ತಲ್ಲೂರು : ಬಸ್- ಬೈಕ್ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು
Team Udayavani, Jan 7, 2018, 3:02 PM IST
ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ನೇರಳಕಟ್ಟೆ ಗುಲ್ವಾಡಿಯ ಕೌಂಜೂರು ನಿವಾಸಿ ಲಕ್ಷ್ಮಣ್ ಆಚಾರ್ ಪುತ್ರ ರವೀಂದ್ರ ಆಚಾರ್ (36) ಮೃತಪಟ್ಟವರು.
ರವೀಂದ್ರ ನೇರಳಕಟ್ಟೆಯಿಂದ ಕೆಲಸಕ್ಕೆ ತೆರಳುತ್ತಿರುವಾಗ ಕೆರಾಡಿಯಿಂದ ಹೆಮ್ಮಾಡಿ ಮಾರ್ಗವಾಗಿ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ.
ಶ್ಲಾಘನೀಯ ಕಾರ್ಯ
ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆಯ ಎಸ್‌ಐ ಸುಬ್ಬಣ್ಣ ಭೇಟಿ ನೀಡಿದ್ದು, ಹೆದ್ದಾರಿ ಬದಿ ಹೊಂಡ- ಗುಂಡಿಗಳನ್ನು ಕಂಡು ತತ್‌ಕ್ಷಣವೇ ಟಿಪ್ಪರ್ ಮೂಲಕ ಮಣ್ಣು ಹಾಕಿಸಿ ಮುಚ್ಚಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಆಮೆಗತಿ ಕಾಮಗಾರಿ ಕುಂದಾಪುರ ದಿಂದ ಬೈಂದೂರು ವರೆಗಿನ ರಾಷ್ಟ್ರೀಯ ಹೆದ್ದಾರಿ 66ರ ಅಗಲಗೊಳಿಸುವ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಇದರಿಂದ ವಾಹನ ಸವಾರರು ನಿತ್ಯ ಸಂಕಟ ಅನುಭವಿಸುತ್ತಿದ್ದಾರೆ. ಅಪಘಾತಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಹಟ್ಟಿಯಂಗಡಿ ಸಮೀಪ ಮರದ ಕೆತ್ತನೆಯ ಕೆಲಸ ನಿರ್ವಹಿಸುತ್ತಿದ್ದ ರವೀಂದ್ರ ಅವರಿಗೆ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದು, ಪತ್ನಿ ಹಾಗೂ 9 ತಿಂಗಳ ಮಗುವನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.