ತೆಂಕನಿಡಿಯೂರು ಗ್ರಾಮಕ್ಕೆ 24 x 7 ಕುಡಿಯುವ ನೀರು
Team Udayavani, May 19, 2017, 12:32 PM IST
ತೆಂಕನಿಡಿಯೂರು ಜನಸಂಪರ್ಕ ಸಭೆ ಉದ್ಘಾಟಿಸಿ ಸಚಿವ ಪ್ರಮೋದ್ ಮಧ್ವರಾಜ್
ಮಲ್ಪೆ: ತೆಂಕನಿಡಿಯೂರು ಗ್ರಾಮವನ್ನು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಆಯ್ಕೆ ಮಾಡಲಾಗಿದ್ದು ಅದರ ಸರ್ವೇ ಕೆಲಸ ನಡೆಯುತ್ತಿದೆ. ಟೆಂಡರ್ ಹಂತಕ್ಕೆ ಬಂದಿದ್ದು ಮುಂದೆ ಗ್ರಾಮದಲ್ಲಿ ದಿನದ 24 ಗಂಟೆ ಕುಡಿಯುವ ನೀರಿನ ವ್ಯವಸ್ಥೆಯಾಗಲಿದೆ ಎಂದು ಮೀನುಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ತೆಂಕನಿಡಿಯೂರು ಗ್ರಾ.ಪಂ. ಸಮುದಾಯ ಭವನದಲ್ಲಿ ಗುರುವಾರ ನಡೆದ ತೆಂಕನಿಡಿಯೂರು ಗ್ರಾ.ಪಂ.ನ ತೆಂಕನಿಡಿಯೂರು ಗ್ರಾಮ ಮಟ್ಟದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉಡುಪಿ ವಿಧಾನಸಭಾ ಕ್ಷೇತ್ರದ ಇತಿಹಾಸದಲ್ಲೇ ಪ್ರಥಮವೆಂಬಂತೆ 1769 ಕೋಟಿ ರೂ.ಅನುದಾನದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಡೆಸಲಾಗಿದೆ. ಹಿಂದಿನ ಕೇಂದ್ರ ಸರಕಾರ ರಾಜೀವ್ ಗಾಂಧಿ ಗ್ರಾಮೀಣ ವಿದ್ಯುತ್ ಯೋಜನೆಯಡಿ ಇಡೀ ದೇಶಾದ್ಯಂತ ಉಚಿತ ವಿದ್ಯುತ್ ಸಂಪರ್ಕವನ್ನು ನೀಡಲಾಗುತ್ತಿತ್ತು. ಅದರ ಪ್ರಕಾರ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಂಪೂರ್ಣ ಉಚಿತ ವಿದ್ಯುತ್ ಸಂಪರ್ಕವನ್ನು ನೀಡಲಾಗುತ್ತಿದ್ದು 18 ಯುನಿಟ್ ವರೆಗೆ ಉಚಿತ ವಿದ್ಯುತ್ತನ್ನು ನೀಡಲಾಗುತ್ತದೆ. ತಾನು ಶಾಸಕನಾದ ಮೇಲೆ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ 850 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದರು. ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜಿಗೆ 6 ಕೋ.ರೂ. ಅನುದಾನವನ್ನು ತರಿಸಿ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲಾಗಿದ್ದು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನರ್ಮ್ಜೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ
ಜನಾರ್ದನ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ, ಉಡುಪಿ ತಹಶೀಲ್ದಾರ್ ಮಹೇಶ್ಚಂದ್ರ, ಡಿವೈಎಸ್ಪಿ ಕುಮಾರಸ್ವಾಮಿ, ಮಲ್ಪೆ ಠಾಣಾಧಿಕಾರಿ ದಾಮೋದರ್, ಉಡುಪಿ ಜಿ.ಪಂ. ಸದಸ್ಯ ಜನಾರ್ದನ ತೋನ್ಸೆ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ತಾ.ಪಂ. ಧನಂಜಯ ಕುಂದರ್, ಸದಸ್ಯ ಶರತ್ ಕುಮಾರ್ ಬೈಲಕರೆ, ತೆಂಕನಿಡಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ, ನಗರಸಭಾ ಸದಸ್ಯ ಗಣೇಶ್ ನೆರ್ಗಿ, ಯತೀಶ್ ಕರ್ಕೇರ, ಪೃಥ್ವಿರಾಜ್ ಶೆಟ್ಟಿ, ಪಂಚಾಯತ್ ಉಪಾಧ್ಯಕ್ಷೆ ಸುನೀತಾ ಆಚಾರ್ಯ, ಸದಸ್ಯರಾದ ವೆಂಕಟೇಶ್ ಕುಲಾಲ್, ಸತೀಶ್ ನಾಯ್ಕ, ಮೀನಾ ಲೊರಿನೋ ಪಿಂಟೋ, ಪ್ರಮೀಳಾ, ಕಲ್ಪನಾ ಸುರೇಶ್, ಗೀತಾ ಶೆಟ್ಟಿ, ಆ್ಯಗೇ°ಲ್‌ಫೆರ್ನಾಂಡಿಸ್, ಲತಾ ಅಂಚನ್, ಭವಾನಿ ಪೂಜಾರಿ¤, ಮೆರಿಟಾ ಡಿ’ಸೋಜಾ, ಗಾಯತ್ರಿ, ಲಕ್ಷ್ಮೀ ರಾವ್, ಗ್ರಾಮ ಲೆಕ್ಕಾಧಿಕಾರಿ ಉಪೇಂದ್ರ ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.
ಸವಲತ್ತು ವಿತರಣೆ
ಬಸವ ವಸತಿ ಯೋಜನೆಯ ಮಂಜೂರಾತಿ ಪತ್ರ, ರಾಷ್ಟ್ರೀಯ ಕುಟುಂಬ ಸಹಾಯಧನ, ಪಶು ಸಂಗೋಪನ, ಭಾಗ್ಯಲಕ್ಷ್ಮೀ ಬಾಂಡ್, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನ, ಶಿಶು ಅಭಿವೃದ್ಧಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.ತೆಂಕನಿಡಿಯೂರು ಗ್ರಾ.ಪಂ. ಅಧ್ಯಕ್ಷ ಜಯಕುಮಾರ ಬೆಳ್ಕಳೆ ಸ್ವಾಗತಿಸಿದರು. ಪ್ರಶಾಂತ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು. ಪಿಡಿಒ ಗೋಪಾಲ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.