ಉಡುಪಿಯಲ್ಲಿ ಚಿನ್ನಾಭರಣ ಖರೀದಿ ವಂಚನೆ ತಂಡ
Team Udayavani, Oct 2, 2019, 5:38 AM IST
ಉಡುಪಿ: ಚಿನ್ನಾಭರಣ ಖರೀದಿಸಿ ಆನ್‌ಲೈನ್ ಮೂಲಕ ಹಣ ಪಾವತಿಸುವ ನಾಟಕವಾಡಿ ವಂಚಿಸುವ ತಂಡ ಉಡುಪಿಯಲ್ಲಿ ಕಾರ್ಯಾಚರಿಸುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಈ ತಂಡ ಈಗಾಗಲೇ ಚಿಕ್ಕಮಗಳೂರಿನ ಕೊಪ್ಪ, ಕಾರವಾರಗಳಲ್ಲಿನ ಜುವೆಲರಿ ಅಂಗಡಿಗಳಲ್ಲಿ ಇದೇ ರೀತಿ ಮೋಸ ಮಾಡಿದೆ.
ಫೋಟೋ ದಾಖಲು
ಮೋಸ ಮಾಡುವ ತಂಡದ ಇಬ್ಬರ ಪೋಟೋಗಳು ಕಾರವಾರದ ಜುವೆಲರಿ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಪೊಲೀಸರು ಅದನ್ನು ಬಹಿರಂಗ ಪಡಿಸಿದ್ದಾರೆ. ಇವರು ಕಂಡು ಬಂದರೆ ತತ್‌ಕ್ಷಣವೇ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ.
ನಕಲಿ ನೋಂದಣಿ ಕಾರಿನಲ್ಲಿ ಸಂಚಾರ
ನಕಲಿ ನೋಂದಣಿ ಸಂಖ್ಯೆಯುಳ್ಳ ಬಿಳಿ ಬಣ್ಣದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಈ ತಂಡ ಸಂಚರಿಸುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ.
ಈಗಾಗಲೇ ಜಿಲ್ಲೆಯ ಎಲ್ಲ ಜುವೆಲರಿ ಅಂಗಡಿ ಮಾಲಕರಿಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.
ಜುವೆಲರಿ ಅಂಗಡಿಗಳಿಗೆ ಮಾಹಿತಿ ರವಾನೆ
ಕಾರವಾರ ಹಾಗೂ ಕೊಪ್ಪದಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿತ್ತು. ಈ ಬಗ್ಗೆ ಕೊಪ್ಪ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ. ಈಗ ಈ ತಂಡ ಉಡುಪಿಗೆ ಬಂದಿರುವ ಮಾಹಿತಿ ಲಭಿಸಿದ್ದು, ಜುವೆಲರಿ ಅಂಗಡಿಯವರು
ಎಚ್ಚರದಿಂದ ಇರುವಂತೆ ತಿಳಿಸಲಾಗಿದೆ.
– ಮಂಜುನಾಥ್ ವೃತ್ತ ನಿರೀಕ್ಷಕರು, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.