ಒತ್ತಿನೆಣೆಯಲ್ಲಿ ಗರಿಗೆದರುವುದೇ ವಿಮಾನ ನಿಲ್ದಾಣದ ಕನಸು


Team Udayavani, Jul 6, 2017, 3:45 AM IST

airport.jpg

ಬೈಂದೂರು: ಬಹುನಿರೀಕ್ಷಿತ ಬೈಂದೂರು ತಾಲೂಕು ಘೋಷಣೆಯ ಬಳಿಕ ಬಹುವರ್ಷದ ಕನಸೊಂದು ಚಿಗುರೊಡೆಯುತ್ತಿದೆ. ಹಲವು ವರ್ಷಗಳಿಂದ ಪ್ರಯತ್ನಿಸುತ್ತಿರುವ ಬೈಂದೂರು ಸಮೀಪದ ಒತ್ತಿನೆಣೆ ಸಮೀಪ ವಿಮಾನ ನಿಲ್ದಾಣ ಪ್ರಸ್ತಾವನೆಗೆ ಆರಂಭಿಕ ಚಾಲನೆ ದೊರೆತಿದೆ.

ಮನವಿ
ಇತ್ತೀಚೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ದುಬೈಗೆ ಭೇಟಿ ನೀಡಿದ ಸಂದರ್ಭದಲ್ಲಿ ನಮ್ಮ ಕುಂದಾಪ್ರ ಬಳಗ ಗಲ್ಫ್  ಕನ್ನಡ ಬಳಗ ಗಲ್ಪ್ ಸಂಘಟನೆ ಮೂಲಕ ಮನವಿ ನೀಡಿದ್ದಾರೆ. ಮಹತ್ವಾಕಾಂಕ್ಷೆಯ ಯೋಜನೆಯ ಸಾಕಾರಕ್ಕೆ ದುಬೈನಲ್ಲಿರುವ ಕುಂದಾಪುರ ಕನ್ನಡಿಗರ ಬಳಗ ಕೇಂದ್ರ ಮಟ್ಟದಲ್ಲೂ ಪ್ರಯತ್ನ ಪ್ರಾರಂಭಿಸಿದೆ.

ಬಹುನಿರೀಕ್ಷಿತ ಯೋಜನೆ
ಉಡುಪಿ ಜಿಲ್ಲೆಯಲ್ಲಿ ಪ್ರಮುಖ ಪ್ರವಾಸಿ ಸ್ಥಳಗಳನ್ನು ಹೊಂದಿದ ಹೆಗ್ಗಳಿಕೆ ಬೈಂದೂರಿನದ್ದಾಗಿದೆ.ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳಗಳನ್ನು ಹೊಂದಿದ ಹೆಗ್ಗಳಿಕೆ ಬೈಂದೂರಿನದ್ದಾಗಿದೆ. ದಕ್ಷಿಣ ಭಾರತದ ಪ್ರಸಿದ್ದ ಯಾತ್ರಾ ಸ್ಥಳವಾದ ಕೊಲ್ಲೂರಿಗೆ ಪ್ರತಿದಿನ ಸಾವಿರಾರು ಯಾತ್ರಿಕರು ಆಗಮಿಸುತ್ತಾರೆ. ವಿಶ್ವ ಪ್ರಸಿದ್ದ ಮುಡೇìಶ್ವರ ಬೈಂದೂರಿನಿಂದ ಕೆಲವೇ ಕಿ.ಮೀ. ಅಂತರದಲ್ಲಿದೇ ದುಬೈ ಸೇರಿದಂತೆ ವಿದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವವರು ಭಟ್ಕಳದವರಾಗಿದ್ದಾರೆ. ಗೋವಾ ಹಾಗೂ ಮಂಗಳೂರು ಹೊರತುಪಡಿಸಿದರೆ ಬೇರೆ ವಿಮಾನ ನಿಲ್ದಾಣಗಳಿಲ್ಲದ ಪರಿಣಾಮ ಕಾರವಾರದಿಂದ ಉಡುಪಿಯ ವರೆಗಿನ ಜನರು ಮಂಗಳೂರು ವಿಮಾನ ನಿಲ್ದಾಣವನ್ನು ಅವಲಂಬಿಸಬೇಕಾಗಿದೆ. ಹೀಗಾಗಿ 2004ರಲ್ಲಿ ಕೊಲ್ಲೂರು ದೇವಸ್ಥಾನ ಟ್ರಸ್ಟಿ ಹಾಗೂ ಮುಡೇìಶ್ವರದ ಸಂಸ್ಥಾಪಕ ಆರ್‌. ಎನ್‌. ಶೆಟ್ಟಿ ಸಹಯೋಗದಲ್ಲಿ ಬೈಂದೂರಿನ ಒತ್ತಿನೆಣೆಯಲ್ಲಿ ಏರ್‌ಸ್ಕಿÅಪ್ಟ್ ಪ್ರಾರಂಭಿಸುವ ಪ್ರಸ್ತಾವನೆಗೆ ಚಾಲನೆಗೆ ನೀಡಲಾಗಿತ್ತು. ಈ ಕುರಿತು ಸರ್ವೆ ಕಾರ್ಯ ಸೇರಿದಂತೆ ಬಹುತೇಕ ಪ್ರಾಥಮಿಕ ಕಾರ್ಯಗಳು ಪೂರ್ಣಗೊಂಡಿದ್ದವು. ಬೈಂದೂರು ತಾಲೂಕು ರಚನೆ ಮತ್ತು ಅಭಿವೃದ್ದಿ ಸಮಿತಿಯ ಅಧ್ಯಕ್ಷ ನಿವೃತ್ತ ಅರಣ್ಯಾಧಿಕಾರಿ ಬಿ. ಜಗನ್ನಾಥ ಶೆಟ್ಟಿ ನೇತೃತ್ವದಲ್ಲಿ ಸರಕಾರಕ್ಕೆ ಪ್ರಸ್ತಾವನೆ ನೀಡಲಾಗಿತ್ತು.

