ಬೋಟ್ ನಾಪತ್ತೆಯಾಗಿ 88 ದಿನ:ಮತದಾನ ಬಹಿಷ್ಕಾರಕ್ಕೆ ತೀರ್ಮಾನ
Team Udayavani, Mar 13, 2019, 1:00 AM IST
ಮಲ್ಪೆ: ಸುವರ್ಣ ತ್ರಿಭುಜ ಬೋಟ್ ನಾಪತ್ತೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸದೆ ಮೀನುಗಾರರನ್ನು ನಿರ್ಲಕ್ಷಿಸಿದೆ ಎಂದು ನಾಪತ್ತೆಯಾದ ಎರಡೂ ಮೀನುಗಾರರ ಮನೆಯವರು ಆರೋಪಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.
ಮಲ್ಪೆ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ಸಹಿತ 7 ಮಂದಿ ಮೀನುಗಾರರು ನಾಪತ್ತೆಯಾಗಿ 88 ದಿನಗಳು ಕಳೆದಿವೆ. ಜನಪ್ರತಿನಿಧಿಗಳು ಮೀನುಗಾರರ ಮನೆಗೆ ಭೇಟಿ ನೀಡಿದ್ದು ಬಿಟ್ಟರೆ, ಏನಾಗಿದೆ ಎಂದು ಇಲ್ಲಿಯವರೆಗೆ ಯಾವುದೇ ರೀತಿಯ ಮಾಹಿತಿ ನೀಡಿಲ್ಲ ಎಂದು ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಕ್ಷಣಾ ಸಚಿವರ ನಿರೀಕ್ಷೆಯಲ್ಲಿ
ಉಡುಪಿ ಪೊಲೀಸರ ತಂಡ, ಕೋಸ್ಟ್‌ಗಾರ್ಡ್, ನೌಕಾಪಡೆಯು ಆರಂಭದ ಎರಡು ತಿಂಗಳಿನಿಂದ ಶೋಧ ಕಾರ್ಯ ನಡೆಸಿದರೂ ಒಂದೇ ಒಂದು ಸುಳಿವು ಲಭ್ಯವಾಗದೆ ಈಗ ಕೈಚೆಲ್ಲಿ ಕುಳಿತಿವೆ. ಪ್ರಕರಣದ ನಿಗೂಢತೆಯನ್ನು ಭೇದಿಸಲು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೊರೆ ಹೋಗಲಾಗಿದೆ. ಎರಡು ವಾರದ ಹಿಂದೆ ಮೀನುಗಾರ ಸಂಘದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ರಕ್ಷಣಾ ಸಚಿವರನ್ನು ಭೇಟಿಯಾಗಿ ಪತ್ತೆಗೆ ಸಹಾಯ ಕೋರಿದ್ದಾರೆ. ಅತೀ ಶೀಘ್ರ ನೌಕಾದಳ ಅಧಿಕಾರಿಗಳೊಂದಿಗೆ ಮಲ್ಪೆಗೆ ಬಂದು ಚರ್ಚಿಸಿ ಕಾರ್ಯಾಚರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳುವ ಭರವಸೆಯನ್ನೂ ಸಚಿವರು ನೀಡಿರುವ ಹಿನ್ನೆಲೆಯಲ್ಲಿ ಈಗ ಮನೆಯವರು ರಕ್ಷಣಾ ಸಚಿವರ ಬರುವಿಕೆಯ ನಿರೀಕ್ಷೆಯಲ್ಲಿಯೂ ಇದ್ದಾರೆ.
ಮನೆಯಲ್ಲಿ ಈಗಲೂ ಕಣ್ಣೀರು
ನಾಪತ್ತೆಯಾದ ಮೀನುಗಾರ ಚಂದ್ರಶೇಖರ ಕೋಟ್ಯಾನ್ ಮತ್ತು ದಾಮೋದರ ಸಾಲ್ಯಾನ್ ಅವರ ಮನೆಯಲ್ಲಿ ಹೆತ್ತವರು ತಮ್ಮ ಮಕ್ಕಳನ್ನು ನೆನೆದು ಈಗಲೂ ಕಣ್ಣೀರಿಡುತ್ತಿದ್ದಾರೆ. ತಮ್ಮವರ ಗತಿ ಏನಾಗಿದೆ ಎಂಬ ಮಾಹಿತಿ ಸಿಗದೆ ಕುಟುಂಬಗಳು ಅಸಹಾಯಕರಾಗಿ ಹತಾಶೆಯ ಸ್ಥಿತಿ ಅನುಭವಿ ಸುತ್ತಿದ್ದು, ಬರುವಿಕೆಗಾಗಿ ಇನ್ನೂ ಕಾಯುತ್ತಾ ಕುಳಿತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.