ಉಳ್ಳಾಲ ಸಿಪಿಎಂ ಕಚೇರಿಯ ಮೇಲೆ ದಾಳಿ: ಕುಂದಾಪುರದಲ್ಲಿ ಪ್ರತಿಭಟನೆ


Team Udayavani, Feb 25, 2017, 12:38 PM IST

2402kde3.jpg

ಕುಂದಾಪುರ: ಸಿಪಿಎಂ ಕಚೇರಿ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚುವ ಮೂಲಕ ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರ ಅನೇಕ ದಾಖಲೆ ಪತ್ರಗಳನ್ನು ಸುಟ್ಟು ಹಾಕಲಾಗಿದೆ. ಇದರಿಂದ ಬಡ ಜನತೆಯ ಹೊಟ್ಟೆಯ ಮೇಲೆ ಹೊಡೆದಂತಾಗಿದೆ. ಇಂತಹ ಕೃತ್ಯಗಳಿಗೆ  ಸಿಪಿಎಂ ಜಗ್ಗುವುದಿಲ್ಲ ಎಂದು ಸಿಪಿಐಎಂ ಕುಂದಾಪುರ ವಲಯ ಕಾರ್ಯದರ್ಶಿ ಎಚ್‌. ನರಸಿಂಹ ಹೇಳಿದರು.

ಸಿಪಿಐ(ಎಂ) ಉಳ್ಳಾಲ ಕಚೇರಿಗೆ ದಾಳಿ ನಡೆಸಿರುವುದನ್ನು  ಖಂಡಿಸಿ ಕುಂದಾಪುರ ಹಾಗೂ ಬೈಂದೂರು ವಲಯ ಸಮಿತಿ ಕುಂದಾಪುರದ ಶಾಸ್ತ್ರಿ ವೃತ್ತದಲ್ಲಿ ಆಯೋಜಿಸಿದ್ದ ಖಂಡನಾ ಸಭೆಯಲ್ಲಿ ಅವರು ಮಾತನಾಡಿದರು.

ಇಂದು ಗೋಸಾಗಾಟ, ಧರ್ಮ ರಕ್ಷಣೆ ಮುಂತಾದವುಗಳ ಬಗ್ಗೆ ಯುವಕರಲ್ಲಿ ಕೋಮು ವಿಷಬೀಜ ಬಿತ್ತಿ ಅವರನ್ನು ದಾರಿ ತಪ್ಪಿಸುವ ಕೆಲಸಗಳು ನಡೆಯುತ್ತಿವೆ. ಹೀಗಾಗಿ ಅನೇಕ ಬಡ ಯುವಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಜೈಲು ಸೇರುತ್ತಿದ್ದಾರೆ. ಕರಾವಳಿ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮುವಾದವನ್ನು ಮಟ್ಟ ಹಾಕುವ ಉದ್ದೇಶದಿಂದ ಮಂಗಳೂರಿನಲ್ಲಿ ಸಿಪಿಐಎಂ ನೇತೃತ್ವದಲ್ಲಿ ಸೌಹಾರ್ದ ಏಕತಾ ರ್ಯಾಲಿ ನಡೆಯಲಿದೆ. ಯಾವುದೇ ಗೂಂಡಾಗಿರಿಗೆ ನಾವು ಹೆದರುವುದಿಲ್ಲ. ಜೀವದ ಹಂಗು ತೊರೆದು ನಮ್ಮ ಕಾರ್ಯಕರ್ತರು ಈ ರ್ಯಾಲಿಯನ್ನು  ಯಶಸ್ವಿಗೊಳಿಸಲಿದ್ದಾರೆ ಎಂದರು.

ಸಭೆಯನ್ನುದ್ದೇಶಿಸಿ ಸಿಪಿಐಎಂ ಬೈಂದೂರು ವಲಯ ಕಾರ್ಯದರ್ಶಿ ಸುರೇಶ್‌ ಕಲ್ಲಾಗರ ಮಾತನಾಡಿ, ಅನ್ಯಾಯ ದಬ್ಟಾಳಿಕೆ ಸಹಿಸದೆ ಜೀವ ಅಮೂಲ್ಯ ಎಂದು ತಿಳಿದವರು ಎಂದರು.ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ. ಶಂಕರ್‌ ಮಾತನಾಡಿದರು.

ರಾಜೇಶ ವಡೇರಹೋಬಳಿ ಪ್ರಸ್ತಾಪಿಸಿ ಸ್ವಾಗತಿಸಿದರು. ರವಿ ವಿ.ಎಂ. ವಂದಿಸಿದರು.  ಸಿಪಿಐಎಂನ ದಾಸ ಭಂಡಾರಿ, ಅಶೋಕ್‌ ಹಟ್ಟಿಯಂಗಡಿ, ಸಂತೋಷ ಹೆಮ್ಮಾಡಿ, ರಾಜಾ ಬಿಟಿಆರ್‌, ಗಣೇಶ್‌ ಕಲ್ಲಾಗರ ಮಂಜುನಾಥ ಶೋಗನ್‌ ಮುಂತಾದವರು ಉಪಸ್ಥಿತರಿದ್ದರು.

ಸಭೆಗೆ ಮೊದಲು  ಡಿವೈಎಫ್‌ಐ ಬೆಟ್ಟಾಗರ ಕಚೇರಿಯಿಂದ ಹೊರಡಿದ ಬೈಕ್‌ ರ್ಯಾಲಿಗೆ ರ್ಯಾಲಿಗೆ ಕೆ. ಶಂಕರ್‌ ಚಾಲನೆ ನೀಡಿದರು. ರ್ಯಾಲಿ ಕುಂದಾಪುರ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಶಾಸ್ತ್ರಿ ಸರ್ಕಲ್‌ ಬಳಿ ಸಮಾಪ್ತಿಗೊಂಡಿತು.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.