ಬೋಟ್ ನಾಪತ್ತೆಯಾಗಿ 41 ದಿನ : ಅಧಿಕಾರಿಗಳು ಮೌನ: ಮುಂದುವರಿದ ಗೊಂದಲ
Team Udayavani, Jan 26, 2019, 12:30 AM IST
ಮಲ್ಪೆ: ಸುವರ್ಣ ತ್ರಿಭುಜ ಬೋಟ್ ಅಪಘಾತಕ್ಕೆ ಈಡಾಗಿ ಮುಳುಗಿದೆ ಎಂದೇ ಬಲವಾಗಿ ನಂಬಿರುವ ಅಧಿಕಾರಿಗಳು ಸಮುದ್ರದಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಸೋನಾರ್ ತಂತ್ರಜ್ಞಾನದ ಜತೆಗೆ ಕಲರ್ ಕೋಡಿಂಗ್ ಪತ್ತೆಗೆ ಮತ್ತೂಂದು ತಂತ್ರಜ್ಞಾನದ ಯಂತ್ರ ತರಿಸಿ ಕೊಂಡು ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.ಬೋಟ್ ಮತ್ತು ಮೀನುಗಾರರ ನಾಪತ್ತೆ ಪ್ರಕರಣದಲ್ಲಿ ದೃಢವಾದ ಹೇಳಿಕೆಯನ್ನು ಅಧಿಕೃತರಾರೂ ನೀಡದ ಕಾರಣ ಗೊಂದಲ ಮುಂದುವರಿದಿದೆ. ಹುಡುಕಾಟ ನಡೆಯುತ್ತಿದೆ ಒಂದೆರಡು ದಿನದಲ್ಲಿ ಸ್ಪಷ್ಟ ಸಿಗುತ್ತದೆ ಎಂಬ ಉತ್ತರ ಮಾತ್ರ ಎಲ್ಲ ಕಡೆಯಿಂದ ಬರುತ್ತಿದೆ. ಮೀನುಗಾರ ಕುಟುಂಬಗಳಲ್ಲಿ ದುಃಖ ಮಡುಗಟ್ಟಿದೆ.
ಸಿಎಂ ಜತೆ ಚರ್ಚೆ
ಶುಕ್ರವಾರ ಬೆಂಗಳೂರಿನಲ್ಲಿ ಮೀನುಗಾರರ ಜತೆ ಮುಖ್ಯಮಂತ್ರಿ ಗಳ ವಿಶೇಷ ಸಭೆ ನಡೆದಿದ್ದು, ಮಲ್ಪೆ ಮೀನುಗಾರರ ನಿಯೋಗವು ಮುಖ್ಯಮಂತ್ರಿ ಅವರನ್ನು ವೈಯಕ್ತಿಕ ವಾಗಿ ಭೇಟಿಯಾಗಿ ನಾಪತ್ತೆ ಪ್ರಕರಣದ ಬಗ್ಗೆಯೂ ಚರ್ಚೆ ನಡೆಸಿದರು.
ಶ್ರೀಲಂಕದಲ್ಲಿ ಪತ್ತೆ ವದಂತಿ
ಈ ನಡುವೆ ನಾಪತ್ತೆಯಾದ ಬೋಟ್ ಶ್ರೀಲಂಕದಲ್ಲಿ ಪತ್ತೆ ಯಾಗಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಂತಹ ಅಸಂಬದ್ಧ ವಿಚಾರಗಳನ್ನು ಹರಡುವವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರರು ಆಗ್ರ ಹಿಸಿದ್ದಾರೆ.
ಶ್ರೀಲಂಕ ಸಮೀಪ ಬೋಟ್ ಪತ್ತೆಯಾಗಿ ರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ವಾಟ್ಸ್ಆ್ಯಪ್ನಲ್ಲಿ ಬಂದಿರುವುದು ಸುಳ್ಳು ಮಾಹಿತಿ. ವದಂತಿ ಹಬ್ಬಿಸಿ ಗೊಂದಲ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.