ಕಾಂಗ್ರೆಸಿಗರಿಂದ ಕಾರ್ಕಳದ ಗೌರವ ಕೆಡಿಸುವ ಬೆಳವಣಿಗೆ ಒಳ್ಳೆಯದಲ್ಲ:ಸುನಿಲ್‌

ವೈಯಕ್ತಿಕ ಟೀಕೆ ಬಿಟ್ಟು ಕಾರ್ಕಳಕ್ಕೆ ಗೌರವ ತರುವಂತೆ ನಡೆದುಕೊಳ್ಳಲಿ

Team Udayavani, May 4, 2023, 6:04 PM IST

1-suni;

ಕಾರ್ಕಳ: ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಿರುವ ಬೆಂಬಲಿಗರು ಸಾರ್ವಜನಿಕ ಸಭೆ, ವೇದಿಕೆಗಳಲ್ಲಿ,ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ಟೀಕೆಗಳನ್ನು ಮಾಡುವುದು, ಕೀಳು ಮಟ್ಟದ ಪದ ಪ್ರಯೋಗಿಸುತ್ತಿರುವುದನ್ನು ಮಾಡುತ್ತಿದ್ದಾರೆ. ಈ ಎಲ್ಲ ನಡವಳಿಕೆಗಳು ಅನಾಗರಿಕ ಸಂಸ್ಕೃತಿಯಾಗಿದೆ. ಇಂತಹ ಸಭ್ಯತೆ ಮೀರಿದ ವರ್ತನೆ ಕಾರ್ಕಳದ ಗೌರವ ಕೆಡಿಸುವ ಯತ್ನ ಎಂದು ಬಿಜೆಪಿ ಅಭ್ಯರ್ಥಿ ವಿ.ಸುನಿಲ್‌ಮಾರ್‌ ಹೇಳಿದ್ದಾರೆ.

ಕಾರ್ಕಳದ ಜನ ಗೌರವದಿಂದ ಬದುಕಿ ಬಾಳಿದವರು. ಇಂದಿಗೂ ಅದೇ ಬದುಕನ್ನುಮುಂದವರೆಸುತ್ತಿದ್ದಾರೆ. ಮುಂದೆಯೂ ಅದನ್ನೆ ಬಯಸುವರು. ಗೌರವದ ರಾಜಕಾರಣವನ್ನು ಹಿಂದಿನ ಎಲ್ಲ ಚುನಾವಣೆ ಹಾಗೂ ಕಾಲ ಘಟ್ಟದಲ್ಲಿ ನೋಡಿಕೊಂಡು ಬರಲಾಗಿದೆ. ಆದರೀಗ ಕಾಂಗ್ರೆಸ್ ಅಭ್ಯರ್ಥಿ ಪರವಿರುವ ಕೆಲ ಬೆಂಬಲಿಗರು ರಾಜಕೀಯ , ವಯಕ್ತಿಕ ಲಾಭಕ್ಕಾಗಿ ಸಾರ್ವಜನಿಕ ಸಭೆ ಹಾಗೂ ಸಾಮಾಜಿಕ ಜಾಲತಾಣ ಬಳಸಿಕೊಂಡು ತೀರಾ ಕೆಳ ಮಟ್ಟಕ್ಕೆ ಇಳಿದು ವಯಕ್ತಿಕ ಟೀಕೆ- ಟಿಪ್ಪಣಿಗಳಲ್ಲಿ ತೊಡಗಿಕೊಂಡಿದ್ದಾರೆ. ವಯಕ್ತಿಕ ವಿಚಾರ ಬಳಸಿಕೊಂಡು ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ. ಅಭ್ಯರ್ಥಿ ಬೆಂಬಲಿಗರ ಪದ ಬಳಕೆ, ಪ್ರಚೋದನಕಾರಿ ಹೇಳಿಕೆ, ಸಂದೇಶಗಳು ಎಲ್ಲೆ ಮೀರುತ್ತಿವೆ. ಅವುಗಳು ಕಾರ್ಕಳದ ಗೌರವ, ನಾಗರಿಕ ಸಮಾಜಕ್ಕೆ ಚ್ಯುತಿ ತರುವಂತಿದೆ. ಕಾರ್ಕಳದ ಜನ ಪ್ರೀತಿ ಮತ್ತು ಗೌರವದಿಂದ, ಸೌಹಾರ್ಧತೆಯಿಂದ ಜೀವನ ನಡೆಸಿಕೊಂಡು ಬಂದವರು. ಶಾಂತಿಯ ವಾತಾವರಣ ಇಲ್ಲಿ ಈ ಹಿಂದಿನ ಎಲ್ಲ ಚುನಾವಣೆಗಳಲ್ಲಿ ಮತ್ತು ಅನಂತರದಲ್ಲಿಯೂ ನೆಲೆಯೂರಿತ್ತು. ವಯಕ್ತಿಕ ಟೀಕೆ, ದ್ವೇಷದ ರಾಜಕಾರಣವನ್ನು ಕಾರ್ಕಳದ ನಾಗರಿಕ ಸಮಾಜ ಎಂದೂ ಬಯಸುವುದಿಲ್ಲ. ಇಷ್ಟಪಡುವುದೂ ಇಲ್ಲ. ಅದನ್ನು ಲೆಕ್ಕಕೆೆR ತೆಗೆದುಕೊಳ್ಳುವುದಿಲ್ಲ ಎನ್ನುವ ವಿಶ್ವಾಸವಿದೆ. ಇದರಿಂದ ರಾಜಕೀಯವಾಗಿ ಲಾಭ ಪಡೆಯಬಹುದು ಎನ್ನುವುದು ಕಾಂಗ್ರೆಸ್ಸಿನ ಅಭ್ಯರ್ಥಿ ಹಾಗೂ ಬೆಂಬಲಿಗರ ಹಗಲು ಕನಸು ಎಂದರು.

