Udupi ಲಾರಿ ಮಾಲಕರ ಮುಷ್ಕರದಲ್ಲಿ ತಾತ್ಕಾಲಿಕ ಬದಲಾವಣೆ
Team Udayavani, Oct 2, 2023, 10:48 PM IST
ಉಡುಪಿ/ಕೋಟ: ಕಟ್ಟಡ ಸಾಮಗ್ರಿ ಸಾಗಾಟ ಲಾರಿ, ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟದ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಕೆಲವು ತಾತ್ಕಾಲಿಕ ಬದಲಾವಣೆ ಮಾಡಿಕೊಂಡಿದ್ದಾರೆ.
ಕೋಟದ ಮಾಂಗಲ್ಯ ಮಂದಿರದಲ್ಲಿ ಸೋಮವಾರ ಒಕ್ಕೂಟದ ವಿವಿಧ ಮಂಡಲದ ಪದಾಧಿಕಾರಿಗಳು ಒಳಗೊಂಡ ಜಿಲ್ಲಾ ಮಟ್ಟದ ಸಭೆಯು ನಡೆದಿದೆ.ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿರುವ ಲಾರಿ ಮತ್ತು ಟೆಂಪೋಗಳನ್ನು ಅ. 3ರಂದು (ರಾಜ್ಯಪಾಲರ ಪ್ರವಾಸ ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ತೆಗೆದುಕೊಂಡ ನಿರ್ಧಾರ) ಖಾಸಗಿ ಮೈದಾನಕ್ಕೆ ಸ್ಥಳಾಂತರಿಸಿ, ಅ. 4ರಿಂದು ಪುನಃ ಹೆದ್ದಾರಿ ಬದಿಗೆ ತಂದು ನಿಲ್ಲಿಸಲು ನಿರ್ಧರಿಸಿದ್ದಾರೆ.
ರಾಜ್ಯಪಾಲರಿಗೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಲಾರಿ, ಟೆಂಪೋ ನಿಲ್ಲಿಸುವುದು ಸರಿಯಲ್ಲ ಎಂಬ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಆದರೆ ನಮ್ಮ ಹೋರಾಟ ಮುಂದುವರಿಯಲಿದೆ ಮತ್ತು ಅ. 4ರಂದು ಜಿಲ್ಲಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ ನಡೆಸಲಿದ್ದೇವೆ ಎಂದು ಒಕ್ಕೂಟದ ಜಿಲ್ಲಾ ಪ್ರಮುಖರಾದ ರಾಘವ ಶೆಟ್ಟಿ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.