“ಕುಂದಗನ್ನಡ ಸಾಹಿತ್ಯ ಅಕಾಡೆಮಿ ಕೇಂದ್ರ ಸ್ಥಾಪನೆಯಾಗಬೇಕು’


Team Udayavani, Feb 24, 2017, 12:54 PM IST

2302kde15.jpg

ಮರವಂತೆ (ಉಪ್ಪುಂದ): ಪ್ರಾಚೀನ ಭಾರತೀಯ ಸಂಸ್ಕೃತಿ ಯಿಂದಾಗಿ ವಿಶ್ವದಲ್ಲಿ ಭಾರತ ಅಗ್ರ ಮಾನ್ಯವಾಗಿ ಗುರುತಿಸಲ್ಪಟ್ಟಿದೆ. ಕವಿಗಳಿಂದ ಸಾಹಿತ್ಯ ಕ್ಷೇತ್ರ ಸಮೃದ್ಧಗೊಂಡಿದೆ. ಕುಂದಗನ್ನಡ ಅಚ್ಚ ಕನ್ನಡ ಹಾಗೂ ಆಡು ಮಾತಿನ ಆತ್ಮೀಯ ಭಾಷೆಯಾಗಿದ್ದು ಇದಕ್ಕೆ ಸರಕಾರದ ವಿಶೇಷ ಮಾನ್ಯತೆ ದೊರಕಿಸಿ ಕೊಡುವುದರ ಜತೆ ಕುಂದಗನ್ನಡ ಸಾಹಿತ್ಯ ಅಕಾಡೆಮಿ ಕೇಂದ್ರ ಸ್ಥಾಪನೆ ಯಾಗಬೇಕು, ಕುಂದಗನ್ನಡ ಶಬ್ದ ಅಳಿವಿ ನಂಚಿನಲ್ಲಿದ್ದು ಇದನ್ನು ಸಂಗ್ರಹಿಸುವ ಜತೆ ಅಧ್ಯಯನ ಕೇಂದ್ರ ಆರಂಭಿಸುವ ಕಾರ್ಯ ಸಾಧ್ಯವಾಗಬೇಕು  ಎಂದು ಹಿರಿಯ ಸಾಹಿತಿ ಡಾ| ಎಚ್‌.ವಿ. ನರಸಿಂಹಮೂರ್ತಿ ಹೇಳಿದರು.

ಅವರು ಕಿರಿಮಂಜೇಶ್ವರ ಅಗಸ್ತೆÂà ಶ‌Ìರ ದೇವಸ್ಥಾನದಲ್ಲಿ  ಉಳ್ಳೂರು ಮೂಕಜ್ಜಿ ವೇದಿಕೆಯಲ್ಲಿ  ಫೆ. 23 ರಂದು  ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕದ ಆಶ್ರಯದಲ್ಲಿ ನಡೆದ  15ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಸರಕಾರದ ಇಚ್ಛಾಶಕ್ತಿಯ ಕೊರತೆ ಯಿಂದಾಗಿ ಸಾಹಿತ್ಯ ಭಾಷಾ ಪ್ರತಿಷ್ಠಾನ ಮೈಸೂರಿನಲ್ಲಿ ಇರಬೇಕೊ ಅಥವಾ ಬೆಂಗಳೂರಿನಲ್ಲಿ ಇರಬೇಕೊ ಎಂಬ ಗೊಂದಲ ಉಂಟಾಗಿದ್ದು ಇದರಿಂದ ಕನ್ನಡ ಸಾಹಿತ್ಯ ಇಂದು ಆತಂಕದಲ್ಲಿದೆ ಎಂದರು.

ಉಡುಪಿ ಕ.ಸಾ.ಪ. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ಮಾತುಗಳ್ನಾಡಿ  ಹಿಂಬಾಗಿಲ ಮೂಲಕ ಸರಕಾರಿ ಶಾಲೆಗಳನ್ನು ಆಂಗ್ಲ ಮಾಧ್ಯಮವನ್ನಾಗಿ ಮಾಡುವ ಪಿತೂರಿ ಮಾಡಲಾಗುತ್ತಿದೆ, ಇದರಿಂದ ಕನ್ನಡ ಶಾಲೆಗಳು ನೆಲಕಚ್ಚಿ ಹೋಗುತ್ತವೆ, ತರೆಮರೆಯಲ್ಲಿ ಈಗಾಗಲೇ 20ಕ್ಕೂ ಹೆಚ್ಚು  ಆಂಗ್ಲ ಮಾಧ್ಯಮ ಶಾಲೆಗೆ ಅನುಮತಿ ನೀಡುವ ಪ್ರಯತ್ನಗಳಾಗುತ್ತಿವೆ, ಆಂಗ್ಲ  ಮಾಧ್ಯಮ ವ್ಯಾಮೋಹದಿಂದ ಕನ್ನಡ ಶಾಲೆಗಳು ಇಂಗ್ಲಿಷ್‌ ಮಯವಾಗಿ ಮಾರ್ಪಾಡುಗೊಳ್ಳುವ  ಕೆಲಸವಾಗು ತ್ತಿದ್ದು, ಇದರ ವಿರುದ್ಧ ಹೋರಾಟ ಮಾಡದಿದ್ದರೆ ಕನ್ನಡಕ್ಕೆ  ಅಪಾಯ ಕಟ್ಟಿಟ್ಟ ಬುತ್ತಿ ಎಂದರು.

