Udupi;ದೇವಸ್ಥಾನ ಚಿನ್ನಾಭರಣ ಕಳವು: ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್
Team Udayavani, Jul 11, 2023, 6:12 AM IST
ಉಡುಪಿ: ದೇವಸ್ಥಾನ ಚಿನ್ನಾಭರಣ ಕಳವು ಮಾಡಿದ ಆರೋಪಿಗಳಿಗೆ ನಗರದ ಪ್ರಧಾನ ಸಿ. ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಜೈಲು ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದೆ.
ನರಸಿಂಹರಾಜು ಅಲಿಯಾಸ್ ಬಸವರಾಜ್, ಮೊಹಮ್ಮದ್ ಶಬ್ಬೀರ್ ಶಿಕ್ಷೆಗೊಳಪಟ್ಟ ಆರೋಪಿಗಳು. 2015 ಸೆ.21 ರಂದು ಉಡುಪಿ ತಾಲೂಕು ಶಿರೂರು ಗ್ರಾಮದ ಶ್ರೀ ಮಹಾಲಸಾ ನಾರಾಯಣೀ ದೇವಿ ದೇವಸ್ಥಾನದ ಗರ್ಭಗುಡಿ ಬಾಗಿಲಿನ ಬೀಗ ಮುರಿದು ದೇವರಿಗೆ ಸಂಬಂಧಿಸಿದ 8,66,800 ರೂ. ಮೌಲ್ಯದ 339.940 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಕಳವು ಮಾಡಿದ್ದರು.
ಉಡುಪಿ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕರಣ ದಾಖಲಿಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ದೀಪಾ ಅವರು ಆರೋಪಿಗಳಿಗೆ ತಲಾ 2 ವರ್ಷ 6 ತಿಂಗಳು ಜೈಲು ಶಿಕ್ಷೆ ಹಾಗೂ ತಲಾ 5,500 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ ಕೆ. ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.