂಗ್ಲ ಭಾಷೆ ಬಿಟ್ಟರೆ ಗತಿ ಇಲ್ಲ. ಅದು ಅಂತಾರಾಷ್ಟ್ರೀಯ ಗವಾಕ್ಷಿ ನಮಗೆ ಇದ್ದ ಹಾಗೆ, ಎಲ್ಲ ಜ್ಞಾನ ಹಾಗೂ ಸಾರಸತ್ವವನ್ನು ಪಡೆಯಲು ಇಂಗ್ಲಿಷ್‌ನಿಂದ ಮಾತ್ರ ಸಾಧ್ಯವಿಲ್ಲ. ನಮ್ಮ ಮಕ್ಕಳಿಗೆ ಇಂಗ್ಲಿಷ್‌ ಕಲಿಸುವುದಾದರೆ ವ್ಯಾಕರಣ ಪೂರ್ಣವಾಗಿ ಕಲಿಸಬೇಕು ಎಂದು ನಿತ್ಯೋತ್ಸವ ಕವಿ ಕೆ.ಎಸ್‌. ನಿಸಾರ್‌ ಅಹಮದ್‌ ಹೇಳಿದರು.

ಅವರು ಶುಕ್ರವಾರದಂದು ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್‌ನ 12ನೇ ವಾರ್ಷಿಕೋತ್ಸವದ ಅಂಗವಾಗಿ   ಕೆ.ಎಸ್‌. ನಿಸಾರ್‌ ಅಹಮದ್‌ ಅವರೊಂದಿಗೆ ವಿದ್ಯಾರ್ಥಿ ಹೃದಯ ಸಂವಾದ ಮಾತುಕತೆ(ಥೆ) ಸಲ್ಲಾಪ 2017 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಾಳೆಯ ದಿನ ಪ್ರಪಂಚದ ಬೇರೆ ಬೇರೆಯವರ ಜತೆಯಲ್ಲಿ ಸ್ಪರ್ಧೆ ನಡೆಸಬೇಕಾಗಿದೆ. ಕನ್ನಡದಲ್ಲಿ ಸದ್ಯಕ್ಕೆ ಸಾಧ್ಯವಾಗೋದಿಲ್ಲ. ಯಾವಾಗ ಕನ್ನಡ ಹೃದಯ ಭಾಷೆಯಾಗೋದಿಲ್ಲವೋ ಸರಕಾರ ಕನ್ನಡವನ್ನು ಆಡಳಿತ ಭಾಷೆ ಯಾಗಿ, ನ್ಯಾಯಾಂಗ ಭಾಷೆಯಾಗಿ ಮತ್ತೆ ಶಿಕ್ಷಣದ ಭಾಷೆಯಾಗಿ ಮಾಡಿ ಯಾರ್ಯಾರು ಸ್ನಾತಕೋತ್ತರ ಪದವಿಯನ್ನು ಪಡೆ ಯುತ್ತಾರೋ ಅವರಿಗೆ ಹೊಟ್ಟೆಗೂ ನಾವು ಕೊಡ್ತೀವಿ, ಕೆಲಸವನ್ನು ಕೊಡ್ತೀವಿ ಎನ್ನುವ ಬಗ್ಗೆ ಸರಕಾರ ಉತ್ತೇಜನ ನೀಡುವ ವರೆಗೂ ಕನ್ನಡ ಉದ್ಧಾರವಾಗಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ತೆಕ್ಕಟ್ಟೆ ಕುಂದಾಪುರ ಭಂಡಾರ್ಕಾರ್ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ  ಡಾ| ರೇಖಾ ವಿ. ಬನ್ನಾಡಿ, ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್‌ನ ಆಡಳಿತ ನಿರ್ದೇಶಕ ಎಂ.ಪ್ರಭಾಕರ ಶೆಟ್ಟಿ, ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್‌ನ ಮೆನೇಜಿಂಗ್‌ ಟ್ರಸ್ಟಿ ಎಂ.ದಿನಕರ ಶೆಟ್ಟಿ, ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್‌ನ ಪ್ರಾಂಶುಪಾಲ ಅಗಸ್ಟಿನ್‌ ಕೆ.ಎ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ತಾಲೂಕಿನ ವಿವಿಧ ಕನ್ನಡ ಮಾಧ್ಯಮ ಹಾಗೂ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಶಾಲಾ ನರ್ಸರಿ ವಿದ್ಯಾರ್ಥಿಗಳು ಆಟವಾಡಲು ನಿರ್ಮಿಸಿರುವ ವಿನೂತನ ಪ್ಲೇ ಝೋನ್‌ ವಲಯವನ್ನು ಕೆ.ಎಸ್‌. ನಿಸಾರ್‌ ಅಹಮದ್‌ ಅವರು ಉದ್ಘಾಟಿಸಿದರು.

ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್‌ನ ಪ್ರಾಂಶುಪಾಲ ಅಗಸ್ಟಿನ್‌ ಕೆ. ಸ್ವಾಗತಿಸಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿ, ನಾಗರತ್ನಾ ಜಿ. ನಿರೂಪಿಸಿ, ಸುಪ್ರಿತಾ ಆಚಾರ್ಯ ವಂದಿಸಿದರು.

ವೈಭವೋಪೇತವಾದ ಐಶಾರಾಮಿ ಇಂಗ್ಲಿಷ್‌ ಶಾಲೆಯ ಮುಂದೆ ಕನ್ನಡ ಶಾಲೆ ಗಳನ್ನು ನೋಡಿದರೆ ದನದ ದೊಡ್ಡಿ ಯಂತಾಗಿರುವುದು ವಿಪರ್ಯಾಸ. ಭವ್ಯ ಕನ್ನಡ ನಾಡಿನಲ್ಲಿ ಕನ್ನಡ ಮೆರೆಯಬೇಕಿದೆ. ಈ ನಿಟ್ಟಿನಿಂದ ಸರಕಾರ ಮಾತ್ರವಲ್ಲ ಜನರು ಕೂಡಾ  ಗಂಭೀರ  ಚಿಂತನೆ ಮಾಡ ಬೇಕಾಗಿದೆ. ಇವತ್ತು ಎಲ್ಲವೂ ಇಂಗ್ಲಿಷ್‌ಮಯವಾಗಿ ಬಿಟ್ಟಿದೆ.

ಟಾಪ್ ನ್ಯೂಸ್

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Manipal: ಡಂಪಿಂಗ್‌ ಯಾರ್ಡ್‌ ಆದ ಮಣ್ಣಪಳ್ಳ!

10

Udupi: ಒಂದೇ ವೃತ್ತ; ಪೊಲೀಸ್‌ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ

7

Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್‌; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

1-poco

POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.