ಸಮ್ಮೇಳನದ ಅಧ್ಯಕ್ಷ  ಹಿರಿಯ ಅಂಕಣಕಾರ ಸತೀಶ ಚಪ್ಪರಿಕೆ ಮಾತನಾಡಿ ನಮ್ಮ ಆಡು ಭಾಷೆಯನ್ನು ಮಾತನಾಡಲು ಹಿಂಜರಿಯುತ್ತಿರುವುದು ಸಾಂಸ್ಕೃತಿಕ ದುರಂತವಾಗಿದೆ, ಭಾಷೆ ಒಂದು ಪರಂಪರೆಯ ಸಂಸ್ಕೃತಿಯಾಗಿದ್ದು ಭಾಷೆ ಸಾಯಿತ್ತಿದೆ ಎಂದರೆ ನಮ್ಮ ಪರಂಪರಾ ಗತ ಸಂಸ್ಕೃತಿ ನಶಿಸುತ್ತಿದೆ ಎಂದರ್ಥ ಎಂದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಪ್ರೊ| ಕನರಾಡಿ ವಾದಿರಾಜ ಭಟ್‌, ಜಿ.ಪಂ. ಸದಸ್ಯೆ ಗೌರಿ ದೇವಾಡಿಗ, ಕಿರಿಮಂಜೇಶ್ವರ ಅಗಸ್ತೆÂàಶ್ವರ ದೇಗುಲದ ಮಾಜಿ ಆಡಳಿತ ಧರ್ಮ ದರ್ಶಿ ಕೆ. ಉಮೇಶ ಶ್ಯಾನುಭೋಗ್‌, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾ.ಯೋಜನಾಧಿಕಾರಿ ಅಮರಪ್ರಸಾದ್‌ ಶೆಟ್ಟಿ, ಅಗಸ್ತೆÂàಶ‌Ìರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪರುಶುರಾಮ, ಬೈಂದೂರು ಹೋಬಳಿ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ. ಉಪ್ಪುಂದ, ಜಿಲ್ಲಾ ಕಾರ್ಯದರ್ಶಿ ಸೂರುಲು ನಾರಾಯಣ, ಅಶೋಕ ತೆಕ್ಕಟ್ಟೆ ಉಪಸ್ಥಿತರಿದ್ದರು.

ಕುಂದಾಪುರ ತಾಲೂಕು ಕಸಾಪ ಅಧ್ಯಕ್ಷ ಬೈಂದೂರು ಡಾ| ಸುಬ್ರಹ್ಮಣ್ಯ ಭಟ್‌ ಸ್ವಾಗತಿಸಿದರು, ಗಣಪತಿ ಹೋಬಳಿದಾರ ಮತ್ತು ವಿಶ್ವನಾಥ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು, ನಾರಾಯಣ ಐತಾಳ ನಿರ್ವಹಿಸಿದರು, ರವೀಂದ್ರ ಎಚ್‌ ವಂದಿಸಿದರು.

ಧ್ವಜಾರೋಹಣ: ಬೆಳಗ್ಗೆ ಕುಂದಾಪುರ ತಾ.ಪಂ. ಅಧ್ಯಕ್ಷೆ ಜಯಶ್ರೀ ಎಸ್‌. ಮೊಗವೀರ ರಾಷ್ಟ್ರ ಧ್ವಜಾರೋಹಣ ನಡೆಸಿ ದರು. ಖಂಬದಕೋಣೆ ರೈತ ಸೇ.ಸ. ಸಂಘ ಉಪ್ಪುಂದ ಅಧ್ಯಕ್ಷ ಎಸ್‌.ಪ್ರಕಾಶ್ಚಂದ್ರ ಶೆಟ್ಟಿ ಕನ್ನಡ ತಾಯಿ ಭುವನೇಶ್ವರಿ ದಿಬ್ಬಣದ ಮೆರವಣಿಗೆಯನ್ನು ಉದ್ಘಾಟಿಸಿದರು. 

ಇಂಗ್ಲಿಷ್‌ ಮೋಹದಿಂದ ಕನ್ನಡದ ಸೊಬಗು ಕನ್ನಡಿಗರಿಗೇ ಅರಿವಾಗತ್ತಾ ಇಲ್ಲ, ಸರಕಾರಿ ಶಾಲೆಗಳನ್ನು ಉಳಿಸುವುದೆಂದರೆ ಆಂಗ್ಲ ಮಾಧ್ಯಮವನ್ನು  ಆರಂಭಿಸುವುದಲ್ಲ, ಕನ್ನಡವನ್ನು ಪರಿಣಾಮಕಾರಿಯಾಗಿ ಬೋಧನೆ ಮಾಡಲು ಕ್ರಮ ಕೈಗೊಳ್ಳಬೇಕು. ಇದು ಸಾಧ್ಯವಾಗದೇ ಕನ್ನಡ ಶಾಲೆಗಳನ್ನು ಆಂಗ್ಲ ಮಾಧ್ಯಮವನ್ನಾಗಿ   ಮಾಡುವ ಪ್ರಯತ್ನ ಮುಂದುವರಿದರೆ ಹೋರಾಟದ ಜೊತೆಗೆ  ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಿ ಕನ್ನಡದ ಉಳಿವಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಗುಡುಗಿದರು.
-ನೀಲಾವರ ಸುರೇಂದ್ರ ಅಡಿಗ, ಅಧ್ಯಕ್ಷರು ಜಿಲ್ಲಾ ಕ.ಸಾಪ. 

ಟಾಪ್ ನ್ಯೂಸ್

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agri

State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.