“ಭ್ರೂಣಲಿಂಗ ಪತ್ತೆ ಪ್ರಕರಣ ಕಡಿಮೆ; ಸಂತಸದ ಸಂಗತಿ’
Team Udayavani, Feb 27, 2019, 1:00 AM IST
ಉಡುಪಿ: ಜಿಲ್ಲೆಯಲ್ಲಿ ಭ್ರೂಣಲಿಂಗ ಪತ್ತೆ ಪ್ರಕರಣಗಳು ಕಡಿಮೆಯಾಗುತ್ತಿರುವುದು ಸಂತಸದ ಸಂಗತಿ. ಈ ಬಗ್ಗೆ ಮಾಹಿತಿ ನೀಡುವಂತಹ ಕಾರ್ಯಕ್ರಮಗಳು ಇಂತಹ ಕಾರ್ಯಾಗಾರಗಳಿಂದ ನಡೆಯಬೇಕು ಎಂದು ಜಿ.ಪಂ. ಅಧ್ಯಕ್ಷ ದಿನಕರ ಬಾಬು ಹೇಳಿದರು.
ಜಿಲ್ಲಾಡಳಿತ, ಜಿ.ಪಂ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಕ್ಷಮ ಪ್ರಾಧಿಕಾರ ಪಿಸಿ ಮತ್ತು ಪಿ.ಎನ್.ಡಿ.ಟಿ. ಉಡುಪಿ ಇದರ ಆಶ್ರಯದಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಕುರಿತು ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದಂಡ ವಿಧಿಸುವ ಅಧಿಕಾರ
ಆರೋಗ್ಯ ಅಧಿಕಾರಿ ರೋಹಿಣಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯ ಜನರಿಗೆ ಆರೋಗ್ಯದ ಬಗ್ಗೆ ಅರಿವು ಅಗತ್ಯ. ಹೆಣ್ಣು ಮಗು ಎಂದು ತಿಳಿದು ಭ್ರೂಣ ಹತ್ಯೆ ಮಾಡುವಂತಹ ಕೆಲಸ ಶಿಕ್ಷಾರ್ಹ ಅಪರಾಧವಾಗಿದೆ. ನೋಂದಾಯಿತ ವೈದ್ಯರು ಈ ಕೆಲಸ ಮಾಡಿದರೆ 3 ವರ್ಷ ಜೈಲು ಅಥವಾ 50 ಸಾವಿರ ರೂ. ದಂಡ ವಿಧಿಸುವ ಅಧಿಕಾರವೂ ಇದೆ ಎಂದರು.
ಮಹಿಳೆಯರಿಗೆ ಪ್ರೋತ್ಸಾಹ ಅಗತ್ಯ
ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಪ್ರಸೂತಿ ತಜ್ಞರಾದ ಡಾ| ಪ್ರತಾಪ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಳವಾಗಬೇಕು. ಸಮಾಜದಲ್ಲಿ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಕೆಲಸವಾಗಬೇಕು ಎಂದರು.
ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಮಾತನಾಡಿ, ಲಿಂಗತಾರತಮ್ಯದಿಂದ ಸಮಾಜದಲ್ಲಿ ಅನಾಚಾರ ಹೆಚ್ಚಾಗುತ್ತಿದೆ. ಹೆಣ್ಣುಮಕ್ಕಳು ಶೈಕ್ಷಣಿಕವಾಗಿ ಮುಂದುವರಿದರೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಸ್ತ್ರೀರೋಗ ತಜ್ಞೆ ಡಾ| ಶುಭಗೀತಾ, ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ರಾಮರಾವ್ ಉಪಸ್ಥಿತರಿದ್ದರು.
ತಾಲೂಕು ಅಧಿಕಾರಿ ನಾಗರತ್ನಾ ಸ್ವಾಗತಿಸಿದರು. ಡಾ| ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಸಿಸ್ಟೆಂಟ್ ಪ್ರೊ| ಡಾ| ರಾಜೇಂದ್ರ ಕೆ. ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.