ಆದರೆ ಒತ್ತಿನೆಣೆಯಲ್ಲಿ ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಅವಶ್ಯವಿರುವ ಜಾಗ ಅರಣ್ಯ ಇಲಾಖೆಗೆ ಸಂಬಂಧಿಸುವುದರಿಂದ ಈ ಕುರಿತು ಕೇಂದ್ರ ಸರಕಾರದ ಮಟ್ಟದಲ್ಲಿ ಅನುಮತಿ ಪಡೆಯಬೇಕಾಗಿದೆ. ಸರಕಾರದ ಅನುದಾನದ ಕೊರತೆ ಹಾಗೂ ಅರಣ್ಯ ಇಲಾಖೆಯ ಕಠಿನ ಕಾನೂನುಗಳ ಕಾರಣ ಪ್ರಸ್ತಾವನೆ ಮುಂದುವರಿದಿರಲಿಲ್ಲ.

ವಿಪುಲ ಅವಕಾಶ
ಕೇವಲ ಒತ್ತಿನೆಣೆ ಮಾತ್ರವಲ್ಲದೆ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮದ್ಯಭಾಗದಲ್ಲಿ ವ್ಯಾಪಾರ ವೃದ್ದಿ ಹಾಗೂ ಪ್ರವಾಸೋಧ್ಯಮ ಅಭಿವೃದ್ದಿಯ ದೃಷ್ಟಿಯಿಂದ ಕಿರು ವಿಮಾನ ನಿಲ್ದಾಣ ಅತ್ಯವಶ್ಯಕವಾಗಿದೆ. ಈಗಾಗಲೆ ಪ್ರಧಾನ ಮಂತ್ರಿಗಳು ಸಣ್ಣ ವಿಮಾನ ನಿಲ್ದಾಣದ ಸ್ಥಾಪನೆಯ ಬಗ್ಗೆ ವಿಶೇಷ ಒತ್ತು ನೀಡಿರುವುದಲ್ಲದೆ ರಾಜ್ಯ ಪ್ರವಾಸೋಧ್ಯಮ ಸಚಿವರು ಪಡುಬಿದ್ರಿ ಬಳಿ ವಿಮಾನ ನಿಲ್ದಾಣ ಸ್ಥಾಪಿಸುವ ಹೇಳಿಕೆ ನೀಡಿದ್ದರು.

