ಕಿರುಸೇತುವೆ ನಿರ್ಮಿಸುವಂತೆ ಜನರ ಮನವಿ

ಅಪಾಯಕಾರಿ ಸ್ಥಿತಿಯಲ್ಲಿ ಬೈದಾಳ್‌- ಪರಂಬರೊಟ್ಟು ಸಂಪರ್ಕದ ಕಾಲುಸಂಕ

Team Udayavani, Jan 30, 2020, 11:36 PM IST

2201PALLI03

ಪಳ್ಳಿ: ನಿಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬೈದಾಳ್‌ ಪರಂಬರೊಟ್ಟು ಸಂಪರ್ಕ ಕಲ್ಪಿಸುವ ಕಾಲುಸಂಕ ತೀರಾ ಹಳೆಯದಾಗಿದ್ದು ಸುಮಾರು 70 ವರ್ಷಗಳಷ್ಟು ಹಿಂದಿನದ್ದಾಗಿದೆ.

ನಿಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪರಂಬರೊಟ್ಟು ಬೈದಾಳ್‌ ಸಂಪರ್ಕಿಸುವ ಕಾಲುಸಂಕವನ್ನು ಅಭಿವೃದ್ಧಿಗೊಳಿಸುವಂತೆ ಗ್ರಾಮಸ್ಥರು ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಮಾತ್ರ ಏನೂ ಪ್ರಯೋಜನವಾಗಿಲ್ಲ.

ಈ ಭಾಗದಲ್ಲಿ ಸುಮಾರು 50ಕ್ಕೂ ಅಧಿಕ ಮನೆಗಳಿದ್ದು ಬಹುತೇಕ ಎಲ್ಲ ಮನೆಯ ನಿವಾಸಿಗಳು ದಿನ ನಿತ್ಯ ಈ ಕಾಲುಸಂಕದ ಮೂಲಕವೆ ತಮ್ಮ ದೈನಂದಿನ ಕೆಲಸಗಳಿಗೆ ಸಂಚರಿಸುತ್ತಿದ್ದಾರೆ. ಬಹುತೇಕರು ಕೃಷಿ ಅವಲಂಬಿಸಿದ್ದು ತಾವು ಬೆಳೆದ ತರಕಾರಿಗಳನ್ನು ಮಾರುಕಟ್ಟೆ ಕೊಂಡೊಯ್ಯಲು ಈ ಮಾರ್ಗವನ್ನೇ ಅವಲಂಬಿಸಿದ್ದು ಹಾಗೂ ಹೈನುಗಾರರು ಹಾಲಿನ ಡೈರಿಗೆ ಸಂಚರಿಸಲು ಈ ಕಾಲುಸಂಕದ ಮೂಲಕವೇ ತೆರಳಬೇಕಾಗಿದೆ.

ನಿಟ್ಟೆ ವಿದ್ಯಾಸಂಸ್ಥೆ ಹಾಗೂ ಇತರೆಡೆ ವ್ಯಾಸಂಗಕ್ಕಾಗಿ ತೆರಳಲು ಕಾಲುಸಂಕವನ್ನೇ ಅವಲಂಬಿಸಿದ್ದಾರೆ.ಮಳೆಗಾಲದಲ್ಲಿ ತುಂಬಿ ಹರಿಯುವ ಈ ಕಾಲುಸಂಕವು ಪೋಷಕರು ಈ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ತೆರಳುವುದು ಕಷ್ಟ ಸಾಧ್ಯವಾಗಿದೆ. ಎರಡು ಪಾರ್ಶ್ವಗಳಲ್ಲಿಯೂ ರಸ್ತೆಗಳಿದ್ದೂ ಕಾಲುಸಂಕದಿಂದಾಗಿ ವಾಹನ ಸಂಚಾರ ಅಸಾಧ್ಯ.

ಇಲ್ಲಿ ಕಿರುಸೇತುವೆ ನಿರ್ಮಿಸುವಂತೆ ಹಲವಾರು ಗ್ರಾಮ ಸಭೆಗಳಲ್ಲಿಯೂ ಪ್ರಸ್ತಾಪಗೊಂಡರೂ ಮಾತ್ರ ಸ್ಥಳೀಯರ ಬಹು ದಿನಗಳ ಬೇಡಿಕೆ ಮಾತ್ರ ಇನ್ನೂ ನೆರವೇರಿಲ್ಲ. ಪ್ರತೀ ಚುನಾವಣೆ ಸಂದರ್ಭ ಜನಪ್ರತಿನಿಧಿಗಳು ಭರವಸೆ ನೀಡುತ್ತಿದ್ದರೂ ಕಿರು ಸೇತುವೆ ನಿರ್ಮಿಸುವಲ್ಲಿ ಮಾತ್ರ ಜನಪ್ರತಿನಿಧಿಗಳು ಆಸಕ್ತಿ ತೋರುತ್ತಿಲ್ಲ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಮುಂದಿನ ಮಳೆಗಾಲದ ಒಳಗಾದರೂ ಸಂಬಂಧಪಟ್ಟ ಅಧಿಕಾರಿಗಳು ಕಿರು ಸೇತುವೆ ನಿರ್ಮಿಸುವಲ್ಲಿ ಕ್ರಮ ಕೈಗೊಂಡಲ್ಲಿ ಗ್ರಾಮಸ್ಥರ ಬಹುದಿನಗಳ ಕನಸು ನನಸಾಗಬಹುದಾಗಿದೆ.

ಪ್ರಯತ್ನಿಸಲಾಗುವುದು
ಈ ಕಾಮಗಾರಿ ಕುರಿತು ಮುಂದಿನ ಕ್ರಿಯಾ ಯೋಜನೆಯ ಪಟ್ಟಿಯಲ್ಲಿ ಸೇರಿಸಿ ಅಭಿವೃದ್ಧಿಪಡಿಸುವಲ್ಲಿ ಪ್ರಯತ್ನಿಸಲಾಗುವುದು.
-ಗೋಪಾಲ ಶೆಟ್ಟಿ,
ಗ್ರಾ.ಪಂ. ಉಪಾಧ್ಯಕ್ಷರು

ಕಿರು ಸೇತುವೆ ಬೇಕು
ಅತೀ ಹಳೆಯದಾದ ಕಾಲುಸಂಕದಲ್ಲಿ ಬಹುತೇಕ ಶಾಲಾ ಮಕ್ಕಳು ದಿನ ನಿತ್ಯ ಸಂಚರಿಸುತ್ತಿದ್ದು, ಮಳೆಗಾಲದಲ್ಲಿ ಇಲ್ಲಿನ ಹಳ್ಳ ತುಂಬಿ ಹರಿಯುತ್ತದೆ. ಈ ನಿಟ್ಟಿನಲ್ಲಿ ಕಿರು ಸೇತುವೆ ನಿರ್ಮಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪ್ರಯತ್ನಿಸಬೇಕು.
-ಶ್ವೇತಾ ಶೆಟ್ಟಿಗಾರ್‌,
ಪರಂಬರೊಟ್ಟು ನಿವಾಸಿ

ಟಾಪ್ ನ್ಯೂಸ್

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.