Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್
ತಪ್ಪಿದ ಭಾರೀ ಅವಘಡ..
Team Udayavani, Jun 27, 2024, 7:39 PM IST
ಉಡುಪಿ: ಮಣಿಪಾಲದಿಂದ ಹೆರ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿ ತೋಡಿಗೆ ಬಿದ್ದ ಘಟನೆ ಗುರುವಾರ ಸಂಜೆ ನಡೆದಿದೆ.
ಕೆಳಪರ್ಕಳದ ಬಳಿ ತೆರಳುತ್ತಿದ್ದಾಗ ಚಾಲಕನ ಮೂರ್ಛೆ ಬಂದಿದ್ದು ಕೂಡಲೇ ಅವರು ಸ್ಟೇರಿಂಗ್ ಬಿಟ್ಟಿದ್ದಾರೆ. ಈ ವೇಳೆ ಬಸ್ ಹಿಮ್ಮುಖವಾಗಿ ಚಲಿಸಿದೆ. ಕೂಡಲೇ ಬಸ್ಸಿನಲ್ಲಿದ್ದ ಪ್ರಯಾಣಿಕರು ಕೆಳಕ್ಕೆ ಹಾರಲು ಯತ್ನಿಸಿದ್ದಾರೆ. ಬಸ್ ತೋಡಿಗೆ ಬಿದ್ದು ಅಲ್ಲೇ ನಿಂತಿದೆ. ಸ್ವಲ್ಪ ಹಿಂದಕ್ಕೆ ತೆರಳುತ್ತಿದ್ದರೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯುವ ಸಾಧ್ಯತೆಯಿತ್ತು. ಬಸ್ಸಿನಲ್ಲಿ 30-40 ಮಂದಿ ಪ್ರಯಾಣಿಕರು ಇದ್ದರು. ಚಾಲಕನನ್ನು ಕೂಡಲೇ ಮಣಿಪಾಲದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ.
ಪ್ರಯಾಣಿಕರು ಮತ್ತೊಂದು ಬಸ್ಸಿನಲ್ಲಿ ತೆರಳಿದ್ದಾರೆ. ಬಸ್ಸಿನ ಹಿಂಭಾಗ ಜಖಂಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.