ಎಲ್ಲೆ ಹೋದರು ಕಾರ್ಕಳ ಹೆಸರು ಬ್ರಾಂಡ್‌ ಆಗಿ ಗೌರವದಿಂದ ಕಾಣುವಂತಾಗಿದೆ. ಕಾರ್ಕಳದ ಬಗ್ಗೆ ಕೇವಲ ಕರಾವಳಿಯಷ್ಟೇ ಅಲ್ಲ. ನಾಡಿನೆಲ್ಲೆಡೆ ಅಪಾರ ಗೌರವ ಅಭಿಮಾನವಿದೆ. ಕಾರ್ಕಳದ ಹೆಸರು ಇದೇ ಕಾರಣಕ್ಕೆ ವಿಶ್ವದೆಲ್ಲೆಡೆ ವಿಸ್ತರಿಸಿದೆ. ಎಲ್ಲೇ ಹೋದರೂ ಜನ ಕಾರ್ಕಳದ ಬಗ್ಗೆ ಗೌರವದಿಂದ ಮಾತನಾಡುವಂತಹ ವಾತಾವರಣ ಇತ್ತೀಚಿನ ಅಭಿವೃದ್ದಿ , ಪ್ರವಾಸಿ ತಾಣಗಳ ಪ್ರಗತಿಗಳಿಂದ ನಿರ್ಮಾಣವಾಗಿದೆ. ಕಾರ್ಕಳ ಹೆಸರೇ ಬ್ರಾಂಡ್ ಆಗಿ ಜಗತ್ತಿನೆಲ್ಲೆಡೆ ಗಮನ ಸೆಳೆಯುತ್ತಿದೆ. ಎಲ್ಲೆ ಹೋದರೂ ಕಾರ್ಕಳದವರಾ ? ಎನ್ನುವಷ್ಟರ ಮಟ್ಟಿಗೆ ಕಾರ್ಕಳಕ್ಕೆ ಗೌರವ ತಂದು ಕೊಡುವ ಕೆಲಸವಾಗಿದೆ ಎಂದಿದ್ದಾರೆ.

ವೈಯಕ್ತಿಕ ಟೀಕೆ ಬಿಟ್ಟು ಕಾರ್ಕಳಕ್ಕೆ ಗೌರವ ತರುವಂತೆ ನಡೆದುಕೊಳ್ಳಲಿ
ಅಭಿವೃದ್ಧಿ ಸಂಗತಿಗಳ ಬಗ್ಗೆ ಮಾತನಾಡುವ ಬದಲಿ ಕಾಂಗ್ರೆಸ್ಸಿನ ಅಭ್ಯರ್ಥಿಯ ಬೆಂಬಲಿಗರು ಕಾರ್ಕಳದ ಗೌರವ ಕೆಡಿಸುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಚುನಾವಣೆ ಮೇ 10ಕ್ಕೆ ಮುಗಿಯಬಹುದು. ಬಳಿಕವೂ ಇಲ್ಲಿನವರು ಸಹಬಾಳ್ವೆಯಿಂದ ಒಳ್ಳೆಯ ವಾತಾವರಣದಲ್ಲಿ ಗೌರವದಿಂದ ಬದುಕಬೇಕಿದೆ. ಕಾಂಗ್ರೆಸ್ಸಿಗರು ವೈಯಕ್ತಿಕ ಟೀಕೆಗಳ ಬದಲಿ ಕಾರ್ಕಳಕ್ಕೆ ಗೌರವ ತರುವ ರೀತಿ ವರ್ತಿಸುವುದನ್ನು ರೂಢಿಸಿಕೊಳ್ಳಲಿ, ಒಳ್ಳೆಯ ವಿಚಾರದ ಬಗ್ಗೆ ಚರ್ಚೆಗಳನ್ನು ಮಾಡುವ ಕಡೆ ಗಮನ ಹರಿಸಲಿ ಎಂದವರು ಹೇಳಿದ್ದಾರೆ.

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.