ಆದರೆ ಮಂಗಳೂರಿನ ಸನಿಹದಲ್ಲಿರುವ ಪಡುಬಿದ್ರಿ ಬದಲು ಬೈಂದೂರಿನಲ್ಲಿ ಪ್ರಾರಂಭಿಸಿದರೆ ಸಾಕಷ್ಟು ಅನುಕೂಲವಾಗುತ್ತದೆ.ಮಾತ್ರವಲ್ಲದೇ ಕುಂದಾಪುರದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿರುವವರು ಅಧಿಕ ಸಂಖ್ಯೆಯಲ್ಲಿ ಮಂಗಳೂರು ವಿಮಾನ ನಿಲ್ದಾಣ ಬಳಸುವುದರಿಂದ ಸಾಕಷ್ಟು ಅನುಕೂಲವಾಗುತ್ತದೆ. ಹೀಗಾಗಿ ಸರಕಾರ ಈ ಬಗ್ಗೆ ಆಸಕ್ತಿ ವಹಿಸಬೇಕಾಗಿದೆ.

ಬೈಂದೂರಿನಲ್ಲಿ ವಿಮಾನ ನಿಲ್ದಾಣವಾದರೆ ಪ್ರವಾಸೋದ್ಯಮ ಹಾಗೂ ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸುವವರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಈಗಾಗಲೆ ಮುಖ್ಯಮಂತ್ರಿಗಳ ಗಮನಕ್ಕೆ ಪ್ರಸ್ತಾಪ ನೀಡಲಾಗಿದೆ. ನಮ್ಮ ಕುಂದಾಪ್ರ ಕನ್ನಡ ಬಳಗ ದುಬೈಯವರು ವಿಶೇಷ ಬೇಡಿಕೆ ಸಲ್ಲಿಸಿದ್ದಾರೆ. ಕೇಂದ್ರಮಟ್ಟದಲ್ಲಿ ಪ್ರಯತ್ನಿಸುವ ಮೂಲಕ ಸಾಕಾರಗೊಳಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು.
– ಕೆ.ಗೋಪಾಲ ಪೂಜಾರಿ, ಶಾಸಕ

ಅಂಕೋಲಾದಿಂದ ಕುಂದಾಪುರದ ವರೆಗೆ ಕಿರು ವಿಮಾನ ನಿಲ್ದಾಣ ಸ್ಥಾಪನೆಗೆಹಲವು ವಿಪುಲ ಅವಕಾಶಗಳಿವೆ. ಈ ಭಾಗದ ಸಾವಿರಾರು ಜನ ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಪ್ರಸ್ತುತ ಗೋವಾ ಹಾಗೂ ಮಂಗಳೂರು ವಿಮಾನ ನಿಲ್ದಾಣದ ಮೂಲಕ ವಿದೇಶ ಪ್ರಯಾಣ  ಬೆಳೆಸಬೇಕಾಗಿದೆ. ಈಗಾಗಲೆ ಬೈಂದೂರು ಒತ್ತಿನೆಣೆಯಲ್ಲಿ ಏರ್‌ಸ್ವಿ$#ಪ್‌ಪ್ರಸ್ತಾವನೆಯಾಗಿದೆ.ರಾಜ್ಯ ಹಾಗೂ ಕೇಂದ್ರ ಮಟ್ಟದಲ್ಲಿ ಪ್ರಯತ್ನ ನಡೆಯುತ್ತಿದೆ. ಅಭಿವೃದ್ಧಿಯ ಹಿತದೃಷ್ಟಿಯಿಂದ ವಿಮಾನನಿಲ್ದಾಣ ಅತ್ಯಾವಶ್ಯಕವಾಗಿದೆ.
– ಸಾಧನ್‌ ದಾಸ್‌, ನಮ್ಮ ಕುಂದಾಪ್ರ ಕನ್ನಡ ಬಳಗ ದುಬೈಯ ಅಧ್ಯಕ್ಷ

ಟಾಪ್ ನ್ಯೂಸ